7 ದಿನಗಳೊಳಗೆ ಭಾರತದಾದ್ಯಂತ ಸಿಎಎ ಜಾರಿ: ಕೇಂದ್ರ ಸಚಿವ

Date:

Advertisements

ದೇಶಾದ್ಯಂತ ಏಳು ದಿನಗಳೊಳಗಾಗಿ ಏಕರೂಪ ನಾಗರೂಪ ಸಂಹಿತೆ(ಸಿಎಎ) ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಕಾಕ್‌ದ್ವೀಪ್‌ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಶಾಂತನು ಠಾಕೂರ್, ನಾನು ನಿಮಗೆ ಏಳು ದಿನಗಳೊಳಗೆ ಗ್ಯಾರಂಟಿ ನೀಡುತ್ತೇನೆ, ಇದು ಕೇವಲ ಬಂಗಾಳ ಮಾತ್ರವಲ್ಲ ಸಿಎಎ ದೇಶಾದ್ಯಂತ ಅನುಷ್ಠಾನಗೊಳಿಸಲಾಗುತ್ತದೆ” ಎಂದು ಹೇಳಿದರು.

ಬಂಗಾಳದ ಬಿಜೆಪಿ ಲೋಕಸಭಾ ಸದಸ್ಯರು ಆಗಿರುವ ಶಾಂತನು ಠಾಕೂರ್ ಸಿಎಎ ಹೇಳಿಕೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದ ಮಾತನ್ನೇ ಪುನರ್ರಚ್ಚರಿಸಿದರು.

Advertisements

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪಶ್ಚಿಮ ಬಂಗಾಳದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ್ದ ಅಮಿತ್ ಶಾ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಅನುಷ್ಠಾನಗೊಳಿಸಲಿದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ಅಮಿತ್‌ ಶಾ ಹೇಳಿಕೆಯ ನೇರವಾದ ಗುರಿಯು ಸಿಎಎಯನ್ನು ಕಠಿಣವಾಗಿ ವಿರೋಧಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಒಳಗೊಂಡಿತ್ತು.

ಡಿಸೆಂಬರ್‌ನಲ್ಲಿ ಕೋಲ್ಕತ್ತಾದ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಅಮಿತ್‌ ಶಾ, ರಾಜ್ಯದಲ್ಲಿ ತಾಂಡವವಾಡುತ್ತಿರುವ ಹಣದುಬ್ಬರ, ಭ್ರಷ್ಟಾಚಾರ, ರಾಜಕೀಯ ಹಿಂಸಾಚಾರಗಳಿಗೆ ಮಮತಾ ಬ್ಯಾನರ್ಜಿ ಕಾರಣರಾಗಿದ್ದು 2023ರ ವಿಧಾನಸಭಾ ಚುನಾವಣೆಗಳಲ್ಲಿ ಮಮತಾ ಅವರನ್ನು ಕೆಳಗಿಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದ್ದರು.

2019ರಲ್ಲಿ ಸಿಎಎಗೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ರಾಷ್ಟ್ರಪತಿಗಳ ಅಂಕಿತಕ್ಕೆ ಸ್ವೀಕಾರಕ್ಕೆ ಹೋದ ನಂತರ ದೇಶಾದ್ಯಂತ ವಿಪಕ್ಷಗಳು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳು ನಡೆದವು.

ಸುದ್ದಿಸಂಸ್ಥೆಗಳ ಮೂಲಗಳ ಪ್ರಕಾರ ಸಿಎಎ ನಿಯಮಗಳು ಕೇಂದ್ರದ ಬಳಿ ಸಿದ್ದವಿದ್ದು ಯೋಜನೆಯನ್ನು ಲೋಕಸಭಾ ಚುನಾವಣೆಗೂ ಮೊದಲು ಅನುಷ್ಠಾನಗೊಳಿಸಲಾಗುತ್ತದೆ. ಯೋಜನೆಯ ನಿಯಮದನ್ವಯ ಭಾರತಕ್ಕೆ ಬರುವ ಅರ್ಜಿದಾರರು ಪ್ರವಾಸಿ ದಾಖಲೆಗಳಿಲ್ಲದೆ ವರ್ಷವನ್ನು ಘೋಷಿಸಿ ಆಗಮಿಸಬಹುದು. ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X