ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ಎರಡೂ ಎಂಜಿನ್‌ಗಳು ಸ್ಥಗಿತ: ಏರ್‌ ಇಂಡಿಯಾ ದುರಂತದ ತನಿಖಾ ವರದಿ

Date:

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಬಿಡುಗಡೆಯಾಗಿದ್ದು, ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ.

- Advertisement -

ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾದ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ 242 ರಲ್ಲಿ 241 ಜನರು ಸೇರಿದಂತೆ ಕನಿಷ್ಠ 270 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ತನಿಖಾ ವರದಿ ಬಿಡುಗಡೆಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ನಿಗೂಢ ಸಾವು; ಮತ್ತೆ ಮುನ್ನೆಲೆಗೆ

ಶನಿವಾರ(ಜುಲೈ 12) ಬೆಳಗಿನ ಜಾವ 1 ಗಂಟೆಯ ನಂತರ ವರದಿ ಬಿಡುಗಡೆಯಾಗಿದೆ. ಹಲವು ಆಘಾತಕಾರಿ ಮಾಹಿತಿಗಳು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.

ಟೇಕ್-ಆಫ್ ಆದಾಗಲೇ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿದ್ದು ಇಂಧನ ಪೂರೈಕೆಯೂ ನಿಂತಿದೆ. ಕಾಕ್‌ಪಿಟ್ ಧ್ವನಿ ರೆಕಾರ್ಡಿಂಗ್‌ನಲ್ಲಿ ಒಬ್ಬ ಪೈಲಟ್ “ನೀವು ಏಕೆ ಕಟ್‌ಆಫ್ ಮಾಡಿದ್ದೀರಿ” ಎಂದು ಪ್ರಶ್ನಿಸಿರುವುದು, ಇನ್ನೊಬ್ಬ ಪೈಲಟ್ “ನಾನು ಮಾಡಲಿಲ್ಲ” ಎಂದು ಉತ್ತರಿಸಿರುವುದು ಕೇಳಿಬಂದಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಮಾನದಲ್ಲಿ ಸಂಪೂರ್ಣ ಶಕ್ತಿ ಮತ್ತು ಒತ್ತಡದ ಕೊರತೆ ಕಂಡುಬಂದಿದೆ ಎನ್ನಲಾಗಿದೆ.

“ವಿಮಾನ ನಿಲ್ದಾಣದಿಂದ ಪಡೆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ರಾಮ್ ಏರ್ ಟರ್ಬೈನ್ (RAT) ಅನ್ನು ನಿಯೋಜಿಸಲಾಗುತ್ತಿರುವುದನ್ನು ತೋರಿಸಿದೆ. ವಿಮಾನ ಹಾರಾಟ ಮಾರ್ಗದಲ್ಲಿ ಯಾವುದೇ ಪಕ್ಷಿಗಳು ಹಾರಾಡುವುದು ಕಂಡುಬಂದಿಲ್ಲ. ವಿಮಾನ ನಿಲ್ದಾಣದ ಪರಿಧಿಯ ಗೋಡೆಯನ್ನು ದಾಟುವ ಮೊದಲು ಮತ್ತೆ ಕೆಳಕ್ಕಿಳಿಯಲು ಪ್ರಾರಂಭಿಸಿದೆ” ಎಂದು ವರದಿ ಹೇಳಿದೆ.

ಎರಡೂ ಎಂಜಿನ್‌ಗಳು ಅಥವಾ ವಿದ್ಯುತ್ ಸರಬರಾಜು ನಿಂತಾಗ ರಾಮ್ ಏರ್ ಟರ್ಬೈನ್ ಸ್ವಯಂಚಾಲಿತವಾಗಿ ಸಕ್ರಿಯಗೊಳ್ಳುತ್ತದೆ. ಇದು ವಿಮಾನ ಎತ್ತರದಲ್ಲೇ ಇರಲು ಸಹಾಯ ಮಾಡುತ್ತದೆ. ವಿದ್ಯುತ್ ಉತ್ಪಾದಿಸಲು ಗಾಳಿಯ ವೇಗವನ್ನು ಬಳಸುತ್ತದೆ.

ವಿಮಾನವು ಕೇವಲ 32 ಸೆಕೆಂಡುಗಳ ಕಾಲ ಮಾತ್ರ ಗಾಳಿಯಲ್ಲಿ ಹಾರಿದ್ದು ವಿಮಾನ ನಿಲ್ದಾಣದ ಸಮೀಪವಿರುವ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್‌ಗೆ ಅಪ್ಪಳಿಸಿದ್ದು ಕೇವಲ 0.9 ನಾಟಿಕಲ್ ಮೈಲುಗಳಷ್ಟು ಹಾರಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...