ಬುಲ್ಡೋಜರ್ ನ್ಯಾಯ | ನಿಯಮ ಉಲ್ಲಂಘಿಸಿ ಒತ್ತುವರಿ ಮಾಡಿದರೆ ಬುಲ್ಡೋಜರ್ ಉರುಳಲೇಬೇಕು: ಸುಪ್ರೀಂ ಕೋರ್ಟ್

Date:

ಕಾನೂನಿನ ನಿಯಮಗಳನ್ನು ಗಾಳಿಗೆ ತೂರಿ, ಪುರಸಭೆ ಅಧಿಕಾರಿಗಳು ಮತ್ತು ಅಕ್ರಮ ಒತ್ತುವರಿದಾರರ ನಡುವಿನ ಹೊಂದಾಣಿಕೆಯ ಭ್ರಷ್ಟಾಚಾರದಿಂದಾಗಿ ಒತ್ತುವರಿ ಕಾರ್ಯ ನಡೆದಿದ್ದರೆ, ಅಂತಹ ಸ್ಥಳಗಳಲ್ಲಿ ಬುಲ್ಡೋಜರ್‌ಗಳು ಉರುಳಲೇಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -

‘ಬುಲ್ಡೋಜರ್ ನ್ಯಾಯ’ದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ್ದ 2024ರ ತೀರ್ಪನ್ನು ಅಧಿಕಾರಿಗಳು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿದೆ. ಅರ್ಜಿಗಳನ್ನು ನೇರವಾಗಿ ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದೆ. ಅಲ್ಲದೆ, ಸಂತ್ರಸ್ತರು ಈ ವಿಚಾರವಾಗಿ ತಮ್ಮ ತಮ್ಮ ರಾಜ್ಯಗಳ ಹೈಕೋರ್ಟ್‌ಗಳನ್ನು ಸಂಪರ್ಕಿಸುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇವಲ ಒಬ್ಬ ವ್ಯಕ್ತಿ ಯಾವುದೋ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ ಎಂಬ ಕಾರಣಕ್ಕೆ ಆತನ ಮನೆ ಅಥವಾ ಆಸ್ತಿಯನ್ನು ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಸಿ ಧ್ವಂಸಗೊಳಿಸುವುದು ತಪ್ಪು ಎಂದು 2024ರ ನವೆಂಬರ್ 13ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ಈ ಆದೇಶದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ತೀವ್ರವಾದ ಭಿನ್ನಾಭಿಪ್ರಾಯಗಳು ಹಾಗೂ ವಿಭಿನ್ನ ಸತ್ಯಾಂಶಗಳು ಅಡಗಿವೆ ಎಂದು ಪೀಠ ಹೇಳಿದೆ.

ಕೋರ್ಟ್‌ನ ಈ ನಿಲುವನ್ನು ಸ್ವಾಗತಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ, “ದೇಶದಾದ್ಯಂತ ವಿವಿಧ ಭಾಗಗಳಿಂದ ಈ ಅರ್ಜಿಗಳು ಬಂದಿದ್ದು, ಪ್ರತಿಯೊಂದು ಪ್ರಕರಣದಲ್ಲೂ ಸ್ಥಳೀಯವಾಗಿ ವಾಸ್ತವಾಂಶಗಳ ತನಿಖೆಯ ಅಗತ್ಯವಿದೆ” ಎಂದು ವಾದಿಸಿದ್ದಾರೆ.

ಇದನ್ನು ಒಪ್ಪಿದ ಮುಖ್ಯ ನ್ಯಾಯಮೂರ್ತಿಗಳು, ಪ್ರಕರಣದಿಂದ ಪ್ರಕರಣಕ್ಕೆ ಸತ್ಯಾಂಶಗಳು ಬದಲಾಗುತ್ತವೆ. ದಾಖಲೆಗಳನ್ನು ತರಿಸಿ ಕೂಲಂಕಷವಾಗಿ ಪರಿಶೀಲಿಸಬೇಕಾಗುತ್ತದೆ. ಸುಪ್ರೀಂ ಕೋರ್ಟ್ ಈಗಾಗಲೇ ಈ ಬಗ್ಗೆ ಸ್ಪಷ್ಟವಾದ ಮಾರ್ಗಸೂಚಿಗಳನ್ನು ರೂಪಿಸಿದೆ. ಹೀಗಾಗಿ, ಹೈಕೋರ್ಟ್‌ಗಳು ಮತ್ತು ಕೆಳಹಂತದ ನ್ಯಾಯಾಲಯಗಳು ಈ ತೀರ್ಪಿನ ಪಾಲನೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಚಾರಣೆ ವೇಳೆ ಮಾತನಾಡಿದ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ, “ಅಧಿಕಾರಿಗಳು ಮತ್ತು ಅಕ್ರಮ ಒತ್ತುವರಿದಾರರ ಭ್ರಷ್ಟ ಮೈತ್ರಿಯಿಂದಾಗಿ ಕಾನೂನಿನ ನಿಯಮಗಳೇ ಬುಡಮೇಲಾದಾಗ ಬುಲ್ಡೋಜರ್‌ಗಳನ್ನು ಬಳಸಲೇಬೇಕಾಗುತ್ತದೆ. ಆದರೆ, ಇದೇ ಕಾನೂನು ಜಾರಿಯ ನೆಪದಲ್ಲಿ ಸಾಮಾನ್ಯ ಜನರನ್ನು ಭಯಭೀತಗೊಳಿಸುವುದು ಅಥವಾ ಆಯ್ದ ವ್ಯಕ್ತಿಗಳನ್ನು ಮಾತ್ರ ಗುರಿಪಡಿಸಿ ದಂಡಿಸುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಯಾವುದೇ ನ್ಯಾಯಾಂಗದ ತೀರ್ಪನ್ನು ಆಯಾ ಪ್ರಕರಣದ ಹಿನ್ನೆಲೆ ಮತ್ತು ವಾಸ್ತವ ಸ್ಥಿತಿಯಿಂದ ಹೊರತಾಗಿ ಸ್ವತಂತ್ರ ಶಾಸನದಂತೆ ನೋಡಲು ಸಾಧ್ಯವಿಲ್ಲ” ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ಹಿರಿಯ ವಕೀಲ ಸಂಜಯ್ ಹೆಗಡೆ ಅವರು ತಮ್ಮ ಕಕ್ಷಿದಾರ ಗಣೇಶ್ ಗುಪ್ತಾ ಅವರ ಹಣ್ಣಿನ ರಸದ ಅಂಗಡಿಯನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿದ ಘಟನೆಯನ್ನು ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ನ್ಯಾಯಾಲಯವು, ಈ ವ್ಯಕ್ತಿಗೆ ಅಲ್ಲಿ ಅಂಗಡಿ ನಡೆಸಲು ಕಾನೂನುಬದ್ಧ ಅನುಮತಿ ಇತ್ತೇ ಅಥವಾ ಧ್ವಂಸದ ಸಮಯದಲ್ಲಿ ಸೂಕ್ತ ಕಾನೂನು ಪ್ರಕ್ರಿಯೆಯನ್ನು ಪಾಲಿಸಲಾಗಿದೆಯೇ ಎಂಬುದನ್ನು ಸ್ಥಳೀಯ ನ್ಯಾಯಾಲಯಗಳೇ ಪರಿಶೀಲಿಸಬೇಕು ಎಂದು ಹೇಳಿದೆ.

ಮತ್ತೊಬ್ಬ ಹಿರಿಯ ವಕೀಲ ಹುಜೇಫಾ ಅಹ್ಮದಿ ಅವರು ಮಸೀದಿಯೊಂದರ ಧ್ವಂಸ ಪ್ರಕರಣವನ್ನು ಉಲ್ಲೇಖಿಸಿ, ಹೈಕೋರ್ಟ್ ರಕ್ಷಣೆ ನೀಡಿದ್ದರೂ ಸಹ ಅಂತಿಮ ಆದೇಶ ಕೈ ಸೇರುವ ಮುನ್ನವೇ ಧ್ವಂಸ ಕಾರ್ಯ ನಡೆಸಲಾಗಿದೆ ಎಂದು ದೂರಿದರು. ಇದು ಕೇವಲ ರಾಜಕೀಯ ಪ್ರೇರಿತ ಮತ್ತು ಆಯ್ದು ಗುರಿಪಡಿಸುವ ಕ್ರಮವಾಗಿತ್ತು ಎಂದು ಅವರು ಆರೋಪಿಸಿದರು.

ಹಿರಿಯ ವಕೀಲ ಸಿ.ಯು. ಸಿಂಗ್ ಅವರು, ಸುಪ್ರೀಂ ಕೋರ್ಟ್ ತನ್ನದೇ ಆದ ತೀರ್ಪನ್ನು ರಕ್ಷಿಸಿಕೊಳ್ಳದಿದ್ದರೆ ಹೇಗೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯ ಕಾಂತ್, “ನಾವು ನಮ್ಮ ತೀರ್ಪುಗಳಿಗೆ ಬದ್ಧರಾಗಿದ್ದೇವೆ ಮತ್ತು ಹೈಕೋರ್ಟ್‌ಗಳು ನಮ್ಮ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾವು ನಿರ್ದೇಶನ ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ, ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ರೈಲ್ವೆ ಹಳಿಗಳ ಪಕ್ಕದಲ್ಲಿ ಅಥವಾ ಜಲಮೂಲಗಳ ಮೇಲಿನ ಅಕ್ರಮ ಒತ್ತುವರಿ ಪ್ರಕರಣಗಳಿಗೆ 2024ರ ಬುಲ್ಡೋಜರ್ ತೀರ್ಪಿನ ನಿಯಮಗಳು ಅನ್ವಯಿಸುವುದಿಲ್ಲ ಎಂಬ ವಿನಾಯಿತಿಯನ್ನು ಸಹ ನ್ಯಾಯಾಲಯ ಗಮನಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...