ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ; ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

Date:

ಮಹಾರಾಷ್ಟ್ರದ ಶಿವಸೇನೆಯಲ್ಲಿ ಬಂಡಾಯವೆದ್ದಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಉದ್ಧವ್‌ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಅಲ್ಲದೆ ಇದೇ ಸಂದರ್ಭದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

- Advertisement -

ಸುಪ್ರೀಂ ಕೋರ್ಟ್‌ನ ಆದೇಶದಿಂದ ಸದ್ಯಕ್ಕೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಬಣ ಹಾಗೂ ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೂ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶಿವಸೇನೆಯಲ್ಲಿ ಉಂಟಾದ ಬಿಕ್ಕಟ್ಟಿನ ಬಳಿಕ ಪಕ್ಷವನ್ನು ತೊರೆದು ಬಿಜೆಪಿ ಜತೆ ಕೈಜೋಡಿಸಿದ ಏಕನಾಥ ಶಿಂಧೆ ಬಣದ 16 ಶಾಸಕರನ್ನು ಅನರ್ಹ ಮಾಡಬೇಕು ಎಂದು ಉದ್ಧವ್ ಠಾಕ್ರೆ ಬಣ ಕೋರಿತ್ತು. ಆದರೆ ಇದಕ್ಕೆ ಏಕನಾಥ್‌ ಶಿಂಧೆ ಆಕ್ಷೇಪಿಸಿದ್ದರು. ಈ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಈ ಸುದ್ದಿ ಓದಿದ್ದೀರಾ? ದೆಹಲಿ ಸರ್ಕಾರದ ಅಧಿಕಾರ ನಿರ್ಬಂಧಿತ; ಹಸ್ತಕ್ಷೇಪಕ್ಕೆ ಎಲ್‌ಜಿಗೆ ಅಧಿಕಾರವಿಲ್ಲ ಎಂದ ಸುಪ್ರೀಂ ಕೋರ್ಟ್

ಇದಲ್ಲದೇ ಮಹಾರಾಷ್ಟ್ರ ಸರ್ಕಾರದಲ್ಲಿ ಉಂಟಾಗಿದ್ದ ಬಿಕ್ಕಟ್ಟಿನ ಕುರಿತು ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಮಾರ್ಚ್‌ 16ರಂದು ತೀರ್ಪನ್ನು ಕಾಯ್ದಿರಿಸಿತ್ತು. ಇದರ ತೀರ್ಪು ಗುರುವಾರ ಪ್ರಕಟವಾಗಬೇಕಿತ್ತು, ಆದರೆ ಇದನ್ನು ಸದ್ಯ ವಿಸ್ತೃತ ಪೀಠಕ್ಕೆ ವರ್ಗಯಿಸಿದೆ. 

ಜೂನ್ 2022 ರಿಂದ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಶಿವಸೇನೆಯ ಎರಡೂ ಗುಂಪುಗಳು ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.

ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಂ ಆರ್ ಶಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಮಾರ್ಚ್ 16 ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿತು ಮತ್ತು ಎರಡೂ ಸೇನಾ ಗುಂಪುಗಳು ಸಲ್ಲಿಸಿದ ಅರ್ಜಿಗಳ ಮೇಲೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...