ದೆಹಲಿ ಸತ್ಯನಿಕೇತನ್‌ನಲ್ಲಿ ಕಟ್ಟಡ ಕುಸಿತ: ಏಳು ಸಾವು, 12 ಮಂದಿಗೆ ಗಾಯ

Date:

ರಾಜಧಾನಿ ದೆಹಲಿಯ ದಕ್ಷಿಣ ಕ್ಯಾಂಪಸ್ ಸಮೀಪದ ಸತ್ಯನಿಕೇತನ್ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಐದು ಅಂತಸ್ತಿನ ವಿದ್ಯಾರ್ಥಿಗಳ ‘ಪೇಯಿಂಗ್ ಗೆಸ್ಟ್’ (ಪಿಜಿ) ಕಟ್ಟಡ ದಿಢೀರ್ ಕುಸಿದುಬಿದ್ದ ಪರಿಣಾಮ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

- Advertisement -

ಸ್ಥಳಕ್ಕೆ ಧಾವಿಸಿರುವ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF), ದೆಹಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಗಾಯಗೊಂಡವರನ್ನು AIIMS ಟ್ರಾಮಾ ಸೆಂಟರ್ ಮತ್ತು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿ: ದೆಹಲಿ | ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ: 9 ಮಂದಿ ಸಾವು

ಸುಮಾರಾಗಿ 40-50 ವರ್ಷ ಹಳೆಯದಾಗಿದ್ದ ಈ ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಅನಧಿಕೃತವಾಗಿ ನವೀಕರಣ ಹಾಗೂ ಅಡಿಪಾಯ ಬಲಪಡಿಸುವ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಯ ವೇಳೆ ಕೆಳಗಿನ ಕಂಬಗಳು ನಿಯಂತ್ರಣ ತಪ್ಪಿ ಇಡೀ ಕಟ್ಟಡ ನೆಲಸಮಗೊಂಡಿದೆ ಎಂದು ಶಂಕಿಸಲಾಗಿದೆ.

ಸ್ಥಳ ಪರಿಶೀಲನೆ ನಡೆಸಿದ ದೆಹಲಿ ಸರ್ಕಾರವು ದುರಂತದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ ಹಾಗೂ ಕಟ್ಟಡ ಮಾಲೀಕ ಹರಿರಾಮ್ ಬನ್ಸಲ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಇದರ ಬೆನ್ನಲ್ಲೇ ದೆಹಲಿ ಪಾಲಿಕೆ (ಎಂಸಿಡಿ) 4ಕ್ಕಿಂತ ಹೆಚ್ಚು ಅಂತಸ್ತು ಹೊಂದಿರುವ ಅಕ್ರಮ ಕಟ್ಟಡಗಳನ್ನು ತಕ್ಷಣವೇ ಸೀಲ್ ಮಾಡಲು ಆದೇಶ ಹೊರಡಿಸಿದೆ.

2026ರಲ್ಲಿ ದೆಹಲಿಯಲ್ಲಿ ಸುರಕ್ಷತಾ ನಿಯಮಗಳ ಉಲ್ಲಂಘನೆ, ಅಕ್ರಮ ನಿರ್ಮಾಣ ಹಾಗೂ ಹಳೆಯ ಕಟ್ಟಡಗಳ ಸರಿಯಾದ ನಿರ್ವಹಣೆ ಇಲ್ಲದಿರುವುದರಿಂದ ಇಂತಹ ಎರಡು ಪ್ರಮುಖ ದುರಂತಗಳು ಸಂಭವಿಸಿವೆ. ಮೇ ತಿಂಗಳಲ್ಲಿ ದಕ್ಷಿಣ ದೆಹಲಿಯ ಸೈದುಲಾಜಾಬ್ ಪ್ರದೇಶದಲ್ಲಿ ಬಹುಮಹಡಿ ಕಟ್ಟಡವೊಂದು ಹಠಾತ್ತಾಗಿ ಕುಸಿದುಬಿದ್ದ ಪರಿಣಾಮ ಹಲವರು ಗಾಯಗೊಂಡಿದ್ದರು. ಅಡಿಪಾಯಕ್ಕೆ ಧಕ್ಕೆಯುಂಟಾಗಿದ್ದು ಹಾಗೂ ಅಕ್ರಮ ನಿರ್ಮಾಣ ಕಾಮಗಾರಿಯೇ ಈ ಅಪಘಾತಕ್ಕೆ ಕಾರಣವೆಂದು ಪಾಲಿಕೆ ತನಿಖೆಯಿಂದ ತಿಳಿದುಬಂದಿತ್ತು. ಈ ದುರಂತದಲ್ಲಿ 6 ಮಂದಿ ಮೃತಪಟ್ಟು, 15ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದರು.

ಜೂನ್‌ನಲ್ಲಿ ದಕ್ಷಿಣ ವಲಯದ ಹೌಜ್ ರಾಣಿ ಪ್ರದೇಶದಲ್ಲಿದ್ದ ಬಿ&ಬಿ (Bed & Breakfast) ತಂಗುದಾಣವೊಂದರಲ್ಲಿ ಭೀಕರ ಬೆಂಕಿ ಅನಾಹುತ ಸಂಭವಿಸಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿತ್ತು. ಅಗತ್ಯ ಅಗ್ನಿಶಾಮಕ ಸುರಕ್ಷತಾ ಅನುಮತಿ ಪಡೆಯದೇ ಕಟ್ಟಡವನ್ನು ವಾಣಿಜ್ಯ ಬಳಕೆಗೆ ನೀಡಿದ್ದು ಈ ದುರಂತಕ್ಕೆ ಕಾರಣವಾಗಿತ್ತು. ಈ ಭೀಕರ ದುರಂತದಲ್ಲಿ 14 ವಿದೇಶಿ ಪ್ರಜೆಗಳು ಹಾಗೂ ಭಾರತೀಯ ಕುಟುಂಬದ 8 ಸದಸ್ಯರು ಸೇರಿದಂತೆ ಒಟ್ಟು 23 ಜನರು ಸಜೀವ ದಹನಗೊಂಡಿದ್ದರು ಹಾಗೂ 20ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದಲ್ಲಿ ಭಿನ್ನಮತ? ಅಧಿಕಾರಿ ವಿರುದ್ಧ ಕ್ರಮಕ್ಕೆ ಇಬ್ಬರು ಆಯುಕ್ತರ ಆಗ್ರಹ; ‘ಹಸ್ತಕ್ಷೇಪ’ ಎಂದಿದ್ದ ಕೇಂದ್ರ

ಕೇಂದ್ರ ಚುನಾವಣಾ ಆಯೋಗದೊಳಗೆ ಎಲ್ಲವೂ ಸರಿಯಿಲ್ಲವೇ? ಇಬ್ಬರು ಚುನಾವಣಾ ಆಯುಕ್ತರು ಹಿರಿಯ...

ಬಸವಕಲ್ಯಾಣ | ಪ್ರತಾಪೂರ ಗ್ರಾ.ಪಂ.ನಲ್ಲಿ ₹25.34 ಲಕ್ಷ ಅಕ್ರಮದ ಆರೋಪ, ತನಿಖೆಗೆ ಆದೇಶವಿದ್ದರೂ ವಿಳಂಬ!

ಬಸವಕಲ್ಯಾಣ ತಾಲೂಕಿನ ಪ್ರತಾಪೂರ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...