ಆಸ್ಟ್ರೇಲಿಯಾ ದಾಳಿಯ ಒಬ್ಬಾತ ಹೈದರಾಬಾದ್‌ ಮೂಲದವ; ತೆಲಂಗಾಣ ಪೊಲೀಸರ ಮಾಹಿತಿ

Date:

ಆಸ್ಟ್ರೇಲಿಯಾದ ಸಿಡ್ನಿಯ ಬಾಂಡಿ ಬೀಚ್‌ನಲ್ಲಿ ಹನುಕ್ಕಾ ಹಬ್ಬದ ಸಂಭ್ರಮಾಚರಣೆಯ ವೇಳೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಭಾಗಿಯಾದ ಇಬ್ಬರು ಉಗ್ರರ ಪೈಕಿ, ಪ್ರಮುಖ ಆರೋಪಿ ಹೈದರಾಬಾದ್ ಮೂಲದವನು ಎಂಬ ಆಘಾತಕಾರಿ ಸತ್ಯವನ್ನು ತೆಲಂಗಾಣ ಪೊಲೀಸರು ಮಂಗಳವಾರ ಖಚಿತಪಡಿಸಿದ್ದಾರೆ.

- Advertisement -

​ಈ ದಾಳಿಯಲ್ಲಿ 15 ಮಂದಿ ಬಲಿಯಾಗಿದ್ದು, ಪ್ರತಿದಾಳಿಯಲ್ಲಿ ಹತ್ಯೆಯಾದ ಸಾಜಿದ್ ಅಕ್ರಮ್ (50) ಹೈದರಾಬಾದ್‌ನ ಮೆಹದೀಪಟ್ಟಣಂ ನಿವಾಸಿ ಎಂದು ಗುರುತಿಸಲಾಗಿದೆ. ಆತನೊಂದಿಗೆ ದಾಳಿಯಲ್ಲಿ ಭಾಗಿಯಾಗಿ ಗಾಯಗೊಂಡಿರುವ ಆತನ ಪುತ್ರ ನವೀದ್ ಅಕ್ರಮ್ (24), ಆಸ್ಟ್ರೇಲಿಯಾದಲ್ಲಿಯೇ ಜನಿಸಿದ ಆಸ್ಟ್ರೇಲಿಯನ್ ಪ್ರಜೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

​ಯಾರು ಈ ಸಾಜಿದ್?
ಸಾಜಿದ್ ಅಕ್ರಮ್ ಹೈದರಾಬಾದ್‌ನಲ್ಲಿ ಬಿ.ಕಾಂ ಪದವಿ ಪೂರೈಸಿದ್ದ. ಬಳಿಕ ಉದ್ಯೋಗ ನಮಿತ್ತ 1998ರ ನವೆಂಬರ್‌ನಲ್ಲಿ ವಿದ್ಯಾರ್ಥಿ ವೀಸಾದಡಿ ಆಸ್ಟ್ರೇಲಿಯಾಕ್ಕೆ ತೆರಳಿದ್ದ. ಅಲ್ಲಿಯೇ ಯುರೋಪಿಯನ್ ಮೂಲದ ಮಹಿಳೆಯನ್ನು ವಿವಾಹವಾಗಿ ಕಾಯಂ ಆಗಿ ನೆಲೆಸಿದ್ದ. ಈತನಿಗೆ ನವೀದ್ ಎಂಬ ಮಗ ಮತ್ತು ಒಬ್ಬ ಮಗಳಿದ್ದಾರೆ. ಸಾಜಿದ್ ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದರೂ, ಆತನ ಮಕ್ಕಳು ಆಸ್ಟ್ರೇಲಿಯಾದ ಪೌರತ್ವ ಹೊಂದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಡ್ಯದ ಹೆಣ್ಣು ಭ್ರೂಣ ಹತ್ಯೆ ಮತ್ತು ಹೆಣ್ಣು ಸಿಗದ ಯುವಕರ ಹತಾಶೆ
​
ಊರಿನ ನಂಟು ಕಡಿದುಕೊಂಡಿದ್ದ
‘ಸಾಜಿದ್ ಕಳೆದ 27 ವರ್ಷಗಳಲ್ಲಿ ಕೇವಲ ಆರು ಬಾರಿ ಮಾತ್ರ ಭಾರತಕ್ಕೆ ಭೇಟಿ ನೀಡಿದ್ದ. ಆಸ್ತಿ ವಿಲೇವಾರಿ ಮತ್ತು ಪೋಷಕರನ್ನು ನೋಡುವ ಸಲುವಾಗಿ ಆತ ಹೈದರಾಬಾದ್‌ಗೆ ಬರುತ್ತಿದ್ದನೇ ಹೊರತು, ಇಲ್ಲಿನ ಸ್ಥಳೀಯರೊಂದಿಗೆ ಅಥವಾ ಸ್ನೇಹಿತರೊಂದಿಗೆ ಹೆಚ್ಚಿನ ಒಡನಾಟ ಹೊಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
​
ಸ್ಥಳೀಯ ಸಂಪರ್ಕ ಇಲ್ಲ
‘ಆರೋಪಿಗಳಿಬ್ಬರ ಉಗ್ರಗಾಮಿ ಮನಸ್ಥಿತಿಗೆ ಹೈದರಾಬಾದ್ ಅಥವಾ ತೆಲಂಗಾಣದ ಯಾವುದೇ ಸ್ಥಳೀಯ ಪ್ರಭಾವ ಕಾರಣವಲ್ಲ. ಸಾಜಿದ್ ಭಾರತ ಬಿಡುವ ಮುನ್ನ ಆತನ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳು ದಾಖಲಾಗಿರಲಿಲ್ಲ. ಕುಟುಂಬಸ್ಥರಿಗೂ ಆತನ ಉಗ್ರ ಚಟುವಟಿಕೆಗಳ ಬಗ್ಗೆ ಮಾಹಿತಿ ಇರಲಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
​
ಭಾನುವಾರ ಸಿಡ್ನಿಯ ಬಾಂಡಿ ಬೀಚ್‌ನಲ್ಲಿ ಯಹೂದಿಗಳ ‘ಹನುಕ್ಕಾ’ ಹಬ್ಬದ ಆಚರಣೆ ನಡೆಯುತ್ತಿದ್ದ ವೇಳೆ ನುಗ್ಗಿದ ತಂದೆ–ಮಗ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...