ಏಪ್ರಿಲ್‌ನಿಂದ ಬೆಲೆ ಹೆಚ್ಚಿಸಲಿರುವ ಕಾರು ಕಂಪನಿಗಳು

Date:

ದೇಶದ ಪ್ರಮುಖ ಕಾರು ಉತ್ಪಾದಕ ಕಂಪನಿಗಳಾದ ಟಾಟಾ ಮೋಟರ್ಸ್, ಕಿಯಾ ಇಂಡಿಯಾ ಮತ್ತು ಮಾರುತಿ ಸುಜುಕಿ ಮುಂದಿನ ತಿಂಗಳಿನಿಂದ ಜಾರಿಯಾಗುವಂತೆ ಬೆಲೆ ಏರಿಕೆಯನ್ನು ಘೋಷಿಸಿವೆ. ಈ ವರ್ಷದ ಜನವರಿಯಲ್ಲಿ ಬೆಲೆ ಏರಿಕೆ ಮಾಡಿದ ಕೆಲವೇ ತಿಂಗಳಲ್ಲಿ ಈ ಘೋಷಣೆ ಹೊರಬಿದ್ದಿದೆ.

- Advertisement -

ಸರಕುಗಳ ಬೆಲೆ ಏರಿಕೆ, ಪೂರೈಕೆ ಸರಣಿಯ ವೆಚ್ಚ ಹೆಚ್ಚಳ ಮತ್ತು ಹಣದುಬ್ಬರದ ಒತ್ತಡ ಕಾರಣದಿಂದ ಬೆಲೆ ಏರಿಕೆ ಅನಿವಾರ್ಯ ಎಂದು ಕಂಪನಿಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಎಲ್ಲ ಪ್ರಯಾಣಿಕ ವಾಹನಗಳ ಬೆಲೆಯನ್ನು ಏಪ್ರಿಲ್‌ನಿಂದ ಏರಿಸುವುದಾಗಿ ಟಾಟಾ ಮೋಟರ್ಸ್ ಮಂಗಳವಾರ ಪ್ರಕಟಿಸಿದೆ. ಜನವರಿಯಲ್ಲಿ ಪ್ರಯಾಣಿಕ ವಾಹನಗಳ ಬೆಲೆಯನ್ನು ಕಂಪನಿ ಶೇಕಡ 3ರಷ್ಟು ಹೆಚ್ಚಿತ್ತು. ಇದರ ಜತೆಗೆ ವಾಣಿಜ್ಯ ವಾಹನಗಳ ಬೆಲೆಯನ್ನೂ ಶೇಕಡ 2ರಷ್ಟು ಹೆಚ್ಚಿಸಲಾಗಿದ್ದು, ಮುಂದಿನ ತಿಂಗಳಿನಿಂದ ಇದು ಜಾರಿಗೆ ಬರಲಿದೆ. ಟಾಟಾ ಮೋಟರ್ಸ್ 5 ಲಕ್ಷದಿಂದ ಆರಂಭವಾಗಿ 25.09 ಲಕ್ಷವರೆಗಿನ ಕಾರುಗಳ ಶ್ರೇಣಿಯನ್ನು ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ ಕೈಯಲ್ಲಿ ಶಿಕ್ಷಣ, ಖರ್ಗೆಯವರ ಸಿಟ್ಟು ಮತ್ತು ಬಡವರ ಮಕ್ಕಳು

ಕಿಯಾ ಇಂಡಿಯಾ ಕೂಡಾ ಶೇಕಡ 3ರಷ್ಟು ಬೆಲೆ ಏರಿಕೆಯನ್ನು ಘೋಷಿಸಿದೆ. ಜನವರಿಯಲ್ಲಿ ಶೇಕಡ 3ರಷ್ಟು ಬೆಲೆ ಏರಿಕೆ ಮಾಡಿದ ಬಳಿಕ ಇದು ಎರಡನೇ ಏರಿಕೆಯಾಗಿದೆ. ಭಾರತದ ಅತಿದೊಡ್ಡ ಕಾರು ಉತ್ಪಾದಕ ಕಂಪನಿಯಾದ ಮಾರುತಿ ಸುಜುಕಿ ಶೇಕಡ 4ರಷ್ಟು ಬೆಲೆ ಏರಿಕೆ ಘೋಷಿಸಿದ್ದು, 2025ರಲ್ಲಿ ಮೂರನೇ ಬಾರಿಗೆ ಬೆಲೆ ಏರಿಕೆ ಮಾಡಲಿದೆ. ಕಳೆದ ಜನವರಿ ಹಾಗೂ ಫೆಬ್ರುವರಿಯಲ್ಲಿ ಎರಡು ಹಂತಗಳಲ್ಲಿ ಬೆಲೆ ಹೆಚ್ಚಿಸಲಾಗಿತ್ತು.

ಪ್ರಯಾಣಿಕ ವಾಹನಗಳ ಮಾರಾಟ ಕುಸಿತದ ನಡುವೆಯೇ ಇದೀಗ ಬೆಲೆ ಏರಿಕೆ ನಿರ್ಧಾರ ಪ್ರಕಟವಾಗಿದೆ. ಕಾರು ಉತ್ಪಾದಕರು ಮತ್ತು ಡೀಲರ್ ಶೋರೂಂಗಳು ಕಡಿಮೆ ಬೇಡಿಕೆಯ ಮಾಡೆಲ್‌ಗಳ ಮೇಲೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದ್ದು, ಎಫ್ಎಡಿಎ ಅಂಕಿ ಅಂಶಗಳ ಪ್ರಕಾರ, ಚಿಲ್ಲರೆ ಪ್ರಯಾಣಿಕ ವಾಹನಗಳ ಮಾರಾಟ 2025ರ ಫೆಬ್ರವರಿಯಲ್ಲಿ 3.03 ಲಕ್ಷಕ್ಕೆ ಇಳಿದಿದ್ದು, ಶೇಕಡ 10.34ರಷ್ಟು ಕುಸಿತ ದಾಖಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...