ಸಹಿ ಫೋರ್ಜರಿ ಪ್ರಕರಣ: ಅಭಿಷೇಕ್ ಬ್ಯಾನರ್ಜಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

Date:

ಸಹಿ ಫೋರ್ಜರಿ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಕೋಲ್ಕತ್ತಾ ಹೈಕೋರ್ಟ್‌ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಕೋಲ್ಕತ್ತಾ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೌಶಿಕ್ ಚಂದಾ ಅವರು ಅಭಿಷೇಕ್ ಬ್ಯಾನರ್ಜಿ ಅವರಿಗೆ ಮೂರು ವಾರಗಳ ಕಾಲ ಯಾವುದೇ ಕಠಿಣ ಕ್ರಮ ಅಥವಾ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ್ದಾರೆ. ಆದರೆ, ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಆದೇಶಿಸಿದ್ದಾರೆ.

- Advertisement -

ನವದೆಹಲಿಯಿಂದ ಹಿಂದಿರುಗಿದ ತಕ್ಷಣ ಅಭಿಷೇಕ್ ಬ್ಯಾನರ್ಜಿ ಅವರು ಸಂಜೆ ಸುಮಾರು 5:50 ಕ್ಕೆ ಕೋಲ್ಕತ್ತಾದ ಆಲಿಪೋರ್‌ನಲ್ಲಿರುವ ಸಿಐಡಿ ಪ್ರಧಾನ ಕಚೇರಿ ‘ಭವಾನಿ ಭವನ’ಕ್ಕೆ ಹಾಜರಾಗಿದ್ದರು. ಅಲ್ಲಿ ಸಿಐಡಿ ಅಧಿಕಾರಿಗಳ ತಂಡವು ಅವರನ್ನು ಸುಮಾರು 5.5 ರಿಂದ 6 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಮುಗಿಸಿ ರಾತ್ರಿ 11:30ರ ಸುಮಾರಿಗೆ ಬ್ಯಾನರ್ಜಿ ಹೊರಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ಓದಿದ್ದೀರಾ? TMC ಒಡಕಿಗೆ ಮಮತಾ ಉತ್ತರಾಧಿಕಾರಿ ‘ಅಭಿಷೇಕ್ ಬ್ಯಾನರ್ಜಿ’ ಪಾತ್ರವೆಷ್ಟು?

ತೃಣಮೂಲ ಕಾಂಗ್ರೆಸ್ ಇತ್ತೀಚಿನ ವಿಧಾನಸಭಾ ಚುನಾವಣೆಯ ನಂತರ ಹಿರಿಯ ನಾಯಕ ಶೋವನ್‌ದೇವ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಲು ನಿರ್ಧರಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಮೇ 6 ರಂದು ಪಕ್ಷದ ಶಾಸಕರ ಸಭೆ ನಡೆಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು ಎಂದು ಅಭಿಷೇಕ್ ಬ್ಯಾನರ್ಜಿ ಅವರು ಶಾಸಕರ ಸಹಿ ಇರುವ ಪಟ್ಟಿಯನ್ನು ವಿಧಾನಸಭಾ ಸ್ಪೀಕರ್ ಕಚೇರಿಗೆ ಸಲ್ಲಿಸಿದ್ದರು.

ಆದರೆ, ಟಿಎಂಸಿಯ ಇಬ್ಬರು ಬಂಡಾಯ ಶಾಸಕರಾದ ರಿತಬ್ರತ ಬ್ಯಾನರ್ಜಿ ಮತ್ತು ಸಂದೀಪನ್ ಸಹಾ ಅವರು ಸ್ಪೀಕರ್ ಅವರಿಗೆ ದೂರು ನೀಡಿ, “ಮೇ 6 ರಂದು ಅಂತಹ ಯಾವುದೇ ಸಭೆ ನಡೆದಿಲ್ಲ ಮತ್ತು ಯಾವುದೇ ನಿರ್ಣಯ ಕೈಗೊಂಡಿಲ್ಲ. ನಮ್ಮನ್ನು ಮೇ 19ರಂದು ಕೇವಲ ರಿಜಿಸ್ಟರ್‌ನಲ್ಲಿ ಸಹಿ ಮಾಡಲು ಕೇಳಲಾಗಿತ್ತು” ಎಂದು ಆರೋಪಿಸಿದ್ದರು.

ವಿಧಾನಸಭಾ ಸಚಿವಾಲಯದ ಮುಖ್ಯ ಕಾರ್ಯದರ್ಶಿಗಳು ನೀಡಿದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ವಂಚನೆ, ನಕಲಿ ದಾಖಲೆ ಸೃಷ್ಟಿ ಮತ್ತು ಕ್ರಿಮಿನಲ್ ಪಿತೂರಿ (BNS ಸೆಕ್ಷನ್‌ಗಳ ಅಡಿಯಲ್ಲಿ) ಮೊಕದ್ದಮೆ ದಾಖಲಾಗಿತ್ತು. ನಂತರ ಮೇ 28 ರಂದು ಈ ಪ್ರಕರಣದ ತನಿಖೆಯನ್ನು ರಾಜ್ಯ ಸಿಐಡಿಗೆ ವಹಿಸಲಾಗಿದೆ.

ಮೂಲ ನಿರ್ಣಯದ ಪುಸ್ತಕ ಅಭಿಷೇಕ್ ಬ್ಯಾನರ್ಜಿ ಅವರ ಬಳಿ ಇರುವುದರಿಂದ, ಅದನ್ನು ವಶಪಡಿಸಿಕೊಳ್ಳಲು ಮತ್ತು ತನಿಖೆ ನಡೆಸಲು ಅವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸಿಐಡಿ ಪರ ವಕೀಲರು ಕೋರ್ಟ್‌ನಲ್ಲಿ ವಾದಿಸಿದ್ದರು. ತನಿಖಾ ಸಂಸ್ಥೆಯು ಕಾನೂನುಬದ್ಧವಾಗಿ ಶೋಧನೆ ನಡೆಸಲು ಸ್ವತಂತ್ರವಾಗಿದೆ, ಆದರೆ ಆರೋಪಿಯು ತನ್ನ ವಿರುದ್ಧವೇ ಸಾಕ್ಷಿ ನುಡಿಯುವಂತೆ ಒತ್ತಾಯಿಸುವಂತಿಲ್ಲ ಎಂದು ತಿಳಿಸಿ, ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು ‘ರನ್‌ಆಫ್’ ವ್ಯವಸ್ಥೆ, ಭಾರತಕ್ಕೂ ಇದು ಅಗತ್ಯವೇ?

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...