35 ವರ್ಷಗಳಲ್ಲಿ ಇದೇ ಮೊದಲು ನನಗಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದೇನೆ: ಪ್ರಿಯಾಂಕಾ ಗಾಂಧಿ

Date:

ಸುಮಾರು 35 ವರ್ಷಗಳಲ್ಲಿ ಇತರರ ಚುನಾವಣಾ ಪ್ರಚಾರ ಮಾಡುತ್ತಿದ್ದ ನಾನು ಈಗ ನನಗಾಗಿ ಚುನಾವಣಾ ಪ್ರಚಾರವನ್ನು ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕಳೆದ 35 ವರ್ಷಗಳಲ್ಲಿ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಇತರೆ ಕಾಂಗ್ರೆಸ್ ನಾಯಕರುಗಳ ಚುನಾವಣಾ ಪ್ರಚಾರವನ್ನು ಪ್ರಿಯಾಂಕಾ ಗಾಂಧಿ ಮಾಡಿದ್ದಾರೆ.

- Advertisement -

ರಾಯಬರೇಲಿ ಮತ್ತು ವಯನಾಡ್ ಲೋಕಸಭೆ ಚುನಾವಣೆಯ ಕಣಕ್ಕಿಳಿದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ. ವಯನಾಡ್ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಯ್‌ಬರೇಲಿ ಕ್ಷೇತ್ರವನ್ನು ರಾಹುಲ್ ಉಳಿಸಿಕೊಂಡಿದ್ದಾರೆ. ವಯನಾಡ್‌ನಲ್ಲಿ ಉಪಚುನಾವಣೆ ನಡೆಯಲಿದ್ದು ಉಪಚುನಾವಣೆಗೆ ನಾಮಪತ್ರ ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ಕಣಕ್ಕಿಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಪರ ಪ್ರಚಾರ ಮಾಡುವಾಗ ನನಗೆ 17 ವರ್ಷ ವಯಸ್ಸಾಗಿತ್ತು. ಅದಾದ ಬಳಿಕ ನಾನು ನನ್ನ ತಾಯಿ, ಸಹೋದರ ಮತ್ತು ನನ್ನ ಅನೇಕ ಮಿತ್ರರಿಗಾಗಿ ಪ್ರಚಾರ ಮಾಡಿದೆ. 35 ವರ್ಷಗಳಿಂದ ನಾನು ವಿವಿಧ ಚುನಾವಣೆಗಳಲ್ಲಿ ಪ್ರಚಾರ ಮಾಡಿದ್ದೇನೆ. ಆದರೆ ಇದೇ ಮೊದಲ ಬಾರಿಗೆ ನನಗಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದೇನೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ವಯನಾಡು ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

“ಈ ಬಾರಿ ನನಗೆ ನಿಮ್ಮ ಬೆಂಬಲ ನೀಡಿ ಎಂದು ಕೋರುವುದು ಒಂದು ವಿಭಿನ್ನವಾದ ಭಾವನೆಯಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ನಿಮ್ಮನ್ನು ಪ್ರತಿನಿಧಿಸುವುದೇ ನನಗೆ ಸಿಗುವ ಗೌರವವಾಗಿದೆ” ಎಂದರು.

ಇನ್ನು 400ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ವಯನಾಡ್ ಭೂಕುಸಿತದ ಬಗ್ಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, “ನಾನು ನನ್ನ ಕಣ್ಣಾರೆ ಆ ವಿನಾಶವನ್ನು ನೋಡಿದೆ. ಕುಟುಂಬವನ್ನು ಕಳೆದುಕೊಂಡ ಮಕ್ಕಳನ್ನು ನಾನು ನೋಡಿದೆ. ಮಕ್ಕಳನ್ನು ಕಳೆದುಕೊಂಡ ತಾಯಂದಿರನ್ನು ನಾನು ಭೇಟಿ ಮಾಡಿದೆ. ಇಡೀ ಜೀವನವನ್ನೇ ಕಳೆದುಕೊಂಡ ಜನರನ್ನು ನಾನು ಭೇಟಿಯಾದೆ. ಅವರು ಪರಸ್ಪರ ಸಹಾಯ ಮಾಡುವುದರಲ್ಲಿ ನಿರತರಾಗಿದ್ದರು. ದುರಾಸೆಯಿಲ್ಲದೆ, ಸಹಾನುಭೂತಿಯಿಂದ ಒಬ್ಬರಿಗೊಬ್ಬರು ಬೆಂಬಲಿಸಿದ್ದಾರೆ” ಎಂದು ತಿಳಿಸಿದರು.

ವಯನಾಡ್‌ನಲ್ಲಿ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ನವೆಂಬರ್ 23ರಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುವ ಸಂದರ್ಭದಲ್ಲೇ ವಯನಾಡ್‌ ಚುನಾವಣಾ ಫಲಿತಾಂಶ ಹೊರಬೀರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...