HIV ಸೋಂಕಿತನೆಂಬ ಕಾರಣಕ್ಕೆ BSF ಯೋಧ ವಜಾ; ಸೇನೆಯ ಆದೇಶ ರದ್ದುಗೊಳಿಸಿದ ಹೈಕೋರ್ಟ್

Date:

ಹೆಚ್‌ಐವಿ ಸೋಂಕಿತ ಎಂಬ ಕಾರಣಕ್ಕೆ ಬಿಎಸ್‌ಎಫ್‌ ಯೋಧನನ್ನು ವಜಾಗೊಳಿಸಿದ್ದ ಗಡಿ ಭದ್ರತಾ ಪಡೆಯ ಕ್ರಮವನ್ನು ದೆಹಲಿ ಹೈಕೋರ್ಟ್‌ ಟೀಕಿಸಿದೆ. ವಜಾ ಆದೇಶವನ್ನು ರದ್ದುಗೊಳಿಸಿದೆ.

- Advertisement -

ಬಿಎಸ್‌ಎಫ್‌ ಯೋಧನೊಬ್ಬರು ಹೆಚ್‌ಐವಿ ಸೋಂಕಿಗೆ ತುತ್ತಾಗಿರುವುದು 2017ರ ಜುಲೈನಲ್ಲಿ ದೃಢಪಟ್ಟಿತ್ತು. ಇದೇ ಕಾರಣಕ್ಕಾಗಿ ಅವರನ್ನು ಸೇವೆಯಿಂದ ವಜಾಗೊಳಿಸಿ 2019ರ ಏಪ್ರಿಲ್‌ 9ರಂದು ಆದೇಶಿಸಲಾಗಿತ್ತು. ತಮ್ಮ ವಜಾವನ್ನು ಪ್ರಶ್ನಿಸಿ ಯೋಧ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್ ಶುಕ್ಲಾ ಅವರಿದ್ದ ಪೀಠವು, ವಜಾ ಆದೇಶವನ್ನು ರದ್ದುಗೊಳಿಸಿದೆ. ಯೋಧನನ್ನು ಸೇನೆಗೆ ಮರು ನೇಮಕ ಮಾಡಿಕೊಳ್ಳುವಂತೆ ಸೇನೆಗೆ ತಾಕೀತು ಮಾಡಿದೆ.

“ಅರ್ಜಿದಾರರು ಸೇನೆಯಲ್ಲಿ ಮುಂದುವರೆಯುವ ಹಕ್ಕು ಹೊಂದಿದ್ದಾರೆ. ಒಂದು ವೇಳೆ, ಅವರ ವೈದ್ಯಕೀಯ ಸ್ಥಿತಿ ಹದಗೆಟ್ಟಿದ್ದು, ಅವರು ಮೂಲತಃ ನೇಮಕಗೊಂಡಿದ್ದ ಕಾನ್‌ಸ್ಟೆಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂದಾದರೆ, ಅವರಿಗೆ ಸೂಕ್ತವಾದ ಯಾವುದೇ ಸಮಾನ ಹುದ್ದೆಯಲ್ಲಿ ಪರ್ಯಾಯ ನೇಮಕಾತಿಯನ್ನು ನೀಡಬೇಕಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಅವರು ಎಚ್‌ಐವಿ ಯಿಂದ ಬಳಲುತ್ತಿದ್ದಾರೆ ಎಂಬ ಅಂಶವನ್ನು ಹೊರತುಪಡಿಸಿ, ಅವರನ್ನು ವಜಾಗೊಳಿಸಲು ಯಾವುದೇ ಆಧಾರಗಳಿಲ್ಲ. ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ (ಆರ್‌ಪಿಡಬ್ಲ್ಯೂಡಿ) ಕಾಯ್ದೆ-2016ರ ಅಡಿಯಲ್ಲಿ, ಉದ್ಯೋಗಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ಅಂಗವಿಕಲ ವ್ಯಕ್ತಿಯ ವಿರುದ್ಧ ತಾರತಮ್ಯ ಮಾಡಲು ಯಾವುದೇ ಸರ್ಕಾರಿ ಸಂಸ್ಥೆಗೆ ಅವಕಾಶವಿಲ್ಲ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...