ರೈತ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ದೇಶದ ರೈತರು ಒಗ್ಗಟ್ಟಾಗಿ ಹೋರಾಡಬೇಕು; ಬೃಂದಾ ಕಾರಟ್‌

Date:

ಜನವಿರೋಧಿ, ರೈತವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ದೇಶದ ರೈತರು ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಸಂಸದೆ ಹಾಗೂ ಸಿಪಿಎಂ ನಾಯಕಿ ಬೃಂದಾ ಕಾರಟ್‌ ಕರೆ ನೀಡಿದ್ದಾರೆ.

- Advertisement -

ಅಖಿಲ ಭಾರತ ಕಿಸಾನ್‌ ಸಭಾದ (AIKS) 36ನೇ ರಾಷ್ಟ್ರೀಯ ಸಮ್ಮೇಳನದ ಅಂಗವಾಗಿ ತೆಲಂಗಾಣದ ನಲ್ಗೊಂಡಾದಲ್ಲಿ ನಡೆದ ಬೃಹತ್‌ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಭಗವಾನ್‌ ಬಿರ್ಸಾ ಮುಂಡಾ ಅವರ 151ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆದಿವಾಸಿ ಸ್ವಾತಂತ್ರ್ಯ ಹೋರಾಟಗಾರನಿಗೆ ಗೌರವ ಸಲ್ಲಿಸಿ, ನೀರು, ಅರಣ್ಯ ಮತ್ತು ಭೂಮಿ ಹಕ್ಕುಗಳಿಗಾಗಿ ಬಿರ್ಸಾ ಮುಂಡಾ ನಡೆಸಿದ ಹೋರಾಟವನ್ನು ಮುಂದುವರಿಸುವಂತೆ ರೈತರಿಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ ಮೇಲೆ ಕಾಣುವ ಒಂದೊಂದು ಕ್ಷಣದ ಹಿಂದೆಯೂ ನಿರ್ದೇಶಕ ಮತ್ತು ತಂತ್ರಜ್ಞರ ದೀರ್ಘ ಶ್ರಮ, ಆರ್ಥಿಕ ಮಿತಿಗಳು ಹಾಗೂ ತಾಂತ್ರಿಕ ಸವಾಲುಗಳಿರುತ್ತವೆ....

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

ಕಾರ್ಪೊರೇಟ್‌ ಮತ್ತು ಕೋಮುವಾದಿ ಧೋರಣೆಯುಳ್ಳ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೃಂದಾ ಕಾರಟ್‌, ಸರ್ಕಾರವು ಸಂವಿಧಾನ ಮತ್ತು ಜಾತ್ಯಾತೀತ ಮೌಲ್ಯಗಳನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ಅಲ್ಲದೆ, ರೈತರೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ದೇಶದ ಕೃಷಿ ಕ್ಷೇತ್ರವನ್ನು ದೇಶಿ ಮತ್ತು ವಿದೇಶಿ ಕೃಷಿ ಉದ್ಯಮ ಕಂಪನಿಗಳ ಹಿಡಿತಕ್ಕೆ ಒಪ್ಪಿಸುತ್ತಿದೆ ಎಂದು ಆರೋಪಿಸುತ್ತಾ, ಈ ಒಪ್ಪಂದವನ್ನು ತಕ್ಷಣವೇ ತಡೆಹಿಡಿಯುವಂತೆ ಆಗ್ರಹಿಸಿದರು.

ಭೂಸುಧಾರಣೆಯನ್ನು ಬಲಪಡಿಸುವ ಅಗತ್ಯವಿದ್ದು, ಭೂಮಿಯ ಗರಿಷ್ಠ ಮಿತಿ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಹೆಚ್ಚುವರಿ ಭೂಮಿಯನ್ನು ಬಡವರಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಕೃಷಿ ಕ್ಷೇತ್ರದಲ್ಲಿ ಮಹಿಳೆಯರನ್ನು ಕಡೆಗಣಿಸಲಾಗುತ್ತಿದ್ದು, ಮಹಿಳೆಯರನ್ನು ವೇತನವಿಲ್ಲದ ಕುಟುಂಬದ ಸಹಾಯಕರು ಎಂದು ಪರಿಗಣಿಸುವ ಬದಲು, ಅವರನ್ನೂ ರೈತರೆಂದು ಸರ್ಕಾರ ಗುರುತಿಸಬೇಕು. ಭೂಮಿಯ ಮಾಲೀಕತ್ವದಲ್ಲಿ ಮಹಿಳೆಯರಿಗೆ ಸಮಾನ ಹಕ್ಕು ನೀಡಬೇಕು ಹಾಗೂ ಸರ್ಕಾರಿ ಕಲ್ಯಾಣ ಯೋಜನೆಗಳ ಸೌಲಭ್ಯಗಳಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ: ಎಲ್.ಎಚ್. ಅರುಣ್‌ ಕುಮಾ‌ರ್

ಮಕ್ಕಳು ದೇಶದ ಭವಿಷ್ಯ, ಸಮಾಜದ ಆಶಾಕಿರಣ ಇಂದಿನ ಮಕ್ಕಳು ಹೇಗಿರುತ್ತಾರೋ ನಾಳೆ...

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಸತತ...

ಮತದಾರ ನೋಂದಣಿಗೆ ಫಾರ್ಮ್- 6 ತುಂಬಿದವರಿಗೆ ಶಿಕ್ಷೆ ಇಲ್ಲ- ಸುಪ್ರೀಮ್’ಗೆ ಚುನಾವಣಾ ಆಯೋಗದ ನಿವೇದನೆ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ...