ಆಘಾತಕಾರಿ ಘಟನೆ | ಒಂದು ಕೋಟಿ ರೂ. ಇನ್ಶುರೆನ್ಸ್‌ ಹಣಕ್ಕಾಗಿ ತಂಗಿಯನ್ನೇ ಕೊಂದ ಅಣ್ಣ

Date:

ಯುವತಿಯ ಹೆಸರಿನಲ್ಲಿ ಮಾಡಿಸಲಾಗಿದ್ದ ಇನ್ಶುರೆನ್ಸ್‌ನಿಂದ ಹಣ ಪಡೆಯುವುದಕ್ಕಾಗಿ ಯುವಕನೊಬ್ಬ ಆಕೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಆರೋಪಿ ಮಾಲಪತಿ ಅಶೋಕ್ ಕುಮಾರ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ರಿಯಲ್ ಎಸ್ಟೇಟ್‌ ಉದ್ಯಮಿ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಆರೋಪಿ ಅಶೋಕ್ ರೆಡ್ಡಿಯ ತಂಗಿ ಹೆಸರಿನಲ್ಲಿ 1 ಕೋಟಿ ರೂ. ಮೌಲ್ಯದ ವಿಮೆ ಮಾಡಿಸಲಾಗಿತ್ತು. ಆ ವಿಮೆ ಹಣವನ್ನು ಪಡೆಯುವುದಕ್ಕಾಗಿ ತಂಗಿಯನ್ನೇ ಅಶೋಕ್‌ ರೆಡ್ಡಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಶೋಕ್ ರೆಡ್ಡಿಯ ತಂಗಿಗೆ ವಿವಾಹವಾಗಿದ್ದು, ಗಂಡನಿಂದ ದೂರು ಉಳಿದಿದ್ದರು. ವಿಚ್ಛೇದನ ಪಡೆದಿದ್ದರು. ಮಕ್ಕಳೂ ಇಲ್ಲದ ಕಾರಣ ಏಕಾಂಗಿ ಜೀವನ ನಡೆಸುತ್ತಿದ್ದರು. ಅವರ ಜೀವನ ನಿರ್ವಹಣೆಗೆ ಅಶೋಕ್ ರೆಡ್ಡಿ ಸಹಾಯ ಮಾಡಿದ್ದ ಎಂದು ಹೇಳಲಾಗಿದೆ.

ಸಾಲಬಾಧೆಗೆ ಸಿಲುಕಿದ್ದ ಅಶೋಕ್ ರೆಡ್ಡಿ, ತನ್ನ ತಂಗಿಯನ್ನು ಕೊಂದು ವಿಮೆ ಹಣವನ್ನು ಪಡೆಯಲು ಸಂಚು ರೂಪಿಸಿದ್ದನು. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪವೊಡ್ಡಿ ತನ್ನ ಕಾರಿನಲ್ಲಿ ಕೊರೆದೊಯ್ದಿದ್ದಾನೆ. ಆಸ್ಪತ್ರೆಯಲ್ಲಿ ತಪಾಸಣೆ ಮುಗಿಸಿ, ಹಿಂದಿರುಗುವಾಗ ಆಕೆಗೆ ನಿದ್ರೆ ಮಾತ್ರೆಗಳನ್ನು ಕೊಟ್ಟು, ಹತ್ಯೆಗೈದಿದ್ದಾರೆ. ಪ್ರಕರಣವನ್ನು ಅಪಘಾತವೆಂದು ಬಿಂಬಿಸಲು ಕೂಡ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಪ್ರಕರಣದ ಸತ್ಯಾಸತ್ಯೆತೆಯನ್ನು ಬೇಧಿಸಿದ್ದಾರೆ. ಆಶೋಕ್ ರೆಡ್ಡಿಯೇ ಆಕೆಯನ್ನು ಕೊಲೆ ಮಾಡಿದ್ಧಾನೆ ಎಂದು ಕಂಡುಹಿಡಿದಿದ್ದಾರೆ. ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 120 (ಬಿ), 302, ಮತ್ತು 201 ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಮತ್ತೆ ನೆಲಕ್ಕುರುಳಿದ ಕಟ್ಟಡ; ಅವಶೇಷಗಳಡಿ ಜೀವಗಳಿಗಾಗಿ ಶೋಧ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕಟ್ಟಡ ಕುಸಿತದ ಆತಂಕ ಎದುರಾಗಿದೆ. ಈಶಾನ್ಯ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...