ಕ್ಯಾಬ್‌ ಚಾಲಕನ ಮೇಲೆ ಹಲ್ಲೆ-ಕೊಲೆ ಆರೋಪ; ಪೊಲೀಸ್‌ ಪೇದೆ ಬಂಧನ

Date:

ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣನಾದ ಆರೋಪದ ಮೇಲೆ ತಮಿಳುನಾಡಿನ ಮಧುರವಾಯಲ್ ಪೊಲೀಸ್‌ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ನನ್ನು ಬಂಧಿಸಲಾಗಿದೆ.

ಗುರುವಾರ ತಡರಾತ್ರಿ ಮಧುರವಾಯಲ್ ಸರ್ವೀಸ್ ರಸ್ತೆಯಲ್ಲಿ 39 ವರ್ಷದ ಕ್ಯಾಬ್‌ ಚಾಲಕ ರಾಜ್‌ಕುಮಾರ್‌ ಮೇಲೆ ಹೆಡ್‌ ಕಾನ್ಸ್‌ಟೇಬಲ್ ರಿಜ್ವಾನ್ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ರಸ್ತೆಯಲ್ಲಿ ಬಿದ್ದಿದ್ದ ರಾಜ್‌ಕುಮಾರ್‌ನನ್ನು ದಾರಿ ಹೋಕರು ಕಂಡು, ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ರಾಜ್‌ಕುಮಾರ್ ಅ ವೇಳೆಗಾಗಲೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ರಾಜ್‌ಕುಮಾರ್ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಹಲ್ಲೆ ಬಗ್ಗೆ ತಿಳಿಯದ ಕುಟುಂಬವು ಅಂತ್ಯಸಂಸ್ಕಾರ ನೆರವೇರಿಸಿತ್ತು.

ಪೊಲೀಸರು ಮತ್ತು ಕುಟುಂಬದವರು ಆರಂಭದಲ್ಲಿ ಸಾವಿಗೆ ಹೃದಯಾಘಾತ ಕಾರಣವಿರಬಹುದು ಎಂದು ಭಾವಿಸಿದ್ದರು. ಆದರೆ, ರಾಜ್‌ಕುಮಾರ್ ಸ್ನೇಹಿತೆಯೊಬ್ಬರು ಪದೇ ರಿಜ್ವಾನ್‌ ಹಲ್ಲೆ ನಡೆಸಿರುವ ಬಗ್ಗೆ ಆತನ ಸಹೋದರನಿಗೆ ಮಾಹಿತಿ ನೀಡಿದ ಬಳಿಕ, ಘಟನೆ ಬೆಳಕಿಗೆ ಬಂದಿದೆ.

ಮೂಲಗಳ ಪ್ರಕಾರ, ಗುರುವಾರ ರಾತ್ರಿ ಮಹಿಳೆ ಮತ್ತು ರಾಜ್‌ಕುಮಾರ್ ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದರು. ಆಗ, ರಿಜ್ವಾನ್ ಮತ್ತು ಗಸ್ತು ಕರ್ತವ್ಯದಲ್ಲಿದ್ದ ಇನ್ನೊಬ್ಬ ಕಾನ್‌ಸ್ಟೆಬಲ್ ಆ ಮಾರ್ಗವಾಗಿ ಬಂದಿದ್ದಾರೆ. ತಡರಾತ್ರಿ ಏನು ಮಾಡುತ್ತಿದ್ದೀರಿ ಎಂದು ಇಬ್ಬರನ್ನೂ ಪ್ರಶ್ನಿಸಿದ್ದಾರೆ. ರಾಜ್‌ಕುಮಾರ್ ಕಾರಿನಿಂದ ಇಳಿದು ಅವರೊಂದಿಗೆ ಮಾತನಾಡಿದ್ದು, ಮಾತಿಗೆ ಮಾತ ಬೆಳೆದು ರಾಜ್‌ಕುಮಾರ್‌ ಅವರ ಬೆನ್ನಿಗೆ ರಿಜ್ವಾನ್‌ ಹೊಡೆದಿದ್ದಾರೆ.

ರಾಜ್‌ಕುಮಾರ್ ಕುಸಿದು ಬಿದ್ದಾಗ, ಆತನನ್ನು ಎಚ್ಚರಿಸಲು ಪೊಲೀಸರು ಯತ್ನಿಸಿದ್ದಾರೆ. ಬಳಿಕ, ಮಹಿಳೆಗೆ ಸ್ಥಳದಿಂದ ಹೋಗುವಂತೆ ಬೆದರಿಕೆ ಹಾಕಿದ್ದಾರೆ. ಆಕೆ ಹೋದ ಬಳಿಕ, ರಾಜ್‌ಕುಮಾರ್‌ನನ್ನು ಸ್ಥಳದಲ್ಲೇ ಬಿಟ್ಟು ಪೊಲೀಸ್‌ ಪೇದೆಗಳು ಪರಾರಿಯಾಗಿದ್ದಾರೆ.

ಮಹಿಳೆ ರಾಜ್‌ಕುಮಾರ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿ, ಘಟನೆ ಬಗ್ಗೆ ವಿವರಿಸಿದ್ದಾರೆ. ಬಳಿಕ, ರಾಜ್‌ಕುಮಾರ್‌ನ ಅಣ್ಣ ಜಯಕುಮಾರ್ ಮಧುರವಾಯಲ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು, ರಿಜ್ವಾನ್ ವಿರುದ್ಧ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಿಜ್ವಾನ್‌ನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಜ್ರಿವಾಲ್ ಜಾಮೀನು ವಿಸ್ತರಣೆ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಸ್ತರಣೆ ಅರ್ಜಿಯ...

ಅಂತ್ಯಗೊಳ್ಳುತ್ತಿದೆ ಮೋದಿ-ಶಾ ‘ಬ್ರಾಂಡ್’ ರಾಜಕಾರಣ; ಅದಕ್ಕೆ ಮಹಾರಾಷ್ಟ್ರವೇ ಸಾಕ್ಷಿ

ನರೇಂದ್ರ ಮೋದಿ ಮತ್ತು ಅಮಿತ್ ಶಾ – ಇಬ್ಬರಿಗೂ ದಿನನಿತ್ಯ ಒಂದಲ್ಲೊಂದು...

ಅಸ್ಸಾಂ| ಮನೆಯ ಬಾತ್‌ರೂಮ್‌ನಲ್ಲಿತ್ತು 35 ಹಾವುಗಳು; ವಿಡಿಯೋ ವೈರಲ್

ಅಸ್ಸಾಂನಲ್ಲಿ ನಾಗಾಂವ್ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಮನೆಯೊಂದರ ಬಾತ್‌ರೂಮ್‌ನಲ್ಲಿ ಬರೋಬ್ಬರಿ 35...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ...