ವಂಚನೆ ಪ್ರಕರಣ: ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ಗಳ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ

Date:

ಉದ್ಯಮಿ ಅನಿಲ್ ಅಂಬಾನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ವಂಚನೆ ಎಂದು ಬ್ಯಾಂಕುಗಳ ಒಕ್ಕೂಟ ಘೋಷಿಸಿದ ಕೆಲವೇ ದಿನಗಳ ನಂತರ ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ಗಳ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಎಲ್ಲ ಹಿಂದಿನ ಮತ್ತು ಭವಿಷ್ಯದ ಕ್ರಮಗಳಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

- Advertisement -

ಜತೆಗೆ ಬ್ಯಾಂಕುಗಳು ಕ್ರಮ ಕೈಗೊಂಡಿರುವ ಆಧಾರವೇ ‘ಸ್ಪಷ್ಟವಾಗಿ ಸಂಶಯಾಸ್ಪದ’ವಾಗಿದೆ. ವಿಚಾರಣೆ ಇಲ್ಲದೆ ಅಂತಹ ಕ್ರಮಗಳನ್ನು ಮುಂದುವರಿಸಲು ಅವಕಾಶ ನೀಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರ ಪೀಠವು ಅಭಿಪ್ರಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ತಮ್ಮ ಬ್ಯಾಂಕ್ ಖಾತೆಗಳನ್ನು ವಂಚನೆ ಖಾತೆ ಎಂದು ವರ್ಗೀಕರಿಸುವ ಬ್ಯಾಂಕ್‌ಗಳ ನಿರ್ಧಾರವನ್ನು ಪ್ರಶ್ನಿಸಿ ಅಂಬಾನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಐಡಿಬಿಐ ಬ್ಯಾಂಕ್ ಲಿಮಿಟೆಡ್ ಮತ್ತು ಬ್ಯಾಂಕ್ ಆಫ್ ಬರೋಡಾ ಈಗಾಗಲೇ ತೆಗೆದುಕೊಂಡ ಎಲ್ಲ ಕ್ರಮಗಳಿಗೆ ತಡೆ ನೀಡಿದೆ. ಅಂದರೆ ಅಂಬಾನಿಗೆ ನೀಡಲಾದ ಶೋಕಾಸ್ ನೋಟಿಸ್‌ಗಳಿಗೂ ತಡೆ ನೀಡಿದಂತಾಗಿದೆ.

ಬಿಡಿಒ ಇಂಡಿಯಾ ಸಿದ್ಧಪಡಿಸಿದ ವಿಧಿವಿಜ್ಞಾನ ಲೆಕ್ಕಪರಿಶೋಧನಾ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್ ಹೇಳಿದೆ. ವಂಚನೆ ವರ್ಗೀಕರಣದಿಂದ ಉಂಟಾಗುವ ಪರಿಣಾಮಗಳು ವಾಸ್ತವಿಕವಾಗಿ ತೀವ್ರವಾಗಿರುತ್ತದೆ. ಖಾತೆಗಳನ್ನು ಕಪ್ಪುಪಟ್ಟಿಗೆ ಸೇರಿಸುವುದು, ವರ್ಷಗಳವರೆಗೆ ಬ್ಯಾಂಕ್‌ಗೆ ಸಾಲ ನಿರಾಕರಣೆ ಮಾಡುವುದು, ಕ್ರಿಮಿನಲ್ ಎಫ್‌ಐಆರ್‌ಗಳು, ಖ್ಯಾತಿಗೆ ಹಾನಿ ಉಂಟಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಿಸಿದೆ.

ವಿಚಾರಣೆಗೆ ಅನಿಲ್ ಅಂಬಾನಿ ಸಾಕಷ್ಟು ಬಲವಾದ ವಾದವನ್ನು ಮಂಡಿಸಿದ್ದಾರೆ ಎಂದು ಹೇಳುತ್ತಾ ನ್ಯಾಯಾಲಯವು ಮಧ್ಯಂತರ ರಕ್ಷಣೆಯನ್ನು ನೀಡಿದೆ. ಆದರೆ ವಿಚಾರಣೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ರಿಲಯನ್ಸ್ ಕಮ್ಯುನಿಕೇಷನ್ಸ್ (RCom) ಮತ್ತು ಇತರ ಕಂಪನಿಗಳು ಬ್ಯಾಂಕುಗಳಿಂದ ಪಡೆದ ಸುಮಾರು ₹31,580 ಕೋಟಿ ಸಾಲವನ್ನು ಉದ್ದೇಶಿತ ಉದ್ದೇಶಕ್ಕೆ ಬಳಸದೆ, ಇತರ ಗ್ರೂಪ್ ಕಂಪನಿಗಳಿಗೆ ವರ್ಗಾಯಿಸಿವೆ ಎಂದು ಬ್ಯಾಂಕುಗಳು ಆರೋಪಿಸಿವೆ. ಈ ಸಂಬಂಧ ತನಿಖೆ ನಡೆಯುತ್ತಿದ್ದು, ಇಡಿ ಅನಿಲ್ ಅಂಬಾನಿ ಗ್ರೂಪ್‌ಗೆ ಸೇರಿದ ಒಟ್ಟು ₹10,117 ಕೋಟಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿದೆ.

ರಿಲಯನ್ಸ್ ಗ್ರೂಪ್ ಹಣಕಾಸು ಅಕ್ರಮ ನಡೆಸಲು ಅವಕಾಶ ನೀಡಿರುವುದೇ ಸರ್ಕಾರ. ಇದು ಸರ್ಕಾರದ ವೈಫಲ್ಯ ಎಂದು ವಿಪಕ್ಷಗಳು ಆರೋಪಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಿಲ್ ಅಬಾನಿಯನ್ನು “ಕ್ರೋನಿ ಕ್ಯಾಪಿಟಲಿಸ್ಟ್” ಎಂದು ಕರೆದಿದ್ದಾರೆ. ರಫೇಲ್ ಒಪ್ಪಂದ ಸೇರಿದಂತೆ ಹಲವು ಪ್ರಮುಖ ವ್ಯವಹಾರಗಳಲ್ಲಿ ಮೋದಿ ಸರ್ಕಾರ ಅನಿಲ್ ಅಂಬಾನಿಗೆ ಆದ್ಯತೆ ನೀಡಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...