ಭೂ ವಿವಾದದಲ್ಲಿ ಸಹೋದರರ ಹತ್ಯೆ; ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

Date:

10 ವರ್ಷಗಳ ಹಿಂದೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಸಹೋದರರನ್ನು ಕೊಂದಿದ್ದ ಕುಟುಂಬವೊಂದರ 13 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸಹರಾನ್‌ಪುರ ನ್ಯಾಯಾಲಯವು ಆದೇಶ ಹೊರಡಿಸಿದೆ.

- Advertisement -

ಉತ್ತರ ಪ್ರದೇಶದ ಸಹರಾನ್‌ಪುರದ ನಿವಾಸಿಗಳಾಗಿದ್ದ ಯಾಸಿನ್ ಮತ್ತು ತಾಸಿನ್ ಎಂಬ ಸಹೋದರರು ಮತ್ತು ಪ್ರಮುಖ ಅಪರಾಧಿ ಮುನಾವರ್ ಕುಟುಂಬದ ನಡುವೆ 20 ಬಿಫಾ ಜಮೀನಿನ ವಿಚಾರವಾಗಿ ಗಲಾಟೆ ನಡೆದಿತ್ತು. 2016ರ ನವೆಂಬರ್ 12ರಂದು ಯಾಸಿನ್ ಮತ್ತು ತಾಸಿನ್ ಅವರನ್ನು ಮುನಾವರ್ ಕುಟುಂಬವು ಹತ್ಯೆಗೈದಿತ್ತು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಯಾಸಿನ್ ಅವರ ಪುತ್ರ ಇಸ್ರಾರ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮುನಾವರ್ ಸೇರಿದಂತೆ ಆತನ ಕುಟುಂಬದ 13 ಮಂದಿಯನ್ನು ಬಂಧಿಸಿದ್ದರು. ಆರೋಪಿಗಳ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸಹರಾನ್‌ಪುರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿಕಾಸ್ ಗುಪ್ತಾ ಅವರು ಅಪರಾಧಿಗಳಾದ ಮುನಾವರ್, ಮುಸ್ತಫಾ, ಸನಾವರ್, ಸ್ಟಾಕೀಮ್, ಶೌಕೀನ್ ಮತ್ತು ಮೊಹ್ಸಿನ್, ಅನ್ವರ್, ಇಸ್ಲಾಂ, ಗುಲ್ಜಾರ್, ಜಮ್ಶೆಡ್, ಪರ್ವೇಜ್, ಅನ್ವರ್ ಹಾಗೂ ಶಕೀಬ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಜೊತೆಗೆ, 10.73 ಲಕ್ಷ ರೂ. ದಂಡವನ್ನು ವಿಧಿಸಿ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...