ಬೆಂಗಳೂರಿಗೆ ಬರಲಿದೆ ಬುಲೆಟ್‌ ರೈಲು; ಸಮೀಕ್ಷೆಗೆ ಆದೇಶ

Date:

ದಕ್ಷಿಣ ಭಾರತಕ್ಕೆ ಬುಲೆಟ್‌ ರೈಲು ಜಾಲವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದಕ್ಷಿಣ ಭಾರತಕ್ಕೆ ಪ್ರವಾವಿತ ಬುಲೆಟ್‌ ರೈಉ ಯೋಜನೆ ಹೈದರಾಬಾದ್, ಅಮರಾವತಿ, ಬೆಂಗಳೂರು ಹಾಗೂ ಚೆನ್ನೈ ನಡುವೆ ಸಂಪರ್ಕ ಒದಗಿಸಲಿದೆ. ಈ ಬುಲೆಟ್‌ ರೈಲು ಯೋಜನೆಗಾಗಿ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

- Advertisement -

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ‘ಭಾರತ ಆಹಾರ ಉತ್ಪಾದನಾ ಶೃಂಗಸಭೆ’ಯಲ್ಲಿ ಮಾತನಾಡಿ ನಾಯ್ಡು, “ದಕ್ಷಿಣ ಭಾರತದ ಈ ಪ್ರಮುಖ ನಾಲ್ಕು ನಗರಗಳು ಸುಮಾರು 5 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ವಿಶ್ವದ ಅತಿದೊಡ್ಡ ಮಾರುಕಟ್ಟೆಯನ್ನು ಹೊಂದಿವೆ. ಈ ನಗರಗಳ ನಡುವೆ ಶೀಘ್ರದಲ್ಲೇ ಬುಲೆಟ್ ರೈಲು ಬರಲಿದೆ. ಸಮೀಕ್ಷೆಗೆ ಆದೇಶ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸದ್ಯ ಚೆನ್ನೈ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ಮುಂಜಾನೆ ಬುಲೆಟ್‌ ರೈಲಿನಲ್ಲಿ ಟೋಕಿಯೊದಿಂದ ಸೆಂಡೈಗೆ ಪ್ರಯಾಣಿಸಿದರು. ಅವರೊಂದಿಗೆ ಜಪಾನ್ ಪ್ರಧಾನಿ ಶಿಗೇರು ಇಶಿಬಾ ಕೂಡ ಇದ್ದರು. ಈ ವೇಳೆ, ಜಪಾನ್‌ ದಿನಪತ್ರಿಕೆಯೊಂದಿಗೆ ಮಾತನಾಡಿರುವ ಮೋದಿ, “ಭಾರತದಲ್ಲಿ ಹೈಸ್ಪೀಡ್ ರೈಲು ಜಾಲವನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ಸರ್ಕಾರ ಹೊಂದಿದೆ” ಎಂದು ಹೆಳಿದ್ದಾರೆ.

“ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆಯು ಪ್ರಗತಿಯಲ್ಲಿದೆ. ಇದೇ ಸಮಯದಲ್ಲಿ, ನಾವು ಒಂದು ದೊಡ್ಡ ಮಹತ್ವಾಕಾಂಕ್ಷೆಯನ್ನು ಘೋಷಿಸಿದ್ದೇವೆ. ನಮ್ಮ ದೇಶದಲ್ಲಿ 7,000 ಕಿಲೋಮೀಟರ್ ಉದ್ದದ ಹೈಸ್ಪೀಡ್ ರೈಲು ಜಾಲವನ್ನು ನಿರ್ಮಿಸಲಾಗುತ್ತದೆ” ಎಂದು ಮೋದಿ ಹೇಳಿದ್ದಾರೆ.

“ಮುಂದಿನ ಕೆಲವು ವರ್ಷಗಳಲ್ಲಿ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ ಪ್ರಯಾಣಿಕರ ಬಳಕೆಗೆ ದೊರೆಯಲಿದೆ. ಈ ಯೋಜನೆಯು ಭಾರತ ಮತ್ತು ಜಪಾನ್ ನಡುವಿನ ಪ್ರಮುಖ ಯೋಜನೆಯಾಗಿದೆ” ಎಂದಿದ್ದಾರೆ.

ಈ ಲೇಖ ಓದಿದ್ದೀರಾ?: “ಕನ್ನಡನಾಡು ನನ್ನ ಪ್ರೀತಿಯ ನಾಡು” ಎಂದು ಇಡೀ ಜಗತ್ತಿಗೆ ಸಾರುತ್ತಾ ಬಂದ ಬಾನು ದಸರಾ ಉದ್ಘಾಟಿಸಿದರೆ ತಪ್ಪೇ!

ಈ ಹಿಂದೆ, ಸರ್ಕಾರವು ಹೈಸ್ಪೀಡ್ ರೈಲು ಜಾಲದ ಸಂಭಾವ್ಯ ಮಾರ್ಗಗಳನ್ನು ಪಟ್ಟಿ ಮಾಡಿತ್ತು/ ಆ ಪಟ್ಟಿ ಇಂತಿದೆ;
ದೆಹಲಿ – ವಾರಣಾಸಿ
ದೆಹಲಿ – ಅಹಮದಾಬಾದ್
ಮುಂಬೈ – ನಾಗ್ಪುರ
ಮುಂಬೈ – ಹೈದರಾಬಾದ್
ಚೆನ್ನೈ – ಮೈಸೂರು
ದೆಹಲಿ – ಅಮೃತಸರ
ವಾರಣಾಸಿ – ಹೌರಾ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...