ರೀಲ್ಸ್‌ನಲ್ಲಿ ನಿರತವಾಗಿರುವ ರೈಲ್ವೆ ಸಚಿವರ ರಾಜೀನಾಮೆಗೆ ವಿಪಕ್ಷಗಳ ಆಗ್ರಹ

Date:

ಪಶ್ಚಿಮ ಬಂಗಾಳದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ ರೈಲಿನ ಅಪಘಾತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ. ರೈಲ್ವೆ ಸಚಿವರ ದುರಾಡಳಿತದಿಂದ ಅಪಘಾತವುಂಟಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ರೀಲ್ಸ್‌ ತಯಾರಿಕೆಯಲ್ಲಿ ರೈಲ್ವೆ ಸಚಿವರು ನಿರತರಾಗಿದ್ದು, ಜನರ ಸುರಕ್ಷತೆಯ ಬಗ್ಗೆ ಚರ್ಚಿಸಲು ಅವರಿಗೆ ಸಮಯವಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಇಂದು ಬೆಳಿಗ್ಗೆ ಪಶ್ಚಿಮ ಬಂಗಾಳ ಸಿಲಿಗುರಿಯಲ್ಲಿ ಸರಕು ಸಾಗಣೆ ರೈಲು ಕಾಂಚನ್‌ಜುಂಗ ಎಕ್ಸ್‌ಪ್ರೆಸ್‌ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 9ಕ್ಕೂ ಹೆಚ್ಚು ಮಂದಿ ಮೃತಪಟ್ಟು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನರೇಂದ್ರ ಮೋದಿ ಸರ್ಕಾರ ವ್ಯವಸ್ಥಿತವಾಗಿ ರೈಲ್ವೆ ಇಲಾಖೆಯನ್ನು ಕ್ಯಾಮೆರಾ ಚಾಲಿತ ಸ್ವಪ್ರಚಾರ ವೇದಿಕೆಯನ್ನಾಗಿ ಪರಿವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ

“ಕಳೆದ 10 ವರ್ಷಗಳಲ್ಲಿ, ನರೇಂದ್ರ ಮೋದಿ ಸರ್ಕಾರ ರೈಲ್ವೆ ಇಲಾಖೆಯನ್ನು ಅತ್ಯಂತ ದುರಾಡಳಿತದಲ್ಲಿ ನಿರ್ವಹಿಸಿದೆ. ಭಾರತೀಯ ರೈಲ್ವೆಯನ್ನುಅಪರಾಧಿಯನ್ನಾಗಿ ಕೈಬಿಟ್ಟಿರುವುದಕ್ಕೆ ಮೋದಿ ಸರ್ಕಾರವೆ ಹೊಣೆಯಾಗಿರುವುದರಿಂದ ನಮ್ಮ ಪ್ರಶ್ನೆಗಳು ನಿರಂತರವಾಗಿ ಉಳಿಯುತ್ತವೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಅಶ್ವಿನಿ ವೈಷ್ಣವ್‌ ಅವರ ರಾಜೀನಾಮೆಗೆ ಒತ್ತಾಯಿಸಿರುವ ಕಾಂಗ್ರೆಸ್ ನಾಯಕ ಪ್ರಮೋದ್‌ ತಿವಾರಿ, ಒಡಿಶಾದ ಕೋರ್‌ಮಂಡಲ್‌ ಎಕ್ಸ್‌ಪ್ರೆಸ್‌ ದುರಂತದಲ್ಲಿ 290 ಮಂದಿ ಮೃತಪಟ್ಟ ಒಂದು ವರ್ಷದ ನಂತರ ಮತ್ತೊಂದು ಅಪಘಾತ ಸಂಭವಿಸಿರುವುದನ್ನು ಉಲ್ಲೇಖಿಸಿದರು.

ಅಶ್ವಿನಿ ವೈಷ್ಣವ್‌ ಅವರ ಅವಧಿಯ ಆಗಸ್ಟ್‌ 2021ರಿಂದ ರೈಲ್ವೆ ಅಪಘಾತಗಳು ಹಾಗೂ ಸುರಕ್ಷತೆಯ ಸಮಸ್ಯೆಗಳಿಂದಾಗಿ 329ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇವರ ಅವಧಿಯಲ್ಲಿ ಗರಿಷ್ಠ ಪ್ರಚಾರ, ಪಿಆರ್‌ ಹಾಗೂ ಸಾಮಾಜಿಕ ಮಾಧ್ಯಮಗಳ ಚಟುವಟಿಕೆಗಳೆ ಹೆಚ್ಚಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಕೇಂದ್ರ ಬಜೆಟ್...

ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದು ಬಿಹಾರ...

ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಪರಿಷ್ಕರಣೆ; ಯಾರ್ಯಾರು ಎಷ್ಟು ತೆರಿಗೆ ಪಾವತಿಸಬೇಕು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2024-25ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದು,...

ಕೇಂದ್ರ ಬಜೆಟ್‌ | ಕರ್ನಾಟಕಕ್ಕಿಲ್ಲ ವಿಶೇಷ ಯೋಜನೆ; ಆಯವ್ಯಯದ ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23)ರಂದು...