ನಿರ್ಮಾಣ ಹಂತದ್ದಲ್ಲಿದ್ದ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ರಾಜ್‌ಸಮಂದ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಕಲು ಲಾಲ್, ಶಾಂತಿ ಲಾಲ್, ಭಗವತಿ ಲಾಲ್ ಮತ್ತು ಭನ್ವರ್ ಲಾಲ್ ಎಂದು ಗುರುತಿಸಲಾಗಿದೆ. ಕಟ್ಟಡದ ಮೇಲ್ಛಾವಣಿ ಕುಸಿದಿದ್ದು ನಾಲ್ವರು ಕಾರ್ಮಿಕರು ಮೃತಪಟ್ಟು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ರಾತ್ರಿ ಖಮ್ನೋರ್ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಸೂರತ್ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ
ಮೇಲ್ಛಾವಣಿ ಕುಸಿದಾಗ ಹದಿಮೂರು ಕಾರ್ಮಿಕರು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ಆ ಪೈಕಿ ಹತ್ತು ಮಂದಿ ಸಿಲುಕಿದ್ದಾರೆ ಎಂದು ರಾಜಸಮಂದ್ ಜಿಲ್ಲಾಧಿಕಾರಿ ಭನ್ವರ್ ಲಾಲ್ ಮಾಹಿತಿ ನೀಡಿದ್ದಾರೆ.
ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಐವರು ಪ್ರಸ್ತುತ ರಾಜ್‌ಸಮಂದ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಓರ್ವ ಕಾರ್ಮಿಕನನ್ನು ಉದಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.