ಬಿಹಾರ | ಭೀಕರ ಅಪಘಾತ: ಐವರು ಉದ್ಯಮಿಗಳು ಸಾವು

Date:

ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ಉದ್ಯಮಿಗಳು ಸಾವನ್ನಪ್ಪಿರುವ ಘಟನೆ ಬಿಹಾರದ ಪಾರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಯಾ ಮೋರ್ ಬಳಿ ನಡೆದಿದೆ. ಗುರುವಾರ ಬೆಳಗಿನ ಜಾವ 12.45ರ ಸುಮಾರಿಗೆ ಪಟನಾ-ಗಯಾ-ದೋಭಿ ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 83ರಲ್ಲಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

- Advertisement -

ಜೋರಾದ ಡಿಕ್ಕಿಯ ಶಬ್ದ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಗ್ಯಾಸ್ ಕಟ್ಟರ್‌ಗಳು ಮತ್ತು ಕ್ರೇನ್ ಸಹಾಯದಿಂದ ಸುಮಾರು ಎರಡು ಗಂಟೆಗಳು ಪ್ರಯತ್ನ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನು ಓದಿದ್ದೀರಾ? ಬಿಹಾರ | ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಐವರ ದಾರುಣ ಸಾವು

ಮೃತರನ್ನು ಪಟನಾದ ಕುರ್ಜಿ ಚಶ್ಮಾ ಗಾಲಿಯ ನಿವಾಸಿ ರಾಜೇಶ್ ಕುಮಾರ್ (50), ಪಟನಾದ ಪಟೇಲ್ ನಗರದ ನಿವಾಸಿ ಸಂಜಯ್ ಕುಮಾರ್ ಸಿನ್ಹಾ (55), ಪಟನಾದ ನಿವಾಸಿ ಕಮಲ್ ಕಿಶೋರ್ (38), ಪಟನಾದಲ್ಲಿ ವಾಸಿಸುತ್ತಿದ್ದ ಸಮಷ್ಟಿಪುರ ನಿವಾಸಿ ಪ್ರಕಾಶ್ ಚೌರಾಸಿಯಾ (35) ಮತ್ತು ಮುಜಫರ್‌ಪುರ ನಿವಾಸಿ ಸುನಿಲ್ ಕುಮಾರ್ (38) ಎಂದು ಗುರುತಿಸಲಾಗಿದೆ.

ಮೃತ ಐವರೂ ಪಟನಾ ಮತ್ತು ಹತ್ತಿರದ ಜಿಲ್ಲೆಗಳ ನಿವಾಸಿಗಳಾಗಿದ್ದು ಕೀಟನಾಶಕ ಮತ್ತು ಕೃಷಿ ಉತ್ಪನ್ನಗಳ ವ್ಯವಹಾರದಲ್ಲಿ ತೊಡಗಿದ್ದರು. ಉದ್ಯಮಿಗಳು ಒಂದು ವ್ಯಾಪಾರಕ್ಕಾಗಿ ಫತುಹಾಗೆ ಹೋಗಿದ್ದು ತಡರಾತ್ರಿ ಪಟನಾಕ್ಕೆ ಹಿಂದಿರುತ್ತಿದ್ದರು.

ಕಾರು ಅತಿ ವೇಗದಲ್ಲಿ ಚಲಾಯಿಸಲಾಗುತ್ತಿತ್ತು. ಟ್ರಕ್ ನಿಧಾನವಾಗಿ ಚಲಿಸುತ್ತಿತ್ತು ಅಥವಾ ಸರಿಯಾದ ಸಿಗ್ನಲ್ ಹಾಕದೆ ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು. ಕಾರಿನ ಚಾಲಕನಿಗೆ ಬ್ರೇಕ್ ಹಾಕುವಷ್ಟೂ ಸಮಯ ಇರಲಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪಟನಾ ಪೊಲೀಸರು ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಟನಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (PMCH) ಕಳುಹಿಸಲಾಗಿದೆ. ಮೊಬೈಲ್ ಫೋನ್‌ಗಳಿಗೆ ಬಂದ ಕರೆಗಳ ಮೂಲಕ ಪೊಲೀಸರು ಕುಟುಂಬಗಳಿಗೆ ಮಾಹಿತಿ ನೀಡಿದ್ದಾರೆ.

ಟ್ರಕ್ ಚಾಲಕ ಪರಾರಿಯಾಗಿದ್ದು ಆತನ ವಿರುದ್ಧ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇವಾ ಅವಧಿಯಲ್ಲಾದ ದೈಹಿಕ ಸಮಸ್ಯೆಯು ‘ಸೇವಾ ಸಂಬಂಧಿ’ ಎಂದೇ ಪರಿಗಣಿತ: ಸುಪ್ರೀಂ ಕೋರ್ಟ್

ಸೇನಾ ಪಡೆಗೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಯಾವುದೇ ದೈಹಿಕ ಅಥವಾ ಮಾನಸಿಕ ಅನಾರೋಗ್ಯ...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...

‘ನಾನೇ ಬುರುಡೆ ಒಡೆದಿದ್ದು’ ಎಂದಾತನಿಗೆ ಜಾಮೀನು; ಪುರಾವೆ ಇಲ್ಲದಿದ್ದರೂ ವರ್ಷಗಳಿಂದ ಜೈಲಿನಲ್ಲಿದ್ದಾರೆ ಹೋರಾಟಗಾರರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ...