ಟಿಎಂಸಿಗೆ ರಿಲೀಫ್: ಫ್ರೀಜ್ ಆಗಿದ್ದ ಬ್ಯಾಂಕ್ ಖಾತೆಗಳ ಬಳಕೆಗೆ ಕೋಲ್ಕತ್ತಾ ಹೈಕೋರ್ಟ್ ಗ್ರೀನ್ ಸಿಗ್ನಲ್!

Date:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೋಲ್ಕತ್ತಾ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಟಿಎಂಸಿ ಬಂಡಾಯ ಶಾಸಕ ಬಿಸ್ವನಾಥ್ ದಾಸ್ ನೀಡಿದ ದೂರಿನ ಮೇರೆಗೆ ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಟಿಎಂಸಿಯ ಮೂರು ಪ್ರಮುಖ ಬ್ಯಾಂಕ್ ಖಾತೆಗಳನ್ನು ದಿನನಿತ್ಯದ ವೆಚ್ಚಗಳಿಗಾಗಿ ಬಳಸಲು ಕೋಲ್ಕತ್ತಾ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

- Advertisement -

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೌಗತ ಭಟಾಚಾರ್ಯ ಅವರ ಪೀಠವು ನಿವೃತ್ತ ನ್ಯಾಯಾಧೀಶರಾದ ಜಸ್ಟಿಸ್ ಸುಬ್ರತಾ ತಾಲೂಕ್ದಾರ್ ಅವರನ್ನು ವಿಶೇಷ ಅಧಿಕಾರಿಯನ್ನಾಗಿ ನೇಮಕ ಮಾಡಿದೆ. ಸೆಪ್ಟೆಂಬರ್ 30ರವರೆಗೆ ತಾಲೂಕ್ದಾರ್ ಅವರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಮಾತ್ರ ಟಿಎಂಸಿ ಖಾತೆಗಳನ್ನು ನಿರ್ವಹಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಇದನ್ನೂ ಓದಿ: ಟಿಎಂಸಿ ಬ್ಯಾಂಕ್ ಖಾತೆಗಳ ಫ್ರೀಜ್ ಮಾಡಲು ಇಷ್ಟೊಂದು ತರಾತುರಿ ಏನಿತ್ತು: ಕೋಲ್ಕತ್ತಾ ಹೈಕೋರ್ಟ್ ಪ್ರಶ್ನೆ

ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಕೇವಲ ಪಕ್ಷದ ದಿನನಿತ್ಯದ ನಿರ್ವಹಣೆ, ದೈನಂದಿನ ವೆಚ್ಚಗಳು ಮತ್ತು ಕಾನೂನು ಹೋರಾಟದ ವೆಚ್ಚಗಳಿಗಾಗಿ ಮಾತ್ರ ಬಳಸಬೇಕು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಪ್ರಮುಖ ಅಥವಾ ಸಣ್ಣ ವೆಚ್ಚಗಳಿಗೆ ಹಣ ಬಳಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇನ್ನು ಬ್ಯಾಂಕ್‌ನಿಂದ ಹಣ ಹಿಂಪಡೆಯಲು ಟಿಎಂಸಿಯ ಇಬ್ಬರು ಅಧಿಕೃತ ಸಹಿದಾರರು ಚೆಕ್‌ಗಳನ್ನು ವಿಶೇಷ ಅಧಿಕಾರಿಗೆ ಸಲ್ಲಿಸಬೇಕು. ಅವರು ಪರಿಶೀಲಿಸಿ ಕೌಂಟರ್ ಸಹಿ ಮಾಡಿದ ನಂತರವಷ್ಟೇ ಬ್ಯಾಂಕ್‌ಗೆ ಪ್ರಸ್ತುತಪಡಿಸಿ ಹಣ ಪಡೆಯಬಹುದಾಗಿದೆ. ಇನ್ನು ವಿಶೇಷ ಅಧಿಕಾರಿಗೆ ಮಾಸಿಕ ₹1.25 ಲಕ್ಷ ಗೌರವಧನವನ್ನು ಇದೇ ಖಾತೆಯಿಂದ ನೀಡಲು ಕೋರ್ಟ್ ಸೂಚಿಸಿದೆ.

ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್

ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋಲನ್ನು ಅನುಭವಿಸಿದ ಬೆನ್ನಲ್ಲೇ, ಪಕ್ಷದ ಬಂಡಾಯ ಶಾಸಕ ಬಿಸ್ವನಾಥ್ ದಾಸ್ ಹಣ ದುರುಪಯೋಗದ ಆರೋಪ ಮಾಡಿ ಜೂನ್ 18ರಂದು ಸಂಜೆ 6 ಗಂಟೆಗೆ ದೂರು ನೀಡಿದ್ದರು. ದೂರು ದಾಖಲಾದ ಮರುದಿನವೇ ಅಂದರೆ ಜೂನ್ 19ರಂದು ಬಿಧಾನನಗರ ಪೊಲೀಸರು ತರಾತುರಿಯಲ್ಲಿ ಟಿಎಂಸಿ ಖಾತೆಗಳನ್ನು ಡೆಬಿಟ್ ಫ್ರೀಜ್ ಮಾಡಿದ್ದರು. ಪೊಲೀಸರ ಈ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಬಂಗಾಳದ ‘ಗೂಂಡಾರಾಜ್ಯ’ಕ್ಕೆ ಪೊಲೀಸರೇ ಮೂಕಸಾಕ್ಷಿ: ಟಿಎಂಸಿ ಶಾಂತಿಯುತ ಪ್ರತಿಭಟನೆ ಮೇಲೆ ಬಿಜೆಪಿ ದಾಳಿ

“ಸಾಮಾನ್ಯ ಅಥವಾ ಬಡ ನಾಗರಿಕರು ಪೊಲೀಸ್ ಠಾಣೆಗೆ ಹೋದರೆ ಇಷ್ಟು ವೇಗವಾಗಿ ಸ್ಪಂದಿಸದ ಪೊಲೀಸರು, ಈ ಪ್ರಕರಣದಲ್ಲಿ ಮಿಂಚಿನ ವೇಗದಲ್ಲಿ ಖಾತೆಗಳನ್ನು ಫ್ರೀಜ್ ಮಾಡಿದ್ದು ಏಕೆ?” ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದರು.

ಹಾಗೆಯೇ, “ಇಷ್ಟು ದೊಡ್ಡ ಕ್ರಮ ಕೈಗೊಳ್ಳಲು ಪೊಲೀಸರ ಬಳಿ ಸದ್ಯಕ್ಕೆ ಯಾವುದೇ ನಿರ್ದಿಷ್ಟ ಸಾಕ್ಷ್ಯಾಧಾರಗಳಿಲ್ಲ. ಶಾಸಕರ ದೂರು ಕೂಡ ಯಾವುದೇ ನಿರ್ದಿಷ್ಟ ವಹಿವಾಟಿನ ಆಧಾರವಿಲ್ಲದ ಕೇವಲ ಸಾರಾಸಗಟು ಆರೋಪದಂತೆ ಕಾಣಿಸುತ್ತಿದೆ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಆಯಿಷಾ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ...