SIR; ಮತದಾನದ ಹಕ್ಕು ಕಳೆದುಕೊಂಡವರ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಕೋಲ್ಕತ್ತಾ ಹೈಕೋರ್ಟ್

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ವಿಚಾರಣೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ನಿರಾಕರಿಸಿದ್ದು, ಈ ಅರ್ಜಿಯನ್ನು ವಜಾಗೊಳಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ನೇತೃತ್ವದ ವಿಭಾಗೀಯ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸುವಂತೆ ಕೋಲ್ಕತ್ತಾ ಹೈಕೋರ್ಟ್ ತಿಳಿಸಿದ್ದು, ಅರ್ಜಿದಾರರ ವಕೀಲರು ಈ ವಿಷಯದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ಬಂಗಾಳ ಸರ್ಕಾರ vs ಚು.ಆಯೋಗ: ‘ನ್ಯಾಯಾಂಗ ಅಧಿಕಾರಿಗಳನ್ನು ಅನುಮಾನಿಸಬೇಡಿ’ ಎಂದ ಸುಪ್ರೀಂ ಕೋರ್ಟ್

ಎಸ್‌ಐಆರ್ ಪ್ರಕ್ರಿಯೆಯು ಸುಪ್ರೀಂ ಕೋರ್ಟ್‌ನ ನೇರ ಉಸ್ತುವಾರಿಯಲ್ಲಿ ನಡೆಯುತ್ತಿದೆ. ಆದ್ದರಿಂದ ಹೈಕೋರ್ಟ್‌ನ ಪಾತ್ರವು ಕೇವಲ ಆಡಳಿತಾತ್ಮಕವಾಗಿ (ನ್ಯಾಯಮಂಡಳಿಗಳಿಗೆ ನ್ಯಾಯಾಧೀಶರನ್ನು ನೇಮಿಸುವುದು ಇತ್ಯಾದಿ) ಸೀಮಿತವಾಗಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಘಟಕದ ಅಧ್ಯಕ್ಷರಾದ ಎಸ್.ಕೆ. ಅನ್ವರ್ ಅಲಿ ಈ ಅರ್ಜಿಯನ್ನು ಸಲ್ಲಿಸಿದ್ದರು. ಲಕ್ಷಾಂತರ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಸ್ಪಷ್ಟತೆ ಇಲ್ಲ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಏಪ್ರಿಲ್ 23ರಂದು ಮೊದಲನೆಯ ಹಂತದ ವಿಧಾನಸಭೆ ಚುನಾವಣೆಯನ್ನು ಎದುರಿಸಲಿರುವ ಪಶ್ಚಿಮ ಬಂಗಾಳದಲ್ಲಿ ನಡೆದ SIR ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಫೆಬ್ರವರಿ ಅಂತಿಮ ಪಟ್ಟಿಯ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಈಗ ಒಟ್ಟು 7.04 ಕೋಟಿ ಮತದಾರರಿದ್ದಾರೆ. ಡಿಲೀಟ್ ಆದ ಹೆಸರುಗಳಲ್ಲಿ ಸುಮಾರು 31.1 ಲಕ್ಷ (34%) ಮುಸ್ಲಿಮರು ಮತ್ತು 57.47 ಲಕ್ಷ (63%) ಹಿಂದೂಗಳು ಆಗಿದ್ದಾರೆ.

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರ ಪಾಲು 27% ರಷ್ಟಿದ್ದರೂ, ಅಳಿಸಲಾದ ಮತದಾರರಲ್ಲಿ ಅವರ ಪ್ರಮಾಣ 34% ಇರುವುದು ಅಸಮಾನ ಪರಿಣಾಮವನ್ನು ತೋರಿಸುತ್ತಿದೆ ಎಂದು ಈಗಾಗಲೇ ತಜ್ಞರು ಮತ್ತು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. ಚುನಾವಣಾ ಆಯೋಗವು ಕೇಂದ್ರದ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ವಿಪಕ್ಷಗಳು ದೂರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...