ಟಿಎಂಸಿ ಬ್ಯಾಂಕ್ ಖಾತೆಗಳ ಫ್ರೀಜ್ ಮಾಡಲು ಇಷ್ಟೊಂದು ತರಾತುರಿ ಏನಿತ್ತು: ಕೋಲ್ಕತ್ತಾ ಹೈಕೋರ್ಟ್ ಪ್ರಶ್ನೆ

Date:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿರುವ ಪಶ್ಚಿಮ ಬಂಗಾಳದ ಬಿದಾನಗರ ಪೊಲೀಸ್ ಕಮಿಷನರೇಟ್‌ನ ಸೈಬರ್ ಕ್ರೈಮ್‌ನ ತರಾತುರಿಯನ್ನು ಕೋಲ್ಕತ್ತಾ ಹೈಕೋರ್ಟ್ ಪ್ರಶ್ನಿಸಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಇಷ್ಟೊಂದು ವೇಗವಾಗಿ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಹಿಂದೆ ಇರುವ ಬಲವಾದ ಆಧಾರಗಳೇನು ಎಂದು ನ್ಯಾಯಾಲಯ ಪ್ರಶ್ನಿಸಿದೆ.

- Advertisement -

ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿ ಬಣದ ಶಾಸಕರು ನೀಡಿದ ದೂರಿನ ಮೇರೆಗೆ ಬಿಧಾನನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸುಮಾರು ₹440 ಕೋಟಿ ರೂ. ಹೊಂದಿರುವ ಮೂರು ಪ್ರಮುಖ ಬ್ಯಾಂಕ್ ಖಾತೆಗಳ ಮೇಲೆ ಈ ಹಿಂದೆ ಡೆಬಿಟ್ ಫ್ರೀಜ್ ವಿಧಿಸಲಾಗಿತ್ತು. ಈ ಹಣದ ಮೂಲ ಕಾನೂನುಬದ್ಧವಾಗಿದೆಯೇ ಅಥವಾ ಅಕ್ರಮವಾಗಿ ಸಂಗ್ರಹಿಸಲಾದ ಹಣವೇ ಎಂಬುದರ ತನಿಖೆಗೆ ಶಾಸಕರು ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಬಂಗಾಳ ಚುನಾವಣೆ | 250 ಅಧಿಕಾರಿಗಳ ದಿಢೀರ್ ವರ್ಗಾವಣೆ; ಚು. ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಪೀಠವು, ಎಫ್‌ಐಆರ್ ದಾಖಲಾದ ಕೇವಲ ಒಂದೇ ದಿನದಲ್ಲಿ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲು ಸೈಬರ್ ಕ್ರೈಮ್‌ಗೆ ಇದ್ದ ತುರ್ತು ಮತ್ತು ಅದರ ಹಿಂದಿರುವ ಸಾಕ್ಷ್ಯಗಳ ಬಗ್ಗೆ ಪ್ರಶ್ನೆ ಮಾಡಿದೆ. ದೂರಿನಲ್ಲಿ ನಿರ್ದಿಷ್ಟ ಆರೋಪಗಳಿಲ್ಲದೆ ಕೇವಲ ಸಾಮಾನ್ಯ ಅಥವಾ ಅಸ್ಪಷ್ಟ ಆರೋಪಗಳಿವೆ ಎಂದು ಕೋರ್ಟ್ ಹೇಳಿದೆ.

ಇನ್ನು ಟಿಎಂಸಿ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಕಿಶೋರ್ ದತ್ತಾ ಅವರು ವಾದ ಮಂಡಿಸಿದ್ದಾರೆ. ಬ್ಯಾಂಕ್ ಖಾತೆಗಳ ಫ್ರೀಜ್‌ನಿಂದಾಗಿ ರಾಜಕೀಯ ಪಕ್ಷದ ದೈನಂದಿನ ಹಣಕಾಸು ವ್ಯವಹಾರಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಆದ್ದರಿಂದ ತಕ್ಷಣವೇ ಮಧ್ಯಂತರ ಪರಿಹಾರ ನೀಡಬೇಕು ಎಂದು ಕೋರಿದರು. ಆದರೆ, ಹೈಕೋರ್ಟ್ ತಕ್ಷಣದ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದೆ.

ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ, ಫ್ರೀಜ್ ಮಾಡಲಾದ ಬ್ಯಾಂಕ್ ಖಾತೆಗಳಲ್ಲಿರುವ ಒಟ್ಟು ಮೊತ್ತದ ವಿವರಗಳು ಹಾಗೂ ತನಿಖೆಯ ವೇಳೆ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳನ್ನು ತನ್ನ ಮುಂದೆ ಮಂಡಿಸುವಂತೆ ಸೈಬರ್ ಕ್ರೈಮ್‌ ತಂಡಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...