ತೆಲಂಗಾಣ | ಹಳ್ಳಕ್ಕೆ ಉರುಳಿದ ಕಾರು : ಒಂದೇ ಕುಟುಂಬದ ಏಳು ಮಂದಿ ಸಾವು

Date:

ಕಾರೊಂದು ಹಳಕ್ಕೆ ಉರಳಿದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಜನ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ಶಿವಂಪೇಟ ಬಳಿ ನಡೆದಿದೆ.

- Advertisement -

ಅಪಘಾತದಲ್ಲಿ ಧನವಂತ ಶಿವರಾಮ (55), ಧನವಂತ ದುರಗಮ್ಮ(45), ಅನೀತಾ (30), ಬಿಂದು (14), ಶ್ರಾವಣಿ (12), ಶಾಂತಿ (45) ಹಾಗೂ ಮಮತಾ (16) ಮೃತರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಿವಂಪೇಟ ಬಳಿಯ ಭೀಮಲಾ ತಾಂಡಾದ ಎಲರೂ ಸಂಬಂಧಿಕರೊಬ್ಬರ ಕಾರ್ಯಕ್ರಮದಲ್ಲಿ ಭಾಗವಹಿಸಿ ಊರಿಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದ ಹಿನ್ನಲೆ ಈ ದುರ್ಘಟನೆ ಜರುಗಿದೆ.

ಸ್ಥಳೀಯ ನಿವಾಸಿಗಳು, ಪೊಲೀಸರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಕುರಿತಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಘಾತ ವ್ಯಕ್ತಪಡಿಸಿದ್ದು, ಒಂದೇ ಕುಟುಂಬದ 7 ಜನ ಸಾವನ್ನಪ್ಪಿದ್ದು ನಿಜಕ್ಕೂ ದುಃಖಕರ ಸಂಗತಿ. ಗಾಯಾಳುವಿಗೆ ಉತ್ತಮ ವ್ಯೆದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ರೇವಂತ್‌ ರೆಡ್ಡಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ಈ ಕುರಿತು ಶಿವಂಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...