ಬ್ರೇಕಿಂಗ್ ನ್ಯೂಸ್ | ಮೋದಿ ಸರ್ಕಾರದ ‘ಐಟಿ ನಿಯಮಗಳ ತಿದ್ದುಪಡಿ ಮಸೂದೆ’ ರದ್ದು; ಬಾಂಬೆ ಹೈಕೋರ್ಟ್‌ ಆದೇಶ

Date:

ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಐಟಿ ನಿಮಯಗಳಿಗೆ ಮೋದಿ ಸರ್ಕಾರ ತಂದಿದ್ದ ತಿದ್ದುಪಡಿಗಳಿಗೆ ಬಾಂಬೆ ಹೈಕೋರ್ಟ್‌ ತಡೆಯೊಡ್ಡಿದೆ.

- Advertisement -

ಸರ್ಕಾರಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿಯಂತ್ರಣದಲ್ಲಿ ಫ್ಯಾಕ್ಟ್‌ಚೆಕ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ ಮತ್ತು ಯೂಟ್ಯೂಬರ್‌ಗಳು, ಡಿಜಿಟಲ್ ಮಾಧ್ಯಮಗಳನ್ನು ನಿಯಂತ್ರಿಸುವ ಗುರಿಯೊಂದಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಐಟಿ ನಿಯಮಗಳಿಗೆ ತಿದ್ದುಪಡಿ ತಂದಿತ್ತು. ತಿಡ್ಡುಪಡಿ ಮಸೂದೆಯನ್ನು ಸಂಪುಟದಲ್ಲಿ ಅಂಗೀಕರಿಸಿತ್ತು. ಆ ಮಸೂದೆಯನ್ನು ಬಾಂಬೆ ಹೈಕೋರ್ಟ್‌ ರದ್ದುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೈಕೋರ್ಟ್‌ ಆದೇಶಕ್ಕೆ ಅಭಿನಂದನೆ ಸಲ್ಲಿಸಿರುವ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಮೋದಿ ಸರ್ಕಾರವು ಪರ್ಯಾಯ ಮಾಧ್ಯಮವನ್ನು ಮೌನಗೊಳಿಸಲು, ಕಡಿವಾಣ ಹಾಕಲು ಕಠೋರ ಐಟಿ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿತ್ತು. ಬಹುಪಾಲು ಮುಖ್ಯವಾಹಿನಿಯ ಮಾಧ್ಯಮಗಳು ಸರ್ಕಾರದ ಎಂಜಲು ನಾಯಿಗಳಾದಾಗ ಯೂಟ್ಯೂಬರ್‌ಗಳು ನೈಜ ಮಾಧ್ಯಮದ ಕೆಲಸ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸುವ ಉದ್ದೇಶವನ್ನು ಈ ಮಾಹಿತಿ ತಂತ್ರಜ್ಞಾನ ಮತ್ತು ಪ್ರಸಾಚರಣ ನಿಯಮಗಳ ತಿದ್ದುಪಡಿ ಮಸೂದೆ ಹೊಂದಿತ್ತು. ಆ ನಿಯಮಗಳನ್ನು ರದ್ದುಗೊಳಿಸಿದ ಬಾಂಬೆ ಹೈಕೋರ್ಟ್‌ಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

“ಈ ತೀರ್ಪು ಮೋದಿ ಸರ್ಕಾರವು ಡಿಜಿಟಲ್ ಮಾಧ್ಯಮದಲ್ಲಿನ ವಿಷಯವನ್ನು ನಿಯಂತ್ರಿಸಲು ಅಥವಾ ಸೆನ್ಸಾರ್ ಮಾಡಲು ಜಾರಿಗೆ ತರುತ್ತಿದ್ದ ಕ್ರಮಗಳಿಗೆ ತಡೆಯೊಡ್ಡುತ್ತದೆ. ವಿಶೇಷವಾಗಿ, ಮುಖ್ಯವಾಹಿನಿಯ ನಿರೂಪಣೆಗಳನ್ನು ಟೀಕಿಸುವ ಪರ್ಯಾಯ ಮಾಧ್ಯಮ ಮತ್ತು ಯೂಟ್ಯೂಬರ್‌ಗಳಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ. ಅವರಿಗೆ ಬೆದರಿಕೆಯೊಡ್ಡುವ ಮಸೂದೆಗೆ ತಡೆಯೊಡ್ಡಿದೆ” ಎಂದು ನೆಟ್ಟಿಗ ಅಫ್ರಿನ್ ಎಂಬವರು ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...