ಮುರಿದ ಮೂಳೆಗಳು ಸರಿಹೋಗಬಹುದು, ನುಚ್ಚುನೂರಾದ ಕನಸುಗಳನ್ನು ಸರಿಪಡಿಸಲು ಸಾಧ್ಯವೇ: ರಾಹುಲ್ ಗಾಂಧಿ ಪ್ರಶ್ನೆ

Date:

ಬಿಹಾರದಲ್ಲಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಹಾಗೂ ಗುಂಡಿನ ದಾಳಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಆಡಳಿತಾವಧಿಯಲ್ಲಿ ಯುವಕರ ಧ್ವನಿಯನ್ನು ಅಡಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -

ಇತ್ತೀಚೆಗೆ ಬಿಹಾರದ ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ವಿದ್ಯಾರ್ಥಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ ವೀಡಿಯೊವನ್ನು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, “ದೇಹದ ಮುರಿದ ಮೂಳೆಗಳನ್ನು ವೈದ್ಯರು ಸರಿಪಡಿಸಬಹುದು, ಆದರೆ ಯುವಕರ ನುಚ್ಚುನೂರಾದ ಕನಸುಗಳನ್ನು ಮರಳಿ ತರಲು ಸಾಧ್ಯವೇ” ಎಂದು ಸರ್ಕಾರದ ಆಡಳಿತ ವ್ಯವಸ್ಥೆಯನ್ನು ನೇರವಾಗಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಇದನ್ನೂ ಓದಿ: ತುಮಕೂರು | ರಾಹುಲ್‌ಗಾಂಧಿ ಮೇಲಿನ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬಿಹಾರದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳು, ವಿಳಂಬ ಮತ್ತು ಪಾರದರ್ಶಕತೆಯ ಕೊರತೆಯನ್ನು ಪ್ರಶ್ನಿಸಿ ಯುವಕರು ಮತ್ತು ಉದ್ಯೋಗಾಕಾಂಕ್ಷಿಗಳು ಸುದೀರ್ಘ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಬಲಪ್ರಯೋಗ ಮಾಡಿದ್ದು, ಸೀವಾನ್ ಸೇರಿದಂತೆ ಹಲವೆಡೆ ಎಕೆ-47 ನಿಂದಲೂ ಗುಂಡು ಹಾರಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ವಿದ್ಯಾರ್ಥಿಗಳ ಸ್ಥಿತಿಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, “ದೇಶ ಸೇವೆಗಾಗಿ ಸೈನ್ಯ ಸೇರುವ ಕನಸು ಕಂಡಿದ್ದ ಯುವಕನೊಬ್ಬನ ಕಾಲಿಗೆ ಎಕೆ-47 ಗುಂಡು ತಗಲಿ ಆತನ ಭವಿಷ್ಯದ ಕನಸು ನುಚ್ಚುನೂರಾಗಿದೆ. ಶಿಕ್ಷಣ, ಉದ್ಯೋಗ ಮತ್ತು ಜವಾಬ್ದಾರಿಯುತ ಆಡಳಿತವನ್ನು ಕೇಳಿದ್ದೇ ಆ ವಿದ್ಯಾರ್ಥಿಗಳು ಮಾಡಿದ ಅಪರಾಧವೇ” ಎಂದು ಪ್ರಶ್ನಿಸಿದ್ದಾರೆ.

“ಯುವಕರ ಮೇಲೆ ದೌರ್ಜನ್ಯ ಎಸಗಿ ಕೇವಲ ಕೆಳಹಂತದ ಅಧಿಕಾರಿಗಳನ್ನು ಅಮಾನತುಗೊಳಿಸುವುದರಿಂದ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ. ಯುವಕರ ಧ್ವನಿಯನ್ನು ಹತೋಟಿಗೆ ತರಲು ಯತ್ನಿಸುತ್ತಿರುವ ಆಡಳಿತಾರೂಢ ಸರ್ಕಾರಕ್ಕೆ ಜನತೆ ಶೀಘ್ರದಲ್ಲೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ರಾಹುಲ್ ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ ಈ ತಪ್ಪು ಮಾಡಬೇಡಿ!

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...