ಬಿಹಾರ | ಹೆಸರು ಕೇಳಿದ ನಂತರ ಮುಸ್ಲಿಂ ವ್ಯಾಪಾರಿಯನ್ನು ಚಿತ್ರಹಿಂಸೆ ಮಾಡಿ ಕೊಲೆಗೈದ ಗುಂಪು

Date:

ಗುಂಪೊಂದು ಅಡ್ಡಗಟ್ಟಿ ಹೆಸರು ಮತ್ತು ಧರ್ಮವನ್ನು ಕೇಳಿದ ನಂತರ ನಡೆದ ಭೀಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮುಸ್ಲಿಂ ಸಮುದಾಯದ ಬಟ್ಟೆ ವ್ಯಾಪಾರಿಯೊಬ್ಬರು ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿರುವ ಘಟನೆ ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದಿದೆ.
​
ಮೃತರನ್ನು ಗಗನ್ ದಿವಾನ್ ಗ್ರಾಮದ ನಿವಾಸಿ ಮೊಹಮ್ಮದ್ ಅತರ್ ಹುಸೇನ್ ಎಂದು ಗುರುತಿಸಲಾಗಿದೆ. ಇವರು ಸೈಕಲ್ ಮೇಲೆ ಊರೂರು ತಿರುಗಿ ಬಟ್ಟೆ ವ್ಯಾಪಾರ ಮಾಡುತ್ತಿದ್ದರು.
​
ಡಿಸೆಂಬರ್ 5ರಂದು ರೋಹ್ ಪೊಲೀಸ್ ಠಾಣಾ ವ್ಯಾಪ್ತಿಯ ಭಟ್ಟಾಪುರ ಗ್ರಾಮದ ಬಳಿ ಹುಸೇನ್ ಅವರ ಸೈಕಲ್ ಪಂಕ್ಚರ್ ಆಗಿತ್ತು. ಅವರು ರಿಪೇರಿ ಅಂಗಡಿಯನ್ನು ಹುಡುಕುತ್ತಿದ್ದಾಗ, ಗ್ರಾಮಸ್ಥರ ಗುಂಪೊಂದು ಅವರನ್ನು ತಡೆದಿದೆ. ಹುಸೇನ್ ಅವರ ಸಹೋದರ ಮೊಹಮ್ಮದ್ ಶಕಿಬ್ ಆಲಂ ಅವರು ಮಾಧ್ಯಮಗಳಿಗೆ ನೀಡಿದ ಮಾಹಿತಿಯ ಪ್ರಕಾರ, ದುಷ್ಕರ್ಮಿಗಳು ಮೊದಲು ಹುಸೇನ್ ಅವರ ಹೆಸರು ಮತ್ತು ಉದ್ಯೋಗವನ್ನು ಕೇಳಿದ್ದಾರೆ. ನಂತರ ಸುಮಾರು 15 ರಿಂದ 20 ಜನರಿದ್ದ ಗುಂಪು ಅವರ ಮೇಲೆ ಮುಗಿಬಿದ್ದಿದೆ.

- Advertisement -

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!
​
ದಾಳಿಕೋರರು ಹುಸೇನ್ ಅವರ ಕಿವಿಯನ್ನು ಸೀಳಿದ್ದಲ್ಲದೆ, ಕಾದ ಕಬ್ಬಣಿದ ಸಲಾಕೆಯಿಂದ ಬರೆ ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರದ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಹುಸೇನ್, “ತನ್ನನ್ನು ಬೆತ್ತಲೆಗೊಳಿಸಿ ಪರಿಶೀಲಿಸಲಾಯಿತು ಮತ್ತು ಬಳಿಯಿದ್ದ 18,000 ರೂ. ಹಣವನ್ನು ದೋಚಲಾಯಿತು” ಎಂದು ಹೇಳಿಕೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪಾವಾಪುರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಶುಕ್ರವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.
​
ಹುಸೇನ್ ಪತ್ನಿ ಶಬ್ನಮ್ ಪರ್ವೀನ್ ನೀಡಿದ ದೂರಿನನ್ವಯ 10 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರಂಭದಲ್ಲಿ ಗಲಭೆ ಮತ್ತು ಹಲ್ಲೆಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಕೊಲೆ ಪ್ರಕರಣವನ್ನಾಗಿ ಬದಲಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಈಗಾಗಲೇ ಆರು ಜನರನ್ನು ಬಂಧಿಸಿ, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ನವಾಡ ಎಸ್ಪಿ ಅಭಿನವ್ ಧಿಮಾನ್ ತಿಳಿಸಿದ್ದಾರೆ.
​
ಮತ್ತೊಂದೆಡೆ, ಆರೋಪಿಗಳಲ್ಲಿ ಒಬ್ಬರಾದ ಸಿಕಂದರ್ ಯಾದವ್ ಎಂಬುವರು, “ಹುಸೇನ್ ಕಳ್ಳತನಕ್ಕೆ ಯತ್ನಿಸಿದ್ದರು,” ಎಂದು ಆರೋಪಿಸಿ ಪ್ರತಿದೂರು ನೀಡಿದ್ದಾರೆ. ಪೊಲೀಸರು ಎರಡೂ ದೂರುಗಳ ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...