ದಲಿತ ವಿದ್ಯಾರ್ಥಿಗಳ ಮೇಲೆ ಭೀಕರ ಹಲ್ಲೆ; ಶಿಕ್ಷಕಿ ಅಮಾನತು

Date:

ದಲಿತ ವಿದ್ಯಾರ್ಥಿಗಳ ಮೇಲೆ ಭೀಕರ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಕುರವಾಲಿ ಡೆವಲಪ್‌ಮೆಂಟ್ ಬ್ಲಾಕ್‌ನ ರೀಚ್‌ಪುರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

- Advertisement -

ಸುಮಾರು 10 ದಿನಗಳ ಹಿಂದೆ ಈ ಘಟನೆ ನಡೆದಿದ್ದರೂ ಗುರುವಾರವಷ್ಟೇ ಪ್ರಕರಣ ಬೆಳಕಿಗೆ ಬಂದಿತ್ತು. ಮಕ್ಕಳ ಮೈಮೇಲೆ ಗಾಯಗಳಿರುವುದನ್ನು ಗಮನಿಸಿದ ಪೋಷಕರು ಆತಂಕಗೊಂಡು ವಿಚಾರಿಸಿದಾಗ ನಿರಂತರವಾಗಿ ಹಲ್ಲೆ ನಡೆಸುತ್ತಿರುವುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಮಕ್ಕಳ ಮೈಮೇಲೆ ಗಾಯಗಳಿರುವ ವಿಡಿಯೊವೊಂದು ಕಳೆದ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. “1 ರಿಂದ 8ನೇ ತರಗತಿಯ ಮಕ್ಕಳಿಗೆ ಪಾಠ ಮಾಡುವ, 40 ವರ್ಷ ವಯಸ್ಸಿನ ಅನಿತಾ ಗುಪ್ತಾ ಅವರು ಕ್ಷುಲ್ಲಕ ವಿಷಯಗಳ ಕಾರಣಕ್ಕೆ ಯಾವಾಗಲೂ ನಮ್ಮ ಮಕ್ಕಳನ್ನು ಹೊಡೆಯುತ್ತಾರೆ. ಈ ರೀತಿಯ ವರ್ತನೆ ಪುನರಾವರ್ತನೆಯಾಗುತ್ತಲೇ ಇದೆ” ಎಂದು ಪೋಷಕರು ಹೇಳಿದ್ದಾರೆ.

‘ಮೇಡಂ ನಮ್ಮ ಮೇಲೆ ತುಂಬಾ ಕೋಪ ಮಾಡಿಕೊಳ್ಳುತ್ತಾರೆ’ ಎಂದು ದಲಿತ ವಿದ್ಯಾರ್ಥಿಯೊಬ್ಬ ತಿಳಿಸಿದ್ದಾನೆ. ‘ಜಾತಿಯ ಕಾರಣಕ್ಕಾಗಿಯೇ ಆರು-ಏಳು ದಲಿತ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಶಿಕ್ಷಕಿ ಅನಿತಾ ಗುಪ್ತಾ ಥಳಿಸುತ್ತಿದ್ದಳು’ ಎಂಬ ಆರೋಪ ಬಂದಿದೆ.

ಇದನ್ನೂ ಓದಿರಿ: ನೆಲಮಂಗಲ | ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ, 6 ಮಂದಿ ದಾರುಣ ಸಾವು

ತರಗತಿ ವೇಳೆ ದಲಿತ ವಿದ್ಯಾರ್ಥಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು, ತಾರತಮ್ಯ ಮಾಡುವುದು ಈ ಶಿಕ್ಷಕಿಯ ಛಾಳಿಯಾಗಿದೆ ಎಂಬುದು ಪತ್ರಿಕಾ ವರದಿಗಳಿಂದ ಹೊರಬಿದ್ದಿದೆ. ‘ನಮ್ಮ ಮಕ್ಕಳನ್ನು ಅಸ್ಪೃಶ್ಯರೆಂದು ಪರಿಗಣಿಸಿ ಆಕೆ ಥಳಿಸುತ್ತಾಳೆ’ ಎಂದು ಒಬ್ಬ ವಿದ್ಯಾರ್ಥಿಯ ತಂದೆ ಅಮರ್ ಸಿಂಗ್ ನೋವು ತೊಡಿಕೊಂಡಿದ್ದಾರೆ.

ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ತನಿಖೆ ಆರಂಭಿಸಿದೆ. ವಿದ್ಯಾರ್ಥಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ‘ಜಾತಿವಾದಿ ನಿಂದನೆಗಳನ್ನು ಸಮರ್ಥಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ’ ಎಂದೂ ಅಧಿಕಾರಿಗಳು ಹೇಳಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇವಾ ಅವಧಿಯಲ್ಲಾದ ದೈಹಿಕ ಸಮಸ್ಯೆಯು ‘ಸೇವಾ ಸಂಬಂಧಿ’ ಎಂದೇ ಪರಿಗಣಿತ: ಸುಪ್ರೀಂ ಕೋರ್ಟ್

ಸೇನಾ ಪಡೆಗೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಯಾವುದೇ ದೈಹಿಕ ಅಥವಾ ಮಾನಸಿಕ ಅನಾರೋಗ್ಯ...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...

‘ನಾನೇ ಬುರುಡೆ ಒಡೆದಿದ್ದು’ ಎಂದಾತನಿಗೆ ಜಾಮೀನು; ಪುರಾವೆ ಇಲ್ಲದಿದ್ದರೂ ವರ್ಷಗಳಿಂದ ಜೈಲಿನಲ್ಲಿದ್ದಾರೆ ಹೋರಾಟಗಾರರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ...