ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಮೇಘಾಲಯ ರಾಜ್ಯಪಾಲರಾಗಿ ನೇಮಕ

Date:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಒಟ್ಟು ಮೂರು ರಾಜ್ಯಗಳಲ್ಲಿ ರಾಜ್ಯಪಾಲರನ್ನು ಬದಲಾಯಿಸಲಾಗಿದೆ. ಜುಲೈ 27ರಂದು ತಡರಾತ್ರಿ ಈ ಪ್ರಕಟನೆ ಹೊರಬಿದ್ದಿದೆ.

- Advertisement -

ಕರ್ನಾಟಕದ ಹಿರಿಯ ರಾಜಕಾರಣಿ ವಿಜಯಶಂಕರ್ 1994ರಲ್ಲಿ ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು. ನಂತರ ಲೋಕಸಭೆಯಲ್ಲಿ ಮೈಸೂರು ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೈಸೂರಿನ ಕುರುಬ ನಾಯಕ ವಿಜಯಶಂಕರ್ ಅವರು 1998 ಮತ್ತು 2004ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿ ಪ್ರವೇಶಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಆದರೆ 2014ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಸ್ಪರ್ಧಿಸಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎದುರು ಪರಾಭವಗೊಂಡರು.

ಇದನ್ನು ಓದಿದ್ದೀರಾ?  ರಾಜ್ಯಪಾಲರ ‘ವರ್ತನೆ’ಗೆ ಘಟಿಕೋತ್ಸವದ ವೇದಿಕೆಯಲ್ಲೇ ಕಣ್ಣೀರಿಟ್ಟ ಮಂಗಳೂರು ವಿವಿ ಉಪಕುಲಪತಿ!

2017ರಲ್ಲಿ ಬಿಜೆಪಿ ತೊರೆದಿದ್ದ ವಿಜಯಶಂಕರ್ ಒಂದು ವರ್ಷದಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆಯಾದರು. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮೈಸೂರಿನಿಂದ ಕಾಂಗ್ರೆಸ್ ಟಿಕೆಟ್‌ನಿಂದ ಕಣಕ್ಕಿಳಿದಿದ್ದರು. ಆದರೆ ಪ್ರತಾಪ್ ಸಿಂಹ ವಿರುದ್ಧ 1.38 ಲಕ್ಷ ಮತಗಳ ಅಂತರದಲ್ಲಿ ಸೋಲು ಕಂಡರು.

2019ರ ನವೆಂಬರ್‌ನಲ್ಲಿ ಬಿಜೆಪಿಗೆ ಮರಳಿದರು. ಕಾಂಗ್ರೆಸ್‌ನಲ್ಲಿ ತನ್ನನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ದೂರಿದ್ದರು. 2023ರಲ್ಲಿ ವಿಜಯಶಂಕರ್ ವಿಧಾನಸಭಾ ಚುನಾವಣೆಯಲ್ಲಿ ಪಿರಿಯಾಪಟ್ಟಣ (ಮೈಸೂರು) ಕ್ಷೇತ್ರದಿಂದ ಸ್ಪರ್ಧಿಸಿ ಸೋತರು.

ಮಾಜಿ ಸಚಿವರೂ ಆಗಿರುವ ವಿಜಯಶಂಕರ್ ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳು ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. 2010ರಿಂದ 2016ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...