ಪಾಕಿಸ್ತಾನ ಹೇಳಿಕೆ – ಸುಪ್ರೀಂ ವಿಚಾರಣೆ: ‘ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಬೇಡಿ’ ಎಂದ ಸಿಜೆಐ

Date:

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಬೆಂಗಳೂರಿನಲ್ಲಿ ಮುಸ್ಲಿಮರು ಹೆಚ್ಚು ವಾಸಿಸುವ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದಿದ್ದರು. ಅವರ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್‌ ‘ಸು ಮೋಟೊ’ ಪ್ರಕರಣ ದಾಖಲಿಸಿತ್ತು. ಬಳಿಕ, ಶ್ರೀಶಾನಂದ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದು, ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ಈ ವೇಳೆ, “ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.

- Advertisement -

ಶ್ರೀಶಾನಂದ ವಿರುದ್ಧದ ‘ಸು ಮೋಟೊ’ ಪ್ರಕರಣದ ವಿಚಾರಣೆಯಲ್ಲಿ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿದೆ. “ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ” ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ನ್ಯಾಯ ಮತ್ತು ನ್ಯಾಯಾಂಗದ ಘನತೆಯ ಹಿತಾಸಕ್ತಿಯಿಂದಾಗಿ ‘ಸು ಮೋಟೊ’ ಪ್ರಕರಣವನ್ನು ಮುಕ್ತಾಯಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

“ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮ ಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ. ಅಂತಹ ಅವಲೋಕನಗಳು ಪಕ್ಷಪಾತದಿಂದ ಕೂಡಿರಬಾರದು. ಎಲ್ಲರನ್ನು ಒಳಗೊಳ್ಳುವಂತಿರಬೇಕು” ಎಂದು ಸಿಜೆಐ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ಮತ್ತೊಂದು ಅಸಹ್ಯಕರ ಹೇಳಿಕೆ: ವ್ಯಾಪಕ ಖಂಡನೆ

ಪ್ರಕರಣವೊಂದರ ವಿಚಾರಣೆ ವೇಳೆ, ಶ್ರೀಶಾನಂದ ಅವರು ಭೂಮಾಲೀಕ-ಬಾಡಿಗೆದಾರರ ವಿವಾದವನ್ನು ಉಲ್ಲೇಖಿಸಿ ಮಾತನಾಡಿದ್ದರು. ಆಗ, ಬೆಂಗಳೂರಿನಲ್ಲಿ ಮುಸ್ಲಿಂ ಬಾಹುಳ್ಯವಿರುವ ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಉಲ್ಲೇಖಿಸಿದ್ದರು. ಮಾತ್ರವಲ್ಲದೆ, ಮತ್ತೊಂದು ಪ್ರಕರಣದ ವಿಚಾರಣೆ ವೇಳೆ, ಮಹಿಳಾ ವಕೀಲರನ್ನು ಅಸಹ್ಯಕರ ಪದಗಳನ್ನು ಬಳಸಿ, ಅಪಮಾನ ಮಾಡಿದ್ದರು. ಎರಡೂ ಘಟನೆಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನ್ಯಾಯಾಧೀಶ ಶ್ರೀಶಾನಂದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ, ಶ್ರೀಶಾನಂದ ವಿರುದ್ಧ ಸುಪ್ರೀಂ ಕೋರ್ಟ್‌ ಪ್ರಕರಣ ದಾಖಲಿಸಿಕೊಂಡು, ಕರ್ನಾಟಕ ಹೈಕೋರ್ಟ್‌ಗೆ ನೋಟಿಸ್ ಜಾರಿ ಮಾಡಿತ್ತು. ವರದಿ ನೀಡುವಂತೆ ಸೂಚಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಮುಂಬೈನಲ್ಲಿ ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಮುಂಬೈನ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಜಂತರ್‌ ಮಂತರ್‌ನಲ್ಲಿ ವರದಿಗಾರರಿಗೂ ಪೊಲೀಸರ ನಿರ್ಬಂಧ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್‌ಗಳು ಹಾಗೂ...

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...