ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ವಿವಾದಾತ್ಮಕ ಬಂಧನ ಪ್ರಕರಣದಲ್ಲಿ ಬಾಲಾಜಿ ಅವರ ಪತ್ನಿ ಸಲ್ಲಿಸಿರುವ ಹೆಬಿಯಸ್ ಕಾರ್ಪಸ್ ಅರ್ಜಿ ಕುರಿತು ಮದ್ರಾಸ್ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ದ್ವಂದ್ವ ತೀರ್ಪು ನೀಡಿದೆ.
ಹೆಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಗೆ ನ್ಯಾಯಮೂರ್ತಿ ನಿಶಾ ಬಾನು ಜಿ ಒಪ್ಪಿಗೆ ನೀಡಿದ್ದರೆ, ನ್ಯಾಯಮೂರ್ತಿ ಭರತ್ ಚಕ್ರವರ್ತಿ ಭಿನ್ನ ತೀರ್ಪು ನೀಡಿದ್ದು, ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಜೂನ್ 14ರ ಮಧ್ಯ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದಾರೆ. ಸೆಂಥಿಲ್ ಅವರಿಗೆ ಹೃದಯಾಘಾತವಾಗಿದ್ದು, ಬೈಪಾಸ್ ಸರ್ಜನಿ ಮಾಡಲಾಗಿದೆ. ತಮ್ಮ ಪತಿಯನ್ನು ಹುಡುಕಿಕೊಡಿ ಎಂದು ಸೆಂಥಿಲ್ ಅವರ ಪತ್ನಿ ಮದ್ರಾಸ್ ಹೈಕೋರ್ಟ್‌ನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.