ಆಂಬ್ಯುಲೆನ್ಸ್‌ಗೆ ಪೆಟ್ರೋಲ್ ನೀಡಲು ನಿರಾಕರಿಸಿದ ಬಂಕ್; ಚಿಕಿತ್ಸೆ ಸಿಗದೆ ರೋಗಿ ಸಾವು, ಮ್ಯಾನೇಜರ್ ವಿರುದ್ಧ ಕೇಸ್!

Date:

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿಯ ಅಮಾನವೀಯ ವರ್ತನೆಯಿಂದಾಗಿ ಚಿಕಿತ್ಸೆ ಸಿಗದೆ 50 ವರ್ಷದ ರೋಗಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

- Advertisement -

ಏಪ್ರಿಲ್ 22ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಆಂಬ್ಯುಲೆನ್ಸ್‌ಗೆ ಪೆಟ್ರೋಲ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಕ್ ಮ್ಯಾನೇಜರ್ ಅಶೋಕ್ ಕುಮಾರ್ ಭಾರತಿ ವಿರುದ್ಧ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಬೈರಿಯಾ ತಹಸಿಲ್‌ನ ಪಾಂಡೇಪುರ ಗ್ರಾಮದ ನಿವಾಸಿ ಛತ್ತು ಶರ್ಮಾ ಎಂಬುವರು ತೀವ್ರ ಅಸ್ವಸ್ಥರಾದಾಗ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಮಾರ್ಗಮಧ್ಯೆ ತೆಂಗ್ರಾಹಿ ಗ್ರಾಮದ ಬಳಿ ಆಂಬ್ಯುಲೆನ್ಸ್‌ನ ಪೆಟ್ರೋಲ್ ಖಾಲಿಯಾದಾಗ ಸಮೀಪದ ಪೆಟ್ರೋಲ್ ಬಂಕ್‌ಗೆ ತೆರಳಿ ಇಂಧನ ನೀಡುವಂತೆ ಕುಟುಂಬಸ್ಥರು ಅಂಗಲಾಚಿದ್ದಾರೆ. ಆದರೆ, ಬಂಕ್ ಮ್ಯಾನೇಜರ್ ಪೆಟ್ರೋಲ್ ದಾಸ್ತಾನು ಇಲ್ಲ ಎಂದು ಹೇಳಿ ಪೆಟ್ರೋಲ್ ನೀಡಲು ನಿರಾಕರಿಸಿದ್ದಾರೆ.

ಸುಮಾರು 15 ನಿಮಿಷಗಳ ಕಾಲ ಆಂಬ್ಯುಲೆನ್ಸ್ ಬಂಕ್‌ನಲ್ಲೇ ನಿಂತಿದ್ದರೂ ಸಹಾಯ ಸಿಗದ ಕಾರಣ, ಸಕಾಲದಲ್ಲಿ ಆಸ್ಪತ್ರೆ ತಲುಪಲು ಸಾಧ್ಯವಾಗದೆ ಛತ್ತು ಶರ್ಮಾ ದಾರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಮಂಗಳ ಪ್ರಸಾದ್ ಸಿಂಗ್ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಪೆಟ್ರೋಲ್ ಬಂಕ್ ಮ್ಯಾನೇಜರ್‌ನ ಹಸಿ ಸುಳ್ಳು ಬಯಲಾಗಿದೆ.

ಇದನ್ನೂ ಓದಿ: ಹಳ್ಳ ಹಿಡಿದ ʼಜೆಜೆಎಂʼ: ಬತ್ತಿದ ನೀರಿನ ಮೂಲಗಳು; ಕೈಕೊಟ್ಟ ಆರ್‌ಒ ಪ್ಲ್ಯಾಂಟ್‌ಗಳು!

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆಂಬ್ಯುಲೆನ್ಸ್ ಸಹಾಯಕ್ಕಾಗಿ ಬಂದಿರುವುದು ದೃಢಪಟ್ಟಿದೆ. ಅಲ್ಲದೆ, ಬಂಕ್‌ನ ದಾಖಲೆಗಳನ್ನು ತಪಾಸಣೆ ಮಾಡಿದಾಗ ಆ ದಿನ ಅಲ್ಲಿ ಸುಮಾರು 4,500 ಲೀಟರ್‌ಗೂ ಹೆಚ್ಚು ಪೆಟ್ರೋಲ್ ಮತ್ತು 4,700 ಲೀಟರ್‌ಗೂ ಹೆಚ್ಚು ಡೀಸೆಲ್ ದಾಸ್ತಾನು ಇರುವುದು ಪತ್ತೆಯಾಗಿದೆ. ‌

ಸಾಕಷ್ಟು ಇಂಧನ ಲಭ್ಯವಿದ್ದರೂ ತುರ್ತು ಪರಿಸ್ಥಿತಿಯಲ್ಲಿ ಸಹಾಯ ಮಾಡದ ಕಾರಣಕ್ಕಾಗಿ ಅಗತ್ಯ ವಸ್ತುಗಳ ಕಾಯ್ದೆಯಡಿ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಯಿಲ್ ಕಂಪನಿ ಕೂಡ ಈ ಬಗ್ಗೆ ಪ್ರತ್ಯೇಕ ತನಿಖೆ ನಡೆಸಿ ಬಂಕ್ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...