ಬಿಜೆಪಿ ಶಾಸಕನ ಸಂಬಂಧಿ ಕಾರು ಡಿಕ್ಕಿ: ರ‍್ಯಾಪಿಡೋ ಪ್ರಯಾಣಿಕ ಸಾವು; ತನಿಖೆ ಬಗ್ಗೆ ಅನುಮಾನ!

Date:

ಬುಧವಾರ ಬೆಳಿಗ್ಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವೇಗವಾಗಿ ಬಂದ ರೇಂಜ್ ರೋವರ್ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ರ‍್ಯಾಪಿಡೋ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ. ಬಿಜೆಪಿ ಶಾಸಕ ದಿನೇಶ್‌ಸಿನ್ಹ ಕುಶ್ವಾಹ ಅವರ ಸೋದರಳಿಯ ರಾಘವೇಂದ್ರ ಕುಶ್ವಾಹ ಈ ಐಷಾರಾಮಿ ಕಾರನ್ನು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಗುರುವಾರ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಬಳಿಕ ಬಿಡುಗಡೆ ಮಾಡಿದ್ದಾರೆ.

- Advertisement -

ಈ ಪ್ರಕರಣವನ್ನು ಪೊಲೀಸರು ನಿಭಾಯಿಸುತ್ತಿರುವ ರೀತಿ, ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಮಾಡಿರುವುದು ಮತ್ತು ಆರೋಪಿಯ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳೇ ನೀಡಿರುವ ಪರಸ್ಪರ ವಿರುದ್ಧ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ನವೆಂಬರ್ 11ರಂದು ಬೆಳಗ್ಗೆ 6.45ರ ಸುಮಾರಿಗೆ ಶಿಲಾಜ್ ಪ್ರದೇಶದ ಗುರುಕೃಪಾ ಕ್ರಾಸ್‌ರೋಡ್ಸ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹರ್ಷದ್ ಕುಮಾರ್ ನರಸಿಂಗ್‌ಭಾಯ್ ಪುರಾಬಿಯಾ ಎಂದು ಗುರುತಿಸಲಾಗಿದೆ. ಇವರು 50 ವರ್ಷದ ಪ್ರದೀಪ್ ಕುಮಾರ್ ದದ್ವಾಲ್ ಚಲಾಯಿಸುತ್ತಿದ್ದ ರ‍್ಯಾಪಿಡೋ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಬೋಪಾಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಬೆಳಗ್ಗೆ 6.25ರ ಸುಮಾರಿಗೆ ಶಾಸ್ತ್ರಿನಗರದಿಂದ ಹರ್ಷದ್ ಅವರನ್ನು ಪಿಕ್ ಮಾಡಿದ ದದ್ವಾಲ್ ಶಿಲಾಜ್ ಕಡೆಗೆ ಹೊರಟಿದ್ದರು. ಶಿಲಾಜ್ ವೃತ್ತದ ಸಮೀಪದ ಗುರುಕೃಪಾ ಕ್ರಾಸ್‌ರೋಡ್ಸ್ ತಲುಪಿದಾಗ ಬಲಕ್ಕೆ ತಿರುಗುವಂತೆ ಹರ್ಷದ್ ಸೂಚಿಸಿದ್ದಾರೆ. ಅದರಂತೆ ದದ್ವಾಲ್ ವೇಗ ತಗ್ಗಿಸಿ ಬೈಕ್ ತಿರುಗಿಸುತ್ತಿದ್ದು, ರಸ್ತೆಯ ಮುಕ್ಕಾಲು ಭಾಗವನ್ನು ದಾಟಿದ್ದಾಗ ಶಿಲಾಜ್ ಕಡೆಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಅಪಘಾತದಲ್ಲಿ ಹರ್ಷದ್ ಅವರ ತಲೆ, ಎಡಗಾಲು ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದರೆ, ದದ್ವಾಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನೂ ತಕ್ಷಣ ಸೋಲಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹರ್ಷದ್ ಅವರನ್ನು ತಲ್ತೇಜ್‌ನಲ್ಲಿರುವ ಸಿಮ್ಸ್ (CIMS) ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ರೇಂಜ್ ರೋವರ್ ಚಾಲಕ ಕಾರಿನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಅಪಘಾತ ಸ್ಥಳದಲ್ಲಿದ್ದ ಸಾರ್ವಜನಿಕರೊಬ್ಬರು ಕಾರಿನ ನೋಂದಣಿ ಸಂಖ್ಯೆಯನ್ನು ಚೀಟಿಯಲ್ಲಿ ಬರೆದು ನೀಡಿದ್ದರು ಎಂದು ದದ್ವಾಲ್ ಪೊಲೀಸರಿಗೆ ತಿಳಿಸಿದ್ದಾರೆ.

ಇದರ ಆಧಾರದ ಮೇಲೆ ವಾಹನವನ್ನು ಪತ್ತೆಹಚ್ಚಿದ ಪೊಲೀಸರು, ಕಾರು ಚಲಾಯಿಸುತ್ತಿದ್ದವರು ಬಾಪುನಗರ ಬಿಜೆಪಿ ಶಾಸಕ ದಿನೇಶ್‌ಸಿನ್ಹ ಕುಶ್ವಾಹ ಅವರ ಸೋದರಳಿಯ ರಾಘವೇಂದ್ರ ಕುಶ್ವಾಹ (35) ಎಂದು ಗುರುತಿಸಿದ್ದಾರೆ. ಕಟ್ಟಡ ನಿರ್ಮಾಣ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ರಾಘವೇಂದ್ರ, ಗಾಂಧಿನಗರದ ಕಲೋಲ್‌ನಲ್ಲಿ ನಡೆದ ರಾತ್ರಿ ಪಾರ್ಟಿಯೊಂದನ್ನು ಮುಗಿಸಿ ತನ್ನ ಸ್ನೇಹಿತರನ್ನು ಮನೆಗೆ ಬಿಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ನವೆಂಬರ್ 12ರಂದು ಕುಶ್ವಾಹ ಅವರನ್ನು ವಶಕ್ಕೆ ಪಡೆಯಲಾಗಿದ್ದು, ರೇಂಜ್ ರೋವರ್ ಕಾರನ್ನು ಜಪ್ತಿ ಮಾಡಿ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಜೊತೆಗೆ ವಾಹನದ ತಪಾಸಣೆ ನಡೆಸುವಂತೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಸೂಚಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ನೀಲಂ ಗೋಸ್ವಾಮಿ ತಿಳಿಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದ ಕೆಲವೇ ಹೊತ್ತಿನಲ್ಲಿ ಪೊಲೀಸ್ ಠಾಣೆಯಿಂದಲೇ ಬಿಡುಗಡೆ ಮಾಡಿರುವುದು ಮತ್ತು ಕ್ರಮ ಕೈಗೊಳ್ಳಲು ವಿಳಂಬ ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಹಮದಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಜಾಟ್, “ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ  ಸೆಕ್ಷನ್ 35(3)ರ ಅಡಿಯಲ್ಲಿ ಆರೋಪಿಗೆ ನೋಟಿಸ್ ನೀಡಲಾಗಿದೆ. ಈ ಪ್ರಕರಣದಲ್ಲಿ ಬಂಧನಕ್ಕೆ ಅವಕಾಶವಿಲ್ಲದ ಕಾರಣ ನೋಟಿಸ್ ನೀಡಿ ಕಳುಹಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನೊಂದೆಡೆ, ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದಿರುವ ಡಿವೈಎಸ್‌ಪಿ ನೀಲಂ ಗೋಸ್ವಾಮಿ, ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದಿದ್ದಾರೆ. ಆದರೆ, ಆರೋಪಿಯ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆಯೇ ಎಂಬ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ನಡುವೆಯೇ ಗೊಂದಲ ಏರ್ಪಟ್ಟಿದೆ. ರಕ್ತದ ಮಾದರಿ ಸಂಗ್ರಹಿಸಿಲ್ಲ ಎಂದು ಗೋಸ್ವಾಮಿ ಹೇಳಿದ್ದರೆ, ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಮಾತ್ರ ರಕ್ತದ ಮಾದರಿ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಈ ದ್ವಂದ್ವ ಹೇಳಿಕೆಗಳು ಅಪಘಾತದ ಸಮಯದಲ್ಲಿ ಆರೋಪಿ ಮದ್ಯ ಅಥವಾ ಇನ್ಯಾವುದೇ ಮಾದಕ ವಸ್ತು ಸೇವಿಸಿದ್ದನೇ ಎಂಬುದನ್ನು ಪತ್ತೆಹಚ್ಚುವ ತನಿಖೆಯ ಪಾರದರ್ಶಕತೆಯ ಬಗ್ಗೆ ಅನುಮಾನ ಮೂಡಿಸಿವೆ.

ಬೋಪಾಲ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 106(1) (ನಿರ್ಲಕ್ಷ್ಯದ ಚಾಲನೆಯಿಂದ ಸಾವು), 281 (ಅತಿವೇಗದ ಚಾಲನೆ), 125(a) ಮತ್ತು 125(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 134(b), 177 ಮತ್ತು 184ನ್ನೂ ಸೇರಿಸಲಾಗಿದೆ. ತನಿಖೆಯ ವರದಿ ಮತ್ತು ಸಂಗ್ರಹಿಸಲಾದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಈ ಬಾರಿ ‘ಬಿಸಿಯಾದ ನವೆಂಬರ್’: ಕಳೆದ 6 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು

ರಾಜ್ಯದಲ್ಲಿ ಈ ಬಾರಿ ನವೆಂಬರ್ ತಿಂಗಳು ಅಸಾಮಾನ್ಯವಾದ ಬಿಸಿಲಿನಿಂದ ಕೂಡಿದೆ. ತಿಂಗಳ...

ತಮಿಳುನಾಡು | ಪೆರಿಯಾರ್ ಗ್ರಂಥಾಲಯ ಹಗರಣ; ಎಐ ಬರೆದ ಕಳಪೆ ಪುಸ್ತಕಗಳ ಖರೀದಿ ಆರೋಪ!

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿರ್ಮಿಸಲಾಗಿರುವ ಭವ್ಯವಾದ 'ಪೆರಿಯಾರ್ ಅರಿವುಳಗಂ' ಗ್ರಂಥಾಲಯಕ್ಕೆ ಸುಮಾರು 1,800...

ಅವಳ ಕಣ್ಣೋಟ | ‘ನೇರು’- ಸತ್ಯ ಹೇಳುವುದು ಸುಲಭವೇ?

‘ನೇರು’ ದೌರ್ಜನ್ಯದ ಘಟನೆಯನ್ನು ಅತಿಯಾಗಿ ದೃಶ್ಯೀಕರಿಸುವುದಕ್ಕಿಂತ ಅದರ ನಂತರದ ಮಾನಸಿಕ ನೋವು...

ಅಮೆರಿಕದ ವಿಮಾನಯಾನದಲ್ಲಿ ಕಂಡರಿಯದ ಅಲ್ಲೋಲ-ಕಲ್ಲೋಲ: 11,000 ವಿಮಾನಗಳು ದಿಢೀರ್ ಸ್ಥಗಿತ

ಅಮೆರಿಕದ ವಾಯು ಸಂಚಾರ ನಿಯಂತ್ರಣ (ATC) ಸಂಪರ್ಕ ವ್ಯವಸ್ಥೆಯಲ್ಲಿ ಉಂಟಾದ ಭಾರಿ...