ಬಿಎಸ್‌ಪಿ ಯಾವುದೇ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಲ್ಲ: ಮಾಯಾವತಿ

Date:

ಬಿಎಸ್‌ಪಿ ಇನ್ಮುಂದೆ ಯಾವುದೇ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಲ್ಲ ಮತ್ತು ಎನ್‌ಡಿಎ, ಇಂಡಿಯಾ ಒಕ್ಕೂಟದಿಂದಲೂ ದೂರವಿರಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ. ಹರಿಯಾಣದ ಚುನಾವಣೆಯಲ್ಲಿ ಹೀನಾಯ ಸೋಲನ್ನು ಪ್ರಸ್ತಾಪಿಸಿ ಮಾಯಾವತಿ ಈ ಘೋಷಣೆ ಮಾಡಿದ್ದಾರೆ.

- Advertisement -

‘ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮತ್ತು ಹಿಂದಿನ ಪಂಜಾಬ್ ಚುನಾವಣೆಗಳ ಕಹಿ ಅನುಭವ’ದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳ ಚುನಾವಣೆಗಳಲ್ಲಿ ಬಿಎಸ್‌ಪಿ ನಿರಂತರವಾಗಿ ತನ್ನ ಮತಗಳನ್ನು ಮೈತ್ರಿ ಪಕ್ಷಗಳಿಗೆ ವರ್ಗಾಯಿಸಿದೆ. ಆದರೆ ಈ ಮೈತ್ರಿದಾರರಿಂದ ನಮ್ಮ ಪಕ್ಷಕ್ಕೆ ಮತ ಬರುವ ವಿಚಾರದಲ್ಲಿ ನಿರಾಶಾದಾಯಕ ಫಲಿತಾಂಶವಿದೆ. ಇದು ಪಕ್ಷದ ಕಾರ್ಯಕರ್ತರನ್ನು ನಿರಾಶೆಗೊಳಿಸಿದೆ. ಪಕ್ಷದ ಚಳವಳಿಯನ್ನು ಘಾಸಿಗೊಳಿಸಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹರಿಯಾಣ ಚುನಾವಣೆ | ಬಿಎಸ್‌ಪಿ ಸೋಲಿಗೆ ಜಾಟ್‌ಗಳ ಜಾತಿವಾದಿ ಮನಸ್ಥಿತಿ ಕಾರಣ: ಮಾಯಾವತಿ

ಬಿಎಸ್‌ಪಿ ಕಾರ್ಯಕರ್ತರು ಮತ್ತಷ್ಟು ನಿರಾಶೆಗೆ ಒಳಗಾಗದಂತೆ ನೋಡಿಕೊಳ್ಳುವುದು ಮತ್ತು ನಮ್ಮ ಚಳುವಳಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಮತ್ತು ಪಂಜಾಬ್‌ಗೆ ಮುಂಚಿನ ಚುನಾವಣೆಯ ಕಹಿ ಅನುಭವವನ್ನು ಪರಿಗಣಿಸಿ ಇನ್ನು ಯಾವುದೇ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದಿರಲು ನಿರ್ಧರಿಸಲಾಗಿದೆ. ಹಾಗೆಯೇ ಈ ಹಿಂದಿನಂತೆಯೇ ಬಿಜೆಪಿ/ಎನ್‌ಡಿಎ ಮತ್ತು ಕಾಂಗ್ರೆಸ್/ಇಂಡಿಯಾ ಮೈತ್ರಿಕೂಟದಿಂದ ಅಂತರ ಕಾಯ್ದುಕೊಳ್ಳಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಹಾಗೆಯೇ “ಬಿಎಸ್‌ಪಿಯು ಅಂಬೇಡ್ಕರ್‌ವಾದಿ ಮೌಲ್ಯಗಳನ್ನು ಪ್ರತಿನಿಧಿಸುವ ಏಕೈಕ ಪಕ್ಷವಾಗಿದೆ. ಜಾತಿವಾದಿ ಶಕ್ತಿಗಳು ನಮ್ಮನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡಿದರೂ ಕೂಡಾ ಬಹುಜನ ಸಮಾಜದ ಸಬಲೀಕರಣಕ್ಕೆ ನಾವು ಬದ್ಧವಾಗಿದ್ದೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬಿಎಸ್‌ಪಿ ರಾಷ್ಟ್ರ ಘಟಕದ ಅಧ್ಯಕ್ಷೆಯಾಗಿ ಮಾಯಾವತಿ ಮರು ಆಯ್ಕೆ

“ಬಿಎಸ್‌ಪಿಯು ಸ್ವಾರ್ಥಕ್ಕಾಗಿ ಇತರ ಪಕ್ಷಗಳು ಅಥವಾ ನಾಯಕರೊಂದಿಗೆ ವಿಲೀನಗೊಳ್ಳುವ ಸಂಘಟನೆಯಲ್ಲ. ಬದಲಾಗಿ ಇದು ಬಹುಜನ ಸಮಾಜದ ವಿವಿಧ ಭಾಗಗಳನ್ನು ರಾಜಕೀಯ ಶಕ್ತಿಯಾಗಿ ಒಗ್ಗೂಡಿಸಿ, ಪರಸ್ಪರ ಸಹಕಾರ ಮತ್ತು ಸಹೋದರತ್ವದ ಮೇಲೆ ಅವರನ್ನು ಸ್ಥಾನಮಾನಕ್ಕೆ ಏರಿಸುವ ಆಂದೋಲನವಾಗಿದೆ” ಎಂದು ಮಾಯಾವತಿ ಹೇಳಿದರು.

ಹರಿಯಾಣದಲ್ಲಿ ಬಿಎಸ್‌ಪಿ ಭಾರತೀಯ ರಾಷ್ಟ್ರೀಯ ಲೋಕದಳದೊಂದಿಗೆ (ಐಎನ್‌ಎಲ್‌ಡಿ) ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದೆ. ಐಎನ್‌ಎಲ್‌ಡಿ ಒಟ್ಟಾಗಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ದಬ್ವಾಲಿ ಮತ್ತು ರಾನಿಯಾ ಎಂಬ ಎರಡು ಸ್ಥಾನಗಳಲ್ಲಿ ಗೆದ್ದು ಶೇಕಡ 4.14 ಮತಗಳನ್ನು ಪಡೆದಿದೆ. ಬಿಎಸ್‌ಪಿ ಕೇವಲ ಶೇಕಡ 1.82ರಷ್ಟು ಮತಗಳನ್ನು ಪಡೆದಿದೆ. ಆದರೆ ಯಾವುದೇ ಕ್ಷೇತ್ರದಲ್ಲೂ ಜಯಗಳಿಸಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...