BRICS Summit-2026 | 7 ವರ್ಷಗಳ ಬಳಿಕ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಭಾರತಕ್ಕೆ

Date:

ಭಾರತ-ಚೀನಾ ಸಂಬಂಧದಲ್ಲಿ ಸುಧಾರಣೆಯ ಪ್ರಯತ್ನಗಳು ನಡೆಯುತ್ತಿರುವ ನಡುವೆಯೇ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸುತ್ತಿದ್ದಾರೆ. ಸೆಪ್ಟೆಂಬರ್‌ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್‌ ಶೃಂಗಸಭೆ (Brics Summit – 2026)ಯಲ್ಲಿ ಅವರು ಭಾಗವಹಿಸಲಿದ್ದಾರೆ.

- Advertisement -

ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದಿಂದ ಹಲವು ವರ್ಷಗಳಿಂದ ಉಭಯ ದೇಶಗಳ ಸಂಬಂಧದಲ್ಲಿ ಉದ್ವಿಗ್ನತೆ ಮುಂದುವರೆದಿತ್ತು. ಇದೀಗ ದ್ವಿಪಕ್ಷೀಯ ಸಂಬಂಧವನ್ನು ಹಂತಹಂತವಾಗಿ ಸುಧಾರಿಸುವ ಹಾಗೂ ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆ ಕಾಯ್ದುಕೊಳ್ಳುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಿನ್‌ಪಿಂಗ್ ಅವರ ಭಾರತ ಪ್ರವಾಸ ಮಹತ್ವ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ವರದಿಗಳ ಪ್ರಕಾರ, ಕ್ಸಿ ಜಿನ್‌ಪಿಂಗ್‌ ಅವರು ಈ ಬಾರಿ ದೊಡ್ಡ ಪ್ರಮಾಣದ ನಿಯೋಗದೊಂದಿಗೆ ಭಾರತಕ್ಕೆ ಆಗಮಿಸಲಿದ್ದಾರೆ. 2019ರಲ್ಲಿ ಅವರು ಭಾರತಕ್ಕೆ ಭೇಟಿ ನೀಡಿದ್ದಾಗ ಅವರೊಂದಿಗೆ 200ಕ್ಕೂ ಕಡಿಮೆ ಮಂದಿ ಚೀನಾದ ಅಧಿಕಾರಿಗಳು ಬಂದಿದ್ದರು. ಆದರೆ ಈ ಬಾರಿ ಸುಮಾರು 400 ಅಧಿಕಾರಿಗಳು ಅವರ ನಿಯೋಗದಲ್ಲಿರಬಹುದು ಎಂದು ಈ ಹಿಂದೆ ಭಾರತೀಯ ಅಧಿಕಾರಿಗಳು ತಿಳಿಸಿದ್ದರು.

ಚೀನಾದ ವಿದೇಶಾಂಗ ಸಚಿವಾಲಯವೂ ಕ್ಸಿ ಅವರ ಭಾರತ ಪ್ರವಾಸವನ್ನು ಖಚಿತಪಡಿಸಿದೆ. “ಚೀನಾ ಬ್ರಿಕ್ಸ್‌ ಸಹಕಾರಕ್ಕೆ ಹೆಚ್ಚಿನ ಮಹತ್ವ ನೀಡುತ್ತದೆ. ಪ್ರಸ್ತುತ ಬ್ರಿಕ್ಸ್‌ ಅಧ್ಯಕ್ಷ ಸ್ಥಾನ ಹೊಂದಿರುವ ಭಾರತ ಈ ವರ್ಷದ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಲು ಚೀನಾ ಬೆಂಬಲ ನೀಡುತ್ತದೆ” ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: BRICS ಶೃಂಗಸಭೆ | ಭಾರತಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್‌ ಭೇಟಿ?

ಕಳೆದ ತಿಂಗಳು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರು ಬೀಜಿಂಗ್‌ನಲ್ಲಿ ಚೀನಾ ಉಪಾಧ್ಯಕ್ಷ ಹಾನ್‌ ಝೆಂಗ್‌ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಮುಂದುವರಿಸುವುದು ಸೇರಿದಂತೆ ಆರ್ಥಿಕ, ರಾಜಕೀಯ ಹಾಗೂ ಬಹುಪಕ್ಷೀಯ ವೇದಿಕೆಗಳಲ್ಲಿ ಭಾರತ-ಚೀನಾ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆದಿತ್ತು. ಕ್ಸಿ ಜಿನ್‌ಪಿಂಗ್‌ ಅವರ ಈ ಭೇಟಿ ಭಾರತ-ಚೀನಾ ಸಂಬಂಧದಲ್ಲಿ ಮುಂದಿನ ಹಂತದ ಬೆಳವಣಿಗೆಗಳಿಗೆ ವೇದಿಕೆ ಸಿದ್ಧಪಡಿಸಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...