ಕನ್ನೌಜ್ ರೈಲು ನಿಲ್ದಾಣದಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ 25ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ

Date:

ಉತ್ತರ ಪ್ರದೇಶದ ಕನ್ನೌಜ್‌ನ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಶನಿವಾರ ಮಧ್ಯಾಹ್ನ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

- Advertisement -

ಪರಿಹಾರ ಮತ್ತು ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈವರೆಗೆ, 15 ಕಾರ್ಮಿಕರನ್ನು ರಕ್ಷಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಘಟನೆ ಸಂಭವಿಸಿದ ಸಮಯದಲ್ಲಿ ಕಟ್ಟಡದಲ್ಲಿ ಸುಮಾರು 30–35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇನ್ನೂ, ಸುಮಾರು 25 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಉತ್ತರ ಪ್ರದೇಶದ ಸಮಾಜ ಕಲ್ಯಾಣ ಸಚಿವ ಅಸೀಮ್ ಅರುಣ್ ಭೇಟಿ ನೀಡಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಎಲ್ಲರನ್ನು ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

“ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದಾದ ಎಲ್ಲರನ್ನು ರಕ್ಷಿಸುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ. ಅವಶೇಷಗಳನ್ನು ತೆರವುಗೊಳಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಈವರೆಗೆ ರಕ್ಷಿಸಲ್ಪಟ್ಟ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ನಿಜವಾದ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ” ಎಂದು ತಿಳಿಸಿದ್ದಾರೆ.

“ರಕ್ಷಿಸಲಾದ ಎಲ್ಲ ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ” ಎಂದು ಕಾನ್ಪುರ ನ್ಸ್‌ಪೆಕ್ಟರ್ ಜನರಲ್ (ಐಜಿ) ಜೋಗೇಂದ್ರ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...