ಭಾರತದ ಸಾರ್ವಜನಿಕ ಶಿಕ್ಷಣದ ಕಗ್ಗೊಲೆ ಅಂತ್ಯವಾಗಬೇಕು: ಸೋನಿಯಾ ಗಾಂಧಿ

Date:

Advertisements

ಮೋದಿ ಸರ್ಕಾರದ ಶಿಕ್ಷಣ ನೀತಿಯನ್ನು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಖಂಡಿಸಿದ್ದು,ಶಿಕ್ಷಣದಲ್ಲಿ ಅಧಿಕಾರ ಕೇಂದ್ರೀಕರಣ, ಖಾಸಗಿ ವಲಯಗಳಿಗೆ ಹೊರ ಗುತ್ತಿಗೆ ನೀಡುವ ಮೂಲಕ ವಾಣಿಜ್ಯೀಕರಣ ಹಾಗೂ ಪಠ್ಯಪುಸ್ತಕಗಳು, ಪಠ್ಯ ಕ್ರಮ ಮತ್ತು ಶಿಕ್ಷಣ ಸಂಸ್ಥೆಗಳನ್ನು ಕೋಮುವಾದೀಕರಣಗೊಳಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕೆಯೊಂದಕ್ಕೆ ಬರೆದ ಲೇಖನದಲ್ಲಿ ಭಾರತದ ಶಿಕ್ಷಣ ವ್ಯವಸ್ಥೆಯಿಂದ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಬಗ್ಗೆ ಬೆಳಕು ಚಲ್ಲಿದ್ದಾರೆ.

‘ಇಂದು ಕಗ್ಗೊಲೆಯಾಗುತ್ತಿರುವ ಭಾರತೀಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಖಂಡಿತಾ ಅಂತ್ಯವಾಗಬೇಕು. ಮಕ್ಕಳು ಹಾಗೂ ಯುವಕರ ಬಗ್ಗೆ ಅಸಡ್ಡೆ ಹೊಂದಿರುವ ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ(2020)ಯಲ್ಲಿ ವಾಸ್ತವಾಂಶಗಳನ್ನು ಬಚ್ಚಿಟ್ಟು ತಪ್ಪುಗಳನ್ನು ಬಿಂಬಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

Advertisements

ಮಹತ್ವದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವಾಗ ರಾಜ್ಯ ಸರಕಾರಗಳನ್ನು ಕೈಬಿಡುವ ಮೂಲಕ, ಕೇಂದ್ರ ಸರ್ಕಾರ ಶಿಕ್ಷಣದ ಒಕ್ಕೂಟ ಸ್ವರೂಪವನ್ನು ಕಡೆಗಣಿಸಿದೆ’ ಎಂದು ಆರೋಪಿಸಿದ್ದಾರೆ.

ಕೇಂದ್ರೀಕರಣ ಈ ಸರಕಾರದ ಕಳೆದ 11 ವರ್ಷಗಳ ಕಾರ್ಯವೈಖರಿಯ ಗುಣಲಕ್ಷಣವಾಗಿದೆ. ಆದರೆ, ಇದರಿಂದ ತುಂಬಾ ಅಪಾಯಕಾರಿ ದುಷ್ಪರಿಣಾಮವಾಗಿರುವುದು ಶಿಕ್ಷಣ ವಲಯದ ಮೇಲೆ. ಕೇಂದ್ರ ಶಿಕ್ಷಣ ಸಚಿವರು ಹಾಗೂ ರಾಜ್ಯಗಳ ಶಿಕ್ಷಣ ಸಚಿವರನ್ನೊಳಗೊಂಡ ಕೇಂದ್ರ ಶಿಕ್ಷಣ ಸಲಹಾ ಸಮಿತಿಯ ಸಭೆ 2019ರಿಂದಾಚೆಗೆ ಆಯೋಜನೆಗೊಂಡಿಲ್ಲ ಎಂದೂ ಅವರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪುಟ್ಟ ರಾಷ್ಟ್ರಗಳಿಂದ ಇಸ್ರೇಲ್, ರಷ್ಯಾ, ಅಮೆರಿಕ ಕಲಿಯುವುದು ಬಹಳಷ್ಟಿದೆ!

ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸದೆ, ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಕೇಂದ್ರ ಸರಕಾರ ಏಕಪಕ್ಷೀಯವಾಗಿ ಜಾರಿಗೊಳಿಸಿದೆ. ಶಿಕ್ಷಣವನ್ನು ತಳಮಟ್ಟದಿಂದ ಮರು ರೂಪಿಸುವ ನೀತಿಯನ್ನು ಪರಿಚಯಿಸಲಾಗಿದ್ದರೂ, ಈ ನೀತಿಯ ಜಾರಿಯ ಕುರಿತು ಕೇಂದ್ರ ಸರಕಾರ ಒಮ್ಮೆಯೂ ರಾಜ್ಯ ಸರಕಾರಗಳೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಟೀಕಿಸಿದ್ದಾರೆ.

ಶಿಕ್ಷಣವು ಸಂವಿಧಾನದ ಸಹವರ್ತಿ ಪಟ್ಟಿಯಡಿ ಬರುತ್ತದೆ ಎಂಬುದರತ್ತ ಬೊಟ್ಟು ಮಾಡಿರುವ ಅವರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳ ನಡುವೆ ದೊಡ್ಡ ಪ್ರಮಾಣದ ಸಹಕಾರವಿರಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಕೇಂದ್ರ ಸರಕಾರವು ಪ್ರಜಾತಾಂತ್ರಿಕ ಸಮಾಲೋಚನೆಯನ್ನು ಅಗೌರವಿಸುತ್ತಿದೆ ಹಾಗೂ ವೈವಿಧ್ಯಮಯ ಪ್ರಾದೇಶಿಕ ಭಾವನೆಗಳನ್ನು ಪರಿಗಣಿಸದೆ ನೀತಿಗಳನ್ನು ಹೇರುತ್ತಿದೆ ಎಂದು ಸೋನಿಯಾ ಗಾಂಧಿ ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X