ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ ರದ್ದು ಕೋರಿಕೆ ಅರ್ಜಿಯ ತೀರ್ಪು ಕಾಯ್ದಿರಿಸಿದ ಬಾಂಬೆ ಹೈಕೋರ್ಟ್

Date:

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.

- Advertisement -

​ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದೆ.
​
2018ರ ಸೆಪ್ಟೆಂಬರ್‌ನಲ್ಲಿ ರಾಜಸ್ಥಾನದಲ್ಲಿ ನಡೆದಿದ್ದ ಚುನಾವಣಾ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ಬಿಜೆಪಿ ಸದಸ್ಯ ಮಹೇಶ್ ಹುಕುಂಚಂದ್ ಶ್ರಿಮಾಲ್ ಎಂಬುವರು ಮಾನನಷ್ಟ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಬಹುತ್ವದ ಬುಡಕ್ಕೇ ಕೊಡಲಿಪೆಟ್ಟು: ಸಮಾಜವನ್ನು ಆವರಿಸುತ್ತಿರುವ ಅಸಹಿಷ್ಣುತೆಯ ಕಾರ್ಮೋಡ

ಈ ಹೇಳಿಕೆಯಿಂದಾಗಿ ಪ್ರಧಾನಿ ಮೋದಿ ಅವರನ್ನು ಸಾಮಾಜಿಕ ಜಾಲತಾಣಗಳು ಹಾಗೂ ವಿವಿಧ ಸುದ್ದಿ ವಾಹಿನಿಗಳಲ್ಲಿ ಟ್ರೋಲ್ ಮಾಡಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಇದನ್ನು ಆಧರಿಸಿ ಗಿರ್ಗಾಂವ್‌ನಲ್ಲಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 2019ರ ಆಗಸ್ಟ್ 28ರಂದು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. 2021ರ ಜುಲೈನಲ್ಲಿ ಸಮನ್ಸ್ ತಲುಪಿದ ಬಳಿಕ ರಾಹುಲ್ ಗಾಂಧಿ ಅವರು ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...