ಯುಜಿಸಿ-ನೆಟ್‌| ಹೊಸ ದಿನಾಂಕ ಪ್ರಕಟ; ಆಗಸ್ಟ್‌ 21ರಿಂದ ಸೆಪ್ಟೆಂಬರ್ 4ರವರೆಗೆ ಪರೀಕ್ಷೆ

Date:

ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ರದ್ದುಪಡಿಸಿದ ಮತ್ತು ಮುಂದೂಡಲ್ಪಟ್ಟ ಯುಜಿಸಿ-ನೆಟ್‌ ಪರೀಕ್ಷೆಗಳಿಗೆ ಹೊಸ ದಿನಾಂಕವನ್ನು ಪ್ರಕಟಿಸಿದೆ. ಯುಜಿಸಿ-ನೆಟ್ ಅರ್ಹತಾ ಪರೀಕ್ಷೆಯನ್ನು ಈಗ ಆಗಸ್ಟ್ 21ರಿಂದ ಸೆಪ್ಟೆಂಬರ್ 4 ನಡುವೆ ನಡೆಸಲಾಗುವುದು ಎಂದು ಘೋಷಿಸಿದೆ.

- Advertisement -

ಜೂನ್ 18ರಂದು ಯುಜಿಸಿ ನೆಟ್ ಪರೀಕ್ಷೆ ನಡೆದಿದೆ. ಆದರೆ ಪ್ರಶ್ನಾ ಪತ್ರಿಕೆ ಸೋರಿಕೆ ಆಗಿದ್ದ ಬಗ್ಗೆ ಶಿಕ್ಷಣ ಸಚಿವಾಲಯಕ್ಕೆ ಮಾಹಿತಿ ಬಂದ ಕಾರಣ ಪರೀಕ್ಷೆ ನಡೆದ ಒಂದು ದಿನದೊಳಗೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಶ್ನೆ ಪತ್ರಿಕೆ ಡಾರ್ಕ್‌ನೆಟ್‌ನಲ್ಲಿ ಸೋರಿಕೆಯಾಗಿದೆ ಮತ್ತು ಟೆಲಿಗ್ರಾಮ್ ಆ್ಯಪ್‌ನಲ್ಲಿ ಪ್ರಸಾರವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ.

ಇದನ್ನು ಓದಿದ್ದೀರಾ? ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌: ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ

ಯುಜಿಸಿ ನೆಟ್ ಪರೀಕ್ಷೆ ರದ್ದಾದ ಬಳಿಕವೇ ಕಳೆದ ಭಾನುವಾರ ನಡೆಯಬೇಕಿದ್ದ ನೀಟ್ ಸ್ನಾತಕೋತ್ತರ (ನೀಟ್ ಪಿಜಿ) ಪ್ರವೇಶ ಪರೀಕ್ಷೆಯನ್ನು ದಿಢೀರ್ ಆಗಿ ಮುಂದೂಡಿಕೆ ಮಾಡಲಾಗಿದೆ. ಪರೀಕ್ಷೆ ನಡೆಯುವುದಕ್ಕೂ 10 ಗಂಟೆಗೂ ಮುನ್ನ ಪರೀಕ್ಷೆ ಮುಂದೂಡಿಕೆ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಯುಜಿಸಿ-ನೆಟ್ ಜೂನಿಯರ್ ರಿಸರ್ಚ್ ಫೆಲೋಶಿಪ್, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮತ್ತು ಪಿಎಚ್‌ಡಿ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆಯಾಗಿದೆ. ಈ ಹಿಂದೆ ಆಫ್‌ಲೈನ್‌ನಲ್ಲಿ ನಡೆಸಲಾಗಿದ್ದ ಪರೀಕ್ಷೆಯನ್ನು ಹಿಂದಿನ ಮಾದರಿಯಂತೆ ಹದಿನೈದು ದಿನಗಳ ಕಾಲ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿ ನಡೆಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...