ಅಶ್ಲೀಲ ಸಿನಿಮಾ ನೋಡಿದ ಬಾಲಕನಿಂದ ತಂಗಿಯ ಮೇಲೆ ಅತ್ಯಾಚಾರ, ಕೊಲೆ; ತಾಯಿ ಸೇರಿ ನಾಲ್ವರ ಬಂಧನ

Date:

ಅಶ್ಲೀಲ ವಿಡಿಯೋಗಳನ್ನು ನೋಡಿ ಅಪ್ರಾಪ್ತ ಬಾಲಕನೊಬ್ಬ ತನ್ನ ತಂಗಿಯ ಮೇಲೆಯೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಪ್ರಕರಣವನ್ನು ಮುಚ್ಚಿಹಾಕಲು ಆತನ ತಾಯಿ ಮತ್ತು ಸಹೋದರಿಯರು ಸಹಕಾರ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಘಟನೆ ಏಪ್ರಿಲ್ 24ರಂದು ನಡೆದಿದ್ದು, ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ತೀವ್ರ ವಿಚಾರಣೆ ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ಭೇಸಿದಿದ್ದು, 13 ವರ್ಷದ ಆರೋಪಿ ಬಾಲಕ, ಆತನ ತಾಯಿ ಮತ್ತು ಇಬ್ಬರು ಹಿರಿಯ ಸಹೋದರಿಯರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಪ್ರಕರಣದ ಬಗ್ಗೆ ವಿವರಣೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್, “ಜಾವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಿದಾಗ ಬಾಲಕ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡಿದ ಬಳಿಕ ತನ್ನ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ಬಗ್ಗೆ ತಂದೆಗೆ ಹೇಳುವುದಾಗಿ ಸಂತ್ರಸ್ತೆ ಹೇಳಿದ್ದು, ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ” ಎಂದು ಹೇಳಿದ್ದಾರೆ.

“ಕೊಲೆ ಮಾಡಿದ ಬಳಿಕ ತನ್ನ ತಾಯಿಗೆ ಕೃತ್ಯದ ಬಗ್ಗೆ ಹೇಳಿಕೊಂಡಿದ್ದಾನೆ. ಸಂತ್ರಸ್ತೆಯನ್ನು ಗಮನಿಸಿದಾಗ, ಆಕೆ ಇನ್ನೂ ಜೀವಂತ ಇದ್ದುದ್ದನ್ನು ಕಂಡು, ಮತ್ತೆ ಆಕೆಯ ಕತ್ತು ಹಿಸುಕಿ ಕೊಂದಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

“ಏಪ್ರಿಲ್ 24ರಂದು ಬೆಳಗ್ಗೆ ಪೊಲೀಸರಿಗೆ ಮಾಹಿತಿ ಬಂದಿದ್ದು, ಬಾಲಕಿಯ ಮೃತದೇಹವನ್ನು ಅವರ ಮನೆಯಿಂದ ವಶಕ್ಕೆ ಪಡೆಯಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಪುರಾವೆಗಳು ಕಂಡುಬಂದಿವೆ. ತನಿಖೆಗಾಗಿ ಎಸ್‌ಐಟಿ ತಂಡವನ್ನು ರಚಿಸಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

“ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಉದ್ದೇಶದಿಂದ ಬಾಲಕಿ ವಿಷಕಾರಿ ಕೀಟ ಕಚ್ಚಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದರು. ಮನೆಯವರನ್ನು ಹೊರತುಪಡಿಸಿ ಬೇರೆ ಯಾರೂ ಮನೆಗೆ ಬಂದಿರುವ ಯಾವುದೇ ಕುರುಹುಗಳು ಕಂಡುಬಂದಿಲ್ಲ ಎಂಬುದು ತನಿಖೆ ವೇಳೆ ತಿಳಿದುಬಂದಿದೆ” ಎಂದು ಅವರು ತಿಳಿಸಿದ್ದಾರೆ.

“ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಿ 50 ಜನರ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಕುಟುಂಬ ಸದಸ್ಯರ ಹೇಳಿಕೆಗಳಲ್ಲಿ ಪದೇ ಪದೇ ಬದಲಾವಣೆಗಳು ಇದ್ದುದ್ದನ್ನು ಪೊಲೀಸರು ಕಂಡುಕೊಂಡಿದ್ದಾರೆ. ಅನುಮಾನಗೊಂಡು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಕುಟುಂಬದವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ” ಎಂದು ಎಸ್‌ಪಿ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...