ಬ್ರಿಜ್‌ಭೂಷಣ್ ಖುಲಾಸೆ: ತೀರ್ಪಿನ ವಿರುದ್ಧ ಮೇಲ್ಮನವಿಗೆ ಕುಸ್ತಿಪಟುಗಳ ನಿರ್ಧಾರ, ಹೋರಾಟ ಮುಂದುವರಿಕೆ

Date:

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾಜಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರನ್ನು ಖುಲಾಸೆಗೊಳಿಸಿರುವ ದೆಹಲಿ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿನೇಶ್ ಫೋಗಟ್ ಹಾಗೂ ಇತರ ಮಹಿಳಾ ಕುಸ್ತಿಪಟುಗಳು ನಿರ್ಧರಿಸಿದ್ದಾರೆ.

- Advertisement -

ಆಗಸ್ಟ್ 3ರ ಸೋಮವಾರದಂದು ದೆಹಲಿ ನ್ಯಾಯಾಲಯವು ಈ ಪ್ರಕರಣದಲ್ಲಿ ಮಾಜಿ ಸಂಸದ ಬ್ರಿಜ್‌ಭೂಷಣ್ ಮತ್ತು ಅವರ ಸಹಾಯಕ ವಿನೋದ್ ತೋಮರ್ ಅವರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ತೀರ್ಪಿಗೆ ಪ್ರತಿಕ್ರಿಯಿಸಿರುವ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದು, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ವಕೀಲರಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. “ಮಹಿಳಾ ಕುಸ್ತಿಪಟುಗಳು ಈ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸಲು ತಮ್ಮ ವಕೀಲರಿಗೆ ಸೂಚಿಸಿದ್ದಾರೆ, ಮತ್ತು ಇದನ್ನು ಆದಷ್ಟು ಬೇಗ ಮಾಡಲಾಗುವುದು. ನಾವು ಭರವಸೆ ಕಳೆದುಕೊಂಡಿಲ್ಲ, ಕುಸ್ತಿಪಟುಗಳು ತಮ್ಮ ಹೋರಾಟವನ್ನು ಮುಂದುವರಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.

“ಆಡಳಿತ ಪಕ್ಷದ ಪ್ರಭಾವಿ ನಾಯಕನ ವಿರುದ್ಧ ಬೀದಿಗಿಳಿದು ಎಫ್‌ಐಆರ್ ದಾಖಲಿಸಲು ನಮಗೆ ಸಾಕಷ್ಟು ಧೈರ್ಯ ಬೇಕಾಯಿತು. ಬ್ರಿಜ್‌ಭೂಷಣ್ ತನ್ನ ಅಧಿಕಾರ ಮತ್ತು ತೋಳ್ಬಲವನ್ನು ಬಳಸಿ ಅನೇಕ ಹುಡುಗಿಯರನ್ನು ಬೆದರಿಸಿ, ಅವರು ತಮ್ಮ ಹೆಸರುಗಳನ್ನು ಹಿಂಪಡೆಯುವಂತೆ ಮಾಡಿದರು. ಆದರೂ, ಅನೇಕ ಮಹಿಳಾ ಕುಸ್ತಿಪಟುಗಳು ಎದೆಗುಂದದೆ ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ವಿರುದ್ಧ ಹೋರಾಡಿದರು. ಆದರೆ, ಮಹಿಳಾ ಕುಸ್ತಿಪಟುಗಳು ಹೊರಿಸಿದ್ದ ಲೈಂಗಿಕ ದೌರ್ಜನ್ಯದ ಆರೋಪಗಳಲ್ಲಿ ನ್ಯಾಯಾಲಯವು ಬ್ರಿಜ್‌ಭೂಷಣ್ ಅವರನ್ನು ದೋಷಿಯಲ್ಲ ಎಂದು ತೀರ್ಪು ನೀಡಿರುವುದು ನಮಗೆ ತೀವ್ರ ಬೇಸರ ತರಿಸಿದೆ,” ಎಂದು ವಿನೇಶ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸರ್ಕಾರ ಮತ್ತು ಇಡೀ ವ್ಯವಸ್ಥೆಯು ಬ್ರಿಜ್‌ಭೂಷಣ್ ಅವರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, “ಆರಂಭದಿಂದಲೂ ಇಡೀ ವ್ಯವಸ್ಥೆ ಮತ್ತು ಸರ್ಕಾರವು ಬ್ರಿಜ್‌ಭೂಷಣ್ ಅವರನ್ನು ರಕ್ಷಿಸುವ ಕೆಲಸವನ್ನೇ ಮಾಡುತ್ತಾ ಬಂದಿವೆ,” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2016 ರಿಂದ 2019ರ ನಡುವೆ ಭಾರತೀಯ ಕುಸ್ತಿ ಫೆಡರೇಶನ್ (WFI) ಕಚೇರಿಯಲ್ಲಿ, ಬ್ರಿಜ್‌ಭೂಷಣ್ ಅವರ ಅಧಿಕೃತ ನಿವಾಸದಲ್ಲಿ ಮತ್ತು ವಿದೇಶ ಪ್ರವಾಸಗಳ ಸಂದರ್ಭದಲ್ಲಿ ಅಪ್ರಾಪ್ತೆ ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಾಗಿರುವ ಬ್ರಿಜ್‌ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ 2023ರಲ್ಲಿ ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಮತ್ತು ಸಂಗೀತಾ ಫೋಗಟ್ ಸೇರಿದಂತೆ ಹಲವಾರು ಖ್ಯಾತ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ತಿಂಗಳುಗಳ ಕಾಲ ಧರಣಿ ಕೂತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...