ಇಬ್ಬರು ಸಹೋದರರ ಬರ್ಬರ ಹತ್ಯೆ; ಬೆಚ್ಚಿಬೀಳಿಸಿದ ವಿಡಿಯೋ

Date:

ಇಬ್ಬರು ಸಹೋದರರನ್ನು ಕತ್ತಿ, ಕೊಡಲಿ ಹಾಗೂ ದೊಣ್ಣೆಗಳಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ಶಹದೋಲ್‌ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಜನಾಕ್ರೋಶ ಮತ್ತು ಭೀತಿಗೆ ಕಾರಣವಾಗಿದೆ.

- Advertisement -

ಶಹದೋಲ್‌ನ ಬಲ್ಬಹರಾ ಗ್ರಾಮದಲ್ಲಿ ಅಕ್ಟೋಬರ್ 21ರಂದು ತಡರಾತ್ರಿ ಘಟನೆ ನಡೆದಿದೆ. ಮೂವರು ಸಹೋದರರು ಕುಳಿತಿದ್ದ ಆಟೋ ಪಾರ್ಟ್ಸ್‌ ಅಂಗಡಿಗೆ ಪ್ರಮುಖ ಆರೋಪಿ ಅನುರಾಗ್ ಶರ್ಮಾ ಮತ್ತು ಆತನ ಗುಂಪು ನುಗ್ಗಿದ್ದು, ಏಕಾಏಕಿ ಹಲ್ಲೆ ನಡೆಸಿದ್ದು, ಇಬ್ಬರನ್ನು ಬರ್ಬರವಾಗಿ ಕೊಂದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಸುಮಾರು 10 ಮಂದಿ ದಾಳಿಕೋರರ ಗುಂಪು ಕತ್ತಿ, ಕೊಡಲಿ ಮತ್ತು ದೊಣ್ಣೆಗಳಿಂದ ಶಸ್ತ್ರಸಜ್ಜಿತರಾಗಿ ಅಂಗಡಿಗೆ ನುಗ್ಗಿದರು. ಅಂಗಡಿಯ ಬಾಗಿಲು ಮುರಿದು ಸಹೋದರರನ್ನು ಹೊರಗೆಳೆದು ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದರು” ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ವರದಿಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ದಾಳಿಕೋರರು ಸಂತ್ರಸ್ತರ ಕೈಕಾಲುಗಳನ್ನು ಮುರಿದಿರುವುದು ಕಂಡುಬಂದಿದೆ.

ಸಂತ್ರಸ್ತ ಸಹೋದರರಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರನ್ನು ಶಹದೋಲ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಎರಡನೇ ಸಹೋದರ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. 3ನೇ ಸಹೋದರ ಸತೀಶ್‌ ಪರಿಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತಮ್ಮ ಮೇಲೆ ದಾಳಿಕೋರರು ದಾಳಿ ನಡೆಸಲು ಆರಂಭಿಸಿದಾಗ ಸಂತ್ರಸ್ತರು ನಿರಂತರವಾಗಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಆದರೆ, ಗಂಟೆಗಟ್ಟಲೆ ದಾಳಿಗಳು ನಡೆದಿರೂ, ಪೊಲೀಸರು ಸ್ಥಳಕ್ಕೆ ಧಾವಿಸಲಿಲ್ಲ. ನೆರವಿಗೆ ಬರಲಿಲ್ಲ ಎಂದು ಸಂತ್ರಸ್ತರ ಕುಟುಂಬಸ್ಥರು ಆರೋಪಿಸಿದ್ದಾರೆ. ಕೇಶವಿ ಪೊಲೀಸ್ ಹೊರಠಾಣೆಯ ಉಸ್ತುವಾರಿ ಆಶಿಶ್ ಝಾರಿಯಾ ಅವರ ಮೇಲೆ ನಿರ್ಲಕ್ಷ್ಯ ಮತ್ತು ಪಿತೂರಿ ಆರೋಪ ಮಾಡಲಾಗಿದೆ.

ಈ ಲೇಖನ ಓದಿದ್ದೀರಾ?: ತೆರಿಗೆ ಹಂಚಿಕೆ | ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಭಾರೀ ಅನ್ಯಾಯ? ಕೇಂದ್ರದ ಸಮರ್ಥನೆಗೆ ರಾಜ್ಯ ಬಿಜೆಪಿ ಸಿದ್ದ

ಕರ್ತವ್ಯಲೋಪ ಎಸಗಿದ ಪೊಲೀಸರು ಹಾಗೂ ಕೃತ್ಯ ಎಸಗಿದ ಆರೋಪಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದುಃಖಿತ ಕುಟುಂಬ, ಸಂಬಂಧಿಕರು ಹಾಗೂ ಗ್ರಾಮಸ್ಥರು ಅಕ್ಟೋಬರ್ 22 ರಂದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ಕೇಶವಿ ಹೊರಠಾಣೆ ಉಸ್ತುವಾರಿ ಆಶಿಶ್ ಅವರನ್ನು ಅಮಾನತುಗೊಳಿಸಲಾಗಿದೆ.

ಇಲ್ಲಿಯವರೆಗೆ ಪ್ರಮುಖ ಆರೋಪಿ ಅನುರಾಗ್‌ ಶರ್ಮಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶರ್ಮಾ ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇತರರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಸಂತ್ರಸ್ತ ಸಹೋದರರು ಮತ್ತು ಆರೋಪಿಗಳ ನಡುವೆ ಹಳೆಯ ಭೂ ವಿವಾದವಿತ್ತು. ಅದೇ ಕಾರಣಕ್ಕೆ, ಆರೋಪಿಗಳು ಈ ಕ್ರೌರ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...