ಆರ್‌ಎಸ್‌ಎಸ್‌ನ ಗೋಲ್ವಾಲ್ಕರ್‌ ವಿರುದ್ದ ಪೋಸ್ಟ್‌; ದಿಗ್ವಿಜಯ್‌ ಸಿಂಗ್‌ ವಿರುದ್ಧ ಪ್ರಕರಣ

Date:

  • ವಕೀಲ ರಾಜೇಶ್‌ ಜೋಶಿಯಿಂದ ದಿಗ್ವಿಜಯ್‌ ಸಿಂಗ್‌ ವಿರುದ್ಧ ದೂರು
  • ಆರ್‌ಎಸ್‌ಎಸ್‌ನಲ್ಲಿ ಸುದೀರ್ಘ ಅವಧಿಯವರೆಗೆ ಗೋಲ್ವಾಲ್ಕರ್ ಸೇವೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥರಾಗಿದ್ದ ಎಂ ಎಸ್ ಗೋಲ್ವಾಲ್ಕರ್ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ (ಜುಲೈ 9) ಹೇಳಿದ್ದಾರೆ.

ದಿಗ್ವಿಜಯ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಗೋಲ್ವಾಲ್ಕರ್‌ ಕುರಿತು ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಈ ಸಂಬಂಧ ಸಂಘದ ಕಾರ್ಯಕರ್ತ ಹಾಗೂ ವಕೀಲ ರಾಜೇಶ್‌ ಜೋಶಿ ಎಂಬುವವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ.

ದಿಗ್ವಿಜಯ್‌ ಸಿಂಗ್‌ ಅವರ ವಿರುದ್ಧ ಶನಿವಾರ ರಾತ್ರಿ ಐಪಿಸಿ ಸೆಕ್ಷನ್‌ 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಬಿತ್ತುವುದು), 500 (ಮಾನಹಾನಿ) ಮತ್ತು 505ಗಳಡಿ (ಸಾರ್ಜನಿಕ ಸ್ಥಳ ದುರ್ಬಳಕೆ) ಪ್ರಕರಣ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಿಗ್ವಿಜಯ್‌ ಅವರು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಗೋಲ್ವಾಲ್ಕರ್ ವಿರುದ್ಧ ಹೆಸರು ಮತ್ತು ಗುರೂಜಿ ಎಂದು ಕರೆಯಲ್ಪಡುವ ಗೋಲ್ವಾಲ್ಕರ್‌ ಚಿತ್ರವುಳ್ಳ ಪೋಸ್ಟ್ ಅನ್ನು ಹಂಚಿಕೊಂಡಿದ್ದರು.

ಈ ಪೋಸ್ಟ್‌ನಿಂದ ದಲಿತರು, ಹಿಂದುಳಿದ ವರ್ಗ, ಮುಸ್ಲಿಂ ಹಾಗೂ ಹಿಂದೂಗಳ ನಡುವೆ ಪರಸ್ಪರ ದ್ವೇಷ ಭಾವನೆ ಮೂಡಲಿದೆ. ಜತೆಗೆ ಹಿಂದೂಗಳ ಭಾವನೆಗೆ ಮತ್ತು ಅರ್ಎಸ್ಎಸ್‌ನ ಕಾರ್ಯಕರ್ತರ ನಂಬಿಕೆಗಳಿಗೆ ಧಕ್ಕೆ ತಂದಿದೆ ಎಂದು ರಾಜೇಶ್ ಜೋಶಿ ಮಧ್ಯಪ್ರದೇಶ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದಿಗ್ವಿಜಯ್‌ ಅವರ ಗೋಲ್ವಾಲ್ಕರ್‌ ಕುರಿತ ಪೋಸ್ಟ್‌ ಅನ್ನು ಆರ್‌ಎಸ್‌ಎಸ್‌ನ ಸ್ಥಳೀಯ ಅಧಿಕಾರಿಯೊಬ್ಬರು ಖಂಡಿಸಿದ್ದು, “ಸಂಘದ ಘನತೆಗೆ ಕುಂದು ತರಲು ಗೋಲ್ವಾಲ್ಕರ್‌ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯ ಪೋಸ್ಟ್‌ ಹಂಚಿಕೆಯಾಗಿದೆ” ಎಂದು ಹೇಳಿಕೆಯೊಂದನ್ನು ನೀಡಿದ್ದಾರೆ.

ಗುರೂಜಿ ಎಂದು ಕರೆಯಲ್‌ಪಡುತ್ತಿದ್ದ ಗೋಲ್ವಾಲ್ಕರ್‌ ಅವರ ಕುರಿತು ವಿವಾದಾತ್ಮಕ ಹೇಳಿಕೆಗಳುಳ್ಳ ಒಂದು ಪುಟದ ಚಿತ್ರವನ್ನು ಶನಿವಾರ ದಿಗ್ವಿಜಯ್‌ ಸಿಂಗ್‌ ಅವರು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಶನಿವಾರ ಹಂಚಿಕೊಂಡಿದ್ದರು.

“ದಲಿತರು, ಹಿಂದುಳಿದವರ್ಗ, ಮುಸ್ಲಿಮರಿಗೆ ಸಮಾನ ಹಕ್ಕು ನೀಡುವ ಬದಲು ಬ್ರಿಟಿಷ್ ಆಡಳಿತದಲ್ಲಿ ಇರುವುದೇ ಲೇಸು” ಎಂದು ಗೋಲ್ವಾಲ್ಕರ್ ಹೇಳಿದ್ದರು ಎಂಬ ಮಾಹಿತಿಯ ಪೋಸ್ಟ್‌ ಅನ್ನು ದಿಗ್ವಿಜಯ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ₹ 6,100 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಚಾಲನೆ, ಕೆಸಿಆರ್‌ ವಿರುದ್ಧ ವಾಗ್ದಾಳಿ

ಈ ಹೇಳಿಕೆಗೆ ಆರ್‌ಎಸ್‌ಎಸ್‌ ಪ್ರಚಾರ ವಿಭಾಗದ ಮುಖ್ಯಸ್ಥ ಸುನೀಲ್ ಅಂಬೇಕರ್ ಆಕ್ಷೇಪ ವ್ಯಕ್ತಪಡಿಸಿದ್ದರು. “ಆಧಾರ ರಹಿತ ಹೇಳಿಕೆ ಮೂಲಕ ಸಮಾಜದ ಸ್ವಾಸ್ಥ್ಯವನ್ನು ದಿಗ್ವಿಜಯ್ ಕದಡುತ್ತಿದ್ದಾರೆ. ಸಮಾಜವನ್ನು ಒಡೆಯುವ ಇಂಥ ಹೇಳಿಕೆಗಳನ್ನು ‘ಗುರೂಜಿ’ (ಗೋಲ್ವಾಲ್ಕರ್) ಎಂದೂ ನೀಡಿಲ್ಲ.

ಗೋಲ್ವಾಲ್ಕರ್‌ ಅವರು 1940 ರಿಂದ 1973ರವರೆಗೆ ಸುದೀರ್ಘ ಅವಧಿಯವರೆಗೆ ಆರ್‌ಎಸ್‌ಎಸ್‌ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...

ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ಠಾಣೆಗೆ ಶಾಮಿಯಾನ ಹಾಕಿ ನಟ ದರ್ಶನ್‌ಗೆ ರಕ್ಷಣೆಯೇ: ಶೋಭಾ ಕರಂದ್ಲಾಜೆ ಪ್ರಶ್ನೆ

ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ...

ಗುಜರಾತ್‌ | ಸಿಎಂ ವಸತಿ ಯೋಜನೆಯಡಿ ಮುಸ್ಲಿಂ ಮಹಿಳೆಗೆ ಫ್ಲ್ಯಾಟ್ ಮಂಜೂರು; ಹಿಂದುಗಳಿಂದ ವಿರೋಧ

ಈ ಹಿಂದೆ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರವಿದ್ದಾಗ ದೇಶದಲ್ಲಿ ವಿಪರೀತಕ್ಕೆ...

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ನೇಮಕ

ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್...