ಚಲಿಸುವಾಗಲೇ ಹೊತ್ತಿ ಉರಿದ ಬಸ್; ಇಬ್ಬರು ಮಕ್ಕಳು ಸೇರಿ ಐವರು ಸಾವು

Date:

ಖಾಸಗಿ ಬಸ್‌ವೊಂದು ಚಲಿಸುವಾಗಲೇ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಲಕ್ನೋ ಬಳಿ ನಡೆದಿದೆ. ದರ್ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಲಕ್ನೋದ ಹೊರವಲಯದಲ್ಲಿರುವ ಮೋಹನ್ ಲಾಲ್‌ಗಂಜ್ ಪ್ರದೇಶದಲ್ಲಿ ಬಸ್‌ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸುವಷ್ಟರಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು, ಐವರು ದರ್ಮರಣ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬಸ್‌ನಲ್ಲಿ ಸುಮಾರು 80 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಿಹಾರದ ಬೇಗುಸರಾಯ್‌ನಿಂದ ದೆಹಲಿಗೆ ಬಸ್‌ ತೆರಳುತ್ತಿತ್ತು. ಬಸ್‌ನ ಗೇರ್‌ಬಾಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ಆಗಿದ್ದು, ಅದರಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ” ಎಂದು ಮೋಹನ್ ಲಾಲ್‌ಗಂಜ್‌ನ ಸಹಾಯಕ ಪೊಲೀಸ್ ಆಯುಕ್ತ ರಜನೀಶ್ ವರ್ಮಾ ಹೇಳಿದ್ದಾರೆ.

“ಬೆಂಕಿ ಹೊತ್ತಿಕೊಂಡಾಗ ಹೆಚ್ಚಿನ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬೆಂಕಿ ವೇಗವಾಗಿ ವ್ಯಾಪಿಸಿದೆ. ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಬೆಂಕಿಯಿಂದ ತಪ್ಪಿಸಿಕೊಂಡು ಹೊರಬರಲಾಗದೆ, ಸಾವನ್ನಪ್ಪಿದ್ದಾರೆ. ಹಲವಾರು ಇತರ ಪ್ರಯಾಣಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ” ಎಂದು ಅವರು ತಿಳಿಸಿದ್ದಾರೆ.

ಬೆಂಕಿಯ ಜ್ವಾಲೆಯು ಸುಮಾರು ಒಂದು ಕಿಲೋಮೀಟರ್ ದೂರದವರೆಗೂ ಗೋಚರಿಸುತ್ತಿತ್ತು. ಬೆಂಕಿ ಹೊತ್ತಿಕೊಂಡ ತಕ್ಷಣ ಬಸ್ ನಿಲ್ಲಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಅರ್ಧ ಗಂಟೆಯೊಳಗೆ ಬೆಂಕಿಯನ್ನು ನಂದಿಸಿದ್ದಾರೆ. ಬಸ್ಸಿನ ತುರ್ತು ನಿರ್ಗಮನ ಬಾಗಿಲು ತೆರೆಯಲು ವಿಫಲವಾದ ಕಾರಣ ಹಿಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು ಎಂಬುದು ಪೊಲೀಸ್‌ ತನಿಖೆಯಲ್ಲಿ ಗೊತ್ತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...