VIRAL VIDEO | ಬಿಜೆಪಿಗೆ 8 ಬಾರಿ ಮತ ಹಾಕಿದ ವಿಡಿಯೋ ಹಂಚಿಕೊಂಡ 17ರ ಬಾಲಕ ಪೊಲೀಸ್ ವಶಕ್ಕೆ

Date:

Advertisements

ಉತ್ತರ ಪ್ರದೇಶದ ಫರೂಕಾಬಾದ್ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮೇ 13ರಂದು ಗ್ರಾಮ ಪ್ರಧಾನರ 17 ವರ್ಷದ ಪುತ್ರ ಬಿಜೆಪಿಗೆ 8 ಬಾರಿ ಮತ ಹಾಕಿ ಅದರ ವಿಡಿಯೋವನ್ನು ಹಂಚಿಕೊಂಡಿದ್ದು, ಬಾಲಕನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಪಕ್ಷ ನಾಯಕರು ತನಿಖೆಗೆ ಆಗ್ರಹಿಸಿದ್ದಾರೆ. ಈ ಬೆನ್ನಲ್ಲೇ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ಭಾನುವಾರ ತಡ ರಾತ್ರಿ ಪೊಲೀಸರು ಬಾಲಕನನ್ನು ವಶಕ್ಕ ಪಡೆದಿದ್ದಾರೆ.

ಇದನ್ನು ಓದಿದ್ದೀರಾ?  VIRAL VIDEO | ಬಿಜೆಪಿಗೆ 8 ಬಾರಿ ಮತ ಹಾಕಿರುವುದನ್ನು ರೆಕಾರ್ಡ್ ಮಾಡಿಕೊಂಡ ಯುವಕ: ತನಿಖೆಗೆ ಒತ್ತಾಯಿಸಿದ ‘ಇಂಡಿಯಾ’ ಒಕ್ಕೂಟ  

Advertisements

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ವಯನಾಡು ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಎಕ್ಸ್ ಹ್ಯಾಂಡಲ್ ಈ ಎರಡು ನಿಮಿಷ, 19 ಸೆಕೆಂಡುಗಳ ವೀಡಿಯೊವನ್ನು ಹಂಚಿಕೊಂಡು ತನಿಖೆಗೆ ಆಗ್ರಹಿಸಿದ್ದಾರೆ.

ಆರೋಪಿ ಬಾಲಕ ವಿವಿಧ ಗುರುತಿನ ಚೀಟಿಗಳನ್ನು ತೋರಿಸಿ ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರ ಫೋಟೋ ಮತ್ತು ಕಮಲದ ಚಿಹ್ನೆ ಇರುವ ಇವಿಎಂ ಬಟನ್ ಅನ್ನು ಒತ್ತಿರುವುದು ಮತ್ತು ಒಟ್ಟಾಗಿ ಎಂಟು ಬಾರಿ ಒತ್ತಿರುವುದು ಈ ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿದ್ದೀರಾ?  ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಇಟಾಹ್ ಜಿಲ್ಲೆಯ ನಯಾಗಾಂವ್ ಪೊಲೀಸ್ ಠಾಣೆಯಲ್ಲಿ ಬಾಲಕ ರಾಜನ್ ಸಿಂಗ್ ಠಾಕೂರ್ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಫರೂಕಾಬಾದ್‌ನಲ್ಲಿ ಅನಿಲ್ ಸಿಂಗ್ ಠಾಕೂರ್ ಅವರ ಪುತ್ರ ಆಗಿದ್ದು, ಅನಿಲ್ ಬಿಜೆಪಿ ಮುಖಂಡರಾಗಿದ್ದಾರೆ.

ಇನ್ನು ಉತ್ತರ ಪ್ರದೇಶ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ ಅವರು ಮರು ಮತದಾನಕ್ಕೆ ಶಿಫಾರಸು ಮಾಡಿದ್ದಾರೆ. ಫರೂಕಾಬಾದ್ ಜಿಲ್ಲಾ ಚುನಾವಣಾಧಿಕಾರಿ ನಯಾಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

ಲಿಂಗ ತಾರತಮ್ಯ | ಮಹಿಳೆಯರಿಗಿಂತ ಅಧಿಕ ವೇತನ ಪಡೆಯುತ್ತಾರೆ ಪುರುಷ ನರ್ಸ್‌ಗಳು: ಅಧ್ಯಯನ ವರದಿ

ನರ್ಸಿಂಗ್ ಅನ್ನು ಹೆಚ್ಚಾಗಿ ಮಹಿಳೆಯರ ವೃತ್ತಿ ಎಂಬಂತೆ ನೋಡಲಾಗುತ್ತದೆ. ಆದ್ದರಿಂದಾಗಿ ಪುರುಷರು...

Download Eedina App Android / iOS

X