ಅಜಂ ಖಾನ್ ಜೌಹರ್ ವಿವಿ ಮೇಲೆ ʼಬುಲ್ಡೋಜರ್‌ʼ ತೂಗುಗತ್ತಿ; ಚುನಾವಣೆ ಹೊಸ್ತಿಲಲ್ಲಿ ಕೋಮು ಧ್ರುವೀಕರಣಕ್ಕೆ ಯತ್ನ?

Date:

ಉತ್ತರ ಪ್ರದೇಶದ ರಾಂಪುರದಲ್ಲಿರುವ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯಕ್ಕೆ ಇದೀಗ ದೊಡ್ಡ ಕಾನೂನು ಸಂಕಷ್ಟ ಎದುರಾಗಿದೆ. ರಾಂಪುರ ಅಭಿವೃದ್ಧಿ ಪ್ರಾಧಿಕಾರವು (ಆರ್‌ಡಿಎ) ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಒಟ್ಟು 40 ಕಟ್ಟಡಗಳ ಪೈಕಿ 38 ಕಟ್ಟಡಗಳನ್ನು ಅಕ್ರಮವೆಂದು ಘೋಷಿಸಿ, ಅವುಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಆದೇಶಿಸಿದೆ. ಆದರೆ , ಈ ಬುಲ್ಡೋಜರ್‌ ಕ್ರಮವು ಚುನಾವಣೆ ಹೊಸ್ತಿಲಲ್ಲಿ ಕೋಮು ಧೃವೀಕರಣಕ್ಕೆ ಪ್ರೇರೇಪಿಸುವ ಯತ್ನವಾಗಿದೆ ಎಂದು ಆರೋಪಿಸಲಾಗುತ್ತಿದೆ.

- Advertisement -

ಈ ಕಟ್ಟಡಗಳನ್ನು ನಿರ್ಮಿಸುವಾಗ ಯಾವುದೇ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂಬುದು ಪ್ರಾಧಿಕಾರದ ಪ್ರಮುಖ ಆರೋಪ. ಈ ವಿಶ್ವವಿದ್ಯಾಲಯವನ್ನು ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಅಜಂ ಖಾನ್ ಅವರ ಅಧ್ಯಕ್ಷತೆಯಲ್ಲಿರುವ ಮೊಹಮ್ಮದ್ ಅಲಿ ಜೌಹರ್ ಟ್ರಸ್ಟ್ ನಿರ್ವಹಿಸುತ್ತಿದ್ದು, ಪ್ರಸ್ತುತ ಅಜಂ ಖಾನ್ ಜೈಲಿನಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಆರ್‌ಡಿಎ ಉಪಾಧ್ಯಕ್ಷ ಮತ್ತು ರಾಂಪುರ ಜಿಲ್ಲಾಧಿಕಾರಿ ಅಜಯ್ ಕುಮಾರ್ ದ್ವಿವೇದಿ ಅವರು ಉತ್ತರ ಪ್ರದೇಶ ನಗರ ಯೋಜನೆ ಮತ್ತು ಅಭಿವೃದ್ಧಿ ಕಾಯ್ದೆ-1973ರ ಸೆಕ್ಷನ್ 27ರ ಅಡಿಯಲ್ಲಿ ಈ ಆದೇಶ ಹೊರಡಿಸಿದ್ದಾರೆ. ಸುದೀರ್ಘ ವಿಚಾರಣೆ ನಂತರ, ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು ಮತ್ತು ಒಂದು ಶೈಕ್ಷಣಿಕ ಬ್ಲಾಕ್ ಅನ್ನು ಹೊರತುಪಡಿಸಿ, ಉಳಿದ 38 ಕಟ್ಟಡಗಳಿಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲ ಎಂಬುದು ದೃಢಪಟ್ಟಿದೆ. ಸುಮಾರು 82,309 ಚದರ ಮೀಟರ್ ವಿಸ್ತೀರ್ಣದಲ್ಲಿ ಹರಡಿರುವ ಈ ಕಟ್ಟಡಗಳು ಭೂ ಬಳಕೆ ನಿಯಮಗಳನ್ನು ಸಹ ಉಲ್ಲಂಘಿಸಿವೆ. ಈ ಅನಧಿಕೃತ ನಿರ್ಮಾಣಗಳನ್ನು ಕಾನೂನುಬದ್ಧಗೊಳಿಸಲು ಸಾಧ್ಯವಿಲ್ಲದ ಕಾರಣ, ತೆರವುಗೊಳಿಸುವುದೇ ಕಾನೂನುಬದ್ಧ ಮಾರ್ಗವೆಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ನಿರ್ಮಾಣದ ಸಮಯದಲ್ಲಿ ಆ ಭೂಮಿ ಆರ್‌ಡಿಎ ವ್ಯಾಪ್ತಿಗೆ ಬರುತ್ತಿರಲಿಲ್ಲ ಎಂದು ವಿಶ್ವವಿದ್ಯಾಲಯ ವಾದಿಸಿದೆ. ಆದರೆ ಈ ವಾದವನ್ನು ತಳ್ಳಿಹಾಕಿರುವ ಪ್ರಾಧಿಕಾರ, ಅಂದಿನ ದಿನಗಳಲ್ಲಿಯೂ ಜಿಲ್ಲಾ ಪಂಚಾಯತ್ ಕಾಯ್ದೆಯಡಿ ಅನುಮತಿ ಪಡೆಯುವುದು ಕಡ್ಡಾಯವಾಗಿತ್ತು ಎಂದು ತಿಳಿಸಿದೆ. ಈ ತೆರವು ಕಾರ್ಯಾಚರಣೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದ್ದು, ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮತ್ತು ಮಾರ್ಗದರ್ಶನ ನೀಡಲು ವಿಶೇಷ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ವಿಶ್ವವಿದ್ಯಾಲಯಕ್ಕೆ ಅಕ್ರಮ ರಚನೆಗಳನ್ನು ತೆರವುಗೊಳಿಸಲು 15 ದಿನಗಳ ಗಡುವು ನೀಡಲಾಗಿದ್ದು, ವಿಫಲವಾದಲ್ಲಿ ಆಡಳಿತ ಮಂಡಳಿಯೇ ನೇರವಾಗಿ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಿದೆ.

ಇನ್ನು ಈ ವಿಷಯ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರೆ ಜೂಹಿ ಸಿಂಗ್, ಈ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಜೌಹರ್ ವಿಶ್ವವಿದ್ಯಾಲಯವು ಅತೀ ಕಡಿಮೆ ಶುಲ್ಕದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ಒಂದು ಪ್ರಮುಖ ಶಿಕ್ಷಣ ಸಂಸ್ಥೆ. ಅಲ್ಲದೆ, ಅನೇಕ ವಿದ್ಯಾರ್ಥಿಗಳು ಇಲ್ಲಿ ಶುಲ್ಕ ಮರುಪಾವತಿ ಸೌಲಭ್ಯವನ್ನೂ ಪಡೆಯುತ್ತಿದ್ದಾರೆ . ಇಷ್ಟು ದೊಡ್ಡ ಶಿಕ್ಷಣ ಸಂಸ್ಥೆಯನ್ನು ನೆಲಸಮಗೊಳಿಸಲು ಆದೇಶಿಸಿರುವುದು, ಅಜಂ ಖಾನ್ ಮತ್ತು ಅವರು ಸ್ಥಾಪಿಸಿದ ಸಂಸ್ಥೆಯ ವಿರುದ್ಧ ನಡೆಸುತ್ತಿರುವ ಉದ್ದೇಶಪೂರ್ವಕ ದಾಳಿಯಾಗಿದೆ ಎಂದು ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಇರಾನ್‌ನ ಹೊಸ ರಾಷ್ಟ್ರೀಯವಾದಕ್ಕೆ ನೀರೆರೆದಿದ್ದೇ ಟ್ರಂಪ್‌ನ ಹುಚ್ಚಾಟಗಳು!‌

ಕಟ್ಟಡಗಳಿಗೆ ಅನುಮೋದಿತ ನಕ್ಷೆಗಳಿಲ್ಲ ಎಂಬ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿರುವ ಅವರು, “ಒಂದು ವೇಳೆ ಇದೇ ಆಧಾರದ ಮೇಲೆ ಕ್ರಮ ಕೈಗೊಳ್ಳುವುದಾದರೆ, ಸರ್ಕಾರವು ತಮ್ಮದೇ ಪಕ್ಷದ ಶಾಸಕರು ಮತ್ತು ಸಂಸದರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೂ ಇದೇ ರೀತಿಯ ಪರಿಶೀಲನೆ ನಡೆಸಲಿ. ಒಂದು ವೇಳೆ ಸರ್ಕಾರದ ಬಳಿ ಅಂತಹ ವಿವರಗಳಿಲ್ಲದಿದ್ದರೆ, ಸಮಾಜವಾದಿ ಪಕ್ಷವು ಅವುಗಳನ್ನು ಒದಗಿಸಲು ಸಿದ್ಧವಿದೆ. ಅಧಿಕಾರಿಗಳು ಎಲ್ಲೆಲ್ಲಿ ಉಲ್ಲಂಘನೆಗಳಿವೆಯೋ ಅಲ್ಲಿ ಕ್ರಮ ಕೈಗೊಳ್ಳಬೇಕೇ ಹೊರತು, ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಆಯ್ದು ಕ್ರಮ ಕೈಗೊಳ್ಳಬಾರದು” ಎಂದು ಹೇಳಿದ್ದಾರೆ.

ಈ ಪ್ರಸ್ತಾವಿತ ತೆರವು ಕಾರ್ಯಾಚರಣೆಯು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಈ ಪ್ರಕರಣ ಸಂಬಂಧ ಟ್ರಸ್ಟ್ ಕಾನೂನುಬದ್ಧ ಮಾರ್ಗಗಳನ್ನು ಕಂಡುಕೊಳ್ಳಲಿದೆ ಎಂದು ತಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ ಎಂದು TIE ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...