‘ಮೋದಿಯವರೇ ಬನ್ನಿ, ನಾನು ನನ್ನ ಡಿಗ್ರಿ ಸರ್ಟಿಫಿಕೇಟ್ ತೋರಿಸ್ತೀನಿ, ನೀವೂ ತೋರಿಸಿ’: ದೀಪ್ಕೆ ಸವಾಲು

Date:

‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮ್ಮ ಬಾಸ್ಟನ್ ವಿಶ್ವವಿದ್ಯಾಲಯದ ಶಿಕ್ಷಣದ ಕುರಿತು ಎದ್ದಿರುವ ವಿವಾದದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. “ಬನ್ನಿ, ಇಬ್ಬರೂ ನಮ್ಮ ಪದವಿ ಪ್ರಮಾಣಪತ್ರಗಳನ್ನು (ಡಿಗ್ರಿ) ಜಗತ್ತಿಗೆ ತೋರಿಸುವ ಮೂಲಕ ಈ ವಿವಾದಕ್ಕೆ ಅಂತ್ಯ ಹಾಡೋಣ” ಎಂದು ಅವರು ಆಹ್ವಾನಿಸಿದ್ದಾರೆ.

- Advertisement -

​ತಮ್ಮ ಪದವಿ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಎಕ್ಸ್ (ಟ್ವಿಟರ್) ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ದೀಪ್ಕೆ, “ನನ್ನ ಡಿಗ್ರಿಯನ್ನು ನೋಡಲು ಜನರಿಗೆ ತಾಳ್ಮೆ ಇಲ್ಲದಂತಾಗಿದೆ. ಆದರೆ, ಕಳೆದ 12 ವರ್ಷಗಳಿಂದ ಪ್ರಧಾನಮಂತ್ರಿಯವರ ಡಿಗ್ರಿಯನ್ನು ನೋಡದೆ ಜನ ಹೇಗೆ ಸುಮ್ಮನಿದ್ದಾರೆ ಎಂಬುದು ಆಶ್ಚರ್ಯ ತರಿಸುತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ, ತಾವು ಬಾಸ್ಟನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಕ್ಕೆ ಪುರಾವೆಯಾಗಿ, ‘BUComGrad’ ಎಂಬ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದ ಆಫ್ಟರ್‌ಪಾರ್ಟಿಯ ವಿಡಿಯೊವೊಂದನ್ನು ದೀಪ್ಕೆ ಹಂಚಿಕೊಂಡಿದ್ದು, ಅದರಲ್ಲಿ ಅವರು ಜನರೊಂದಿಗೆ ಸಂವಾದ ನಡೆಸುತ್ತಿರುವುದು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

​ಇತ್ತೀಚೆಗೆ ಪಾಡ್‌ಕಾಸ್ಟರ್ ಪ್ರಖರ್ ಗುಪ್ತಾ ಅವರು ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರೊಂದಿಗಿನ ಸಂವಾದದ ವೇಳೆ ದೀಪ್ಕೆ ಅವರ ಶೈಕ್ಷಣಿಕ ಅರ್ಹತೆಯನ್ನು ಪ್ರಶ್ನಿಸಿದ್ದರು. “ನನ್ನ ಸ್ನೇಹಿತನೊಬ್ಬ ಬಾಸ್ಟನ್ ವಿಶ್ವವಿದ್ಯಾಲಯದಲ್ಲಿ ಓದಿದ್ದು, ಆತ ದೀಪ್ಕೆ ಅವರ ದಾಖಲೆಗಳನ್ನು ಪರಿಶೀಲಿಸಿದಾಗ ಅವರು ಅಲ್ಲಿಂದ ಪದವಿ ಪಡೆದಿರುವ ಬಗ್ಗೆ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗಿಲ್ಲ” ಎಂದು ಗುಪ್ತಾ ಆರೋಪಿಸಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

​ಈ ಆರೋಪಗಳಿಗೆ ತಿರುಗೇಟು ನೀಡುವ ಭರದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ದೀಪ್ಕೆ, “ಪ್ರಧಾನಿಯವರ ಪದವಿ ವಿವರಗಳನ್ನು ಬಹಿರಂಗಪಡಿಸಲು ದೆಹಲಿ ಹೈಕೋರ್ಟ್ ಏಕೆ ನಿರಾಕರಿಸಿತು? ಐಟಿ ಸೆಲ್‌ನವರ ಪ್ರಚಾರದ ಪ್ರಕಾರ, ಡಿಗ್ರಿ ತೋರಿಸದವರೆಲ್ಲರೂ ವಂಚಕರು ಮತ್ತು ಸುಳ್ಳುಗಾರರು ಎಂದಾದರೆ, ಈ ನಿಯಮ ಎಲ್ಲರಿಗೂ ಅನ್ವಯಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

​ಇದಕ್ಕೂ ಮುನ್ನ ದೀಪ್ಕೆ ಅವರ ಶಿಕ್ಷಣದ ಹಣಕಾಸು ಮೂಲದ ಬಗ್ಗೆಯೂ ಆಕ್ಷೇಪಗಳು ಕೇಳಿಬಂದಿದ್ದವು. ಸೂರತ್ ಮೂಲದ ಆರ್‌ಟಿಐ ಕಾರ್ಯಕರ್ತ ಅಮಿತ್ ತಿವಾರಿ ಎಂಬುವವರು, “ಮಹಾರಾಷ್ಟ್ರದ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (MIDC) ಕಿರಿಯ ಎಂಜಿನಿಯರ್ ಆಗಿದ್ದ ದೀಪ್ಕೆ ಅವರ ತಂದೆ ಭಗವಾನ್‌ರಾವ್ ಅವರು ಪಡೆಯುತ್ತಿದ್ದ 60-65 ಸಾವಿರ ರೂಪಾಯಿ ಸಂಬಳದಲ್ಲಿ ಮಗನಿಗೆ ಅಮೆರಿಕದಲ್ಲಿ ಶಿಕ್ಷಣ ಕೊಡಿಸಲು ಹೇಗೆ ಸಾಧ್ಯವಾಯಿತು?” ಎಂದು ಪ್ರಶ್ನಿಸಿದ್ದರು. ಜೊತೆಗೆ, ಸಿಜೆಪಿ ಪಕ್ಷದ ನಿಧಿ ಬಳಕೆಯ ಬಗ್ಗೆಯೂ ತನಿಖೆ ನಡೆಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ದೂರು ನೀಡಿದ್ದರು.

​ಈ ಎಲ್ಲಾ ಹಣಕಾಸಿನ ಆರೋಪಗಳನ್ನು ಹಿರಿಯ ಪತ್ರಕರ್ತೆ ಬರ್ಖಾ ದತ್ ಅವರೊಂದಿಗಿನ ಸಂದರ್ಶನದಲ್ಲಿ ಸಾರಾಸಗಟಾಗಿ ತಳ್ಳಿಹಾಕಿದ್ದ ಅಭಿಜೀತ್ ದೀಪ್ಕೆ, ಬಾಸ್ಟನ್ ವಿಶ್ವವಿದ್ಯಾಲಯವು ತಮಗೆ ವಿದ್ಯಾರ್ಥಿವೇತನ (ಸ್ಕಾಲರ್‌ಶಿಪ್) ನೀಡಿತ್ತು ಎಂದು ಸ್ಪಷ್ಟಪಡಿಸಿದ್ದರು. “ನನ್ನ ಶಿಕ್ಷಣವನ್ನು ಸ್ಕಾಲರ್‌ಶಿಪ್ ಮೂಲಕ ಭರಿಸಲಾಗಿದೆ ಹಾಗೂ ತಾನು ಶೈಕ್ಷಣಿಕ ಸಾಲವನ್ನೂ ಪಡೆದಿದ್ದು, ಅದನ್ನು ಈಗ ಮರುಪಾವತಿಸುತ್ತಿದ್ದೇನೆ” ಎಂದು ಹೇಳಿದ್ದ ಅವರು, ಸಂದರ್ಶನದಲ್ಲಿ ತಮ್ಮ ವಿದ್ಯಾರ್ಥಿವೇತನದ ಪತ್ರವನ್ನೂ ಪ್ರದರ್ಶಿಸಿದ್ದರು.

​ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಸಿಜೆಪಿ ವಕ್ತಾರೆ ವೈಷ್ಣವಿ ಗೌರ್, “ಖಾಸಗಿ ವ್ಯಕ್ತಿಯೊಬ್ಬರ ಶಿಕ್ಷಣದ ಖರ್ಚು-ವೆಚ್ಚಗಳ ಬಗ್ಗೆ ಆರ್‌ಟಿಐ ಹಾಕುವವರು ಒಮ್ಮೆ ‘ಪಿಎಂ ಕೇರ್ಸ್’ (PM CARES) ನಿಧಿಯ ಕಡೆಗೂ ಕಣ್ಣುಹಾಯಿಸಬೇಕು. ಚಿಂತಿಸಬೇಡಿ, ಮೋದಿ ಜಿ ನಿಮ್ಮನ್ನೂ ಕ್ಷಮಿಸುತ್ತಾರೆ” ಎಂದು ಎಕ್ಸ್‌ನಲ್ಲಿ ಆಡಳಿತಾರೂಢ ವ್ಯವಸ್ಥೆಗೆ ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...