ಕೋಮು ದ್ವೇಷ ಭಾಷಣ; ಕೇರಳ ಬಿಜೆಪಿ ನಾಯಕ ಪಿಸಿ ಜಾರ್ಜ್ ವಿರುದ್ಧ ಪ್ರಕರಣ ದಾಖಲು

Date:

ಕೋಮು ದ್ವೇಷವನ್ನು ಪ್ರಚೋದಿಸುವ ಹೇಳಿಕೆಯನ್ನು ನೀಡಿದ ಕೇರಳ ಬಿಜೆಪಿ ನಾಯಕ ಪಿಸಿ ಜಾರ್ಜ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ ಮಾಧ್ಯಮವೊಂದರಲ್ಲಿ ನಡೆದ ಚರ್ಚೆ ವೇಳೆ ಪಿಸಿ ಜಾರ್ಜ್ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪವನ್ನು ಹೊತ್ತಿದ್ದಾರೆ.

- Advertisement -

ಮುಸ್ಲಿಂ ಯೂತ್ ಲೀಗ್ ಮುನ್ಸಿಪಲ್ ಸಮಿತಿ ಈ ಬಗ್ಗೆ ದೂರು ಸಲ್ಲಿಸಿದ್ದು, ಇದರ ಆಧಾರದಲ್ಲಿ ಎರಟ್ಟುಪೆಟ್ಟ ಪೊಲೀಸರು ಶುಕ್ರವಾರ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಿಎನ್‌ಎಸ್‌ನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ದ್ವೇಷ ಭಾಷಣ’ದ ಆಪಾದಿತರು ಹೈಕೋರ್ಟ್ ಜಡ್ಜ್ ಆಗಬಹುದೇ?

ಈ ನಡುವೆ ಜಾರ್ಜ್ ವಿರುದ್ಧದ ಪೊಲೀಸ್ ಪ್ರಕರಣವನ್ನು ಬಿಜೆಪಿ ಖಂಡಿಸಿದೆ. ಕೇರಳ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್, “ಇದು ಎಲ್‌ಡಿಎಫ್ ಸರ್ಕಾರದ ರಾಜಕೀಯ ದ್ವೇಷ. ಸಿಪಿಐಎಂ ನೇತೃತ್ವದ ಎಡಪಂಥೀಯ ಸರ್ಕಾರ ಹಮಾಸ್ ವಿರುದ್ಧ ಒಂದು ಮಾತನ್ನೂ ಆಡುವುದಿಲ್ಲ” ಎಂದು ಆರೋಪಿಸಿದರು.

ಇನ್ನು ಜಾರ್ಜ್ ಸಮರ್ಥನೆ ಮಾಡಿರುವ ಜಾವೇಡ್ಕರ್, “ಉಗ್ರವಾದಕ್ಕೆ ವಿರೋಧ ವ್ಯಕ್ತಪಡಿಸುವುದೇ ನಮ್ಮ ಉದ್ದೇಶವಾಗಿತ್ತು. ಯಾವುದೇ ಸಮುದಾಯವನ್ನು ಗುರಿಯಾಗಿಸುವುದು ಅಲ್ಲ ಎಂದು ಈಗಾಗಲೇ ಜಾರ್ಜ್ ಸ್ಪಷ್ಟಪಡಿಸಿದ್ದಾರೆ” ಎಂದು ಹೇಳಿದರು.

ಇನ್ನು ಪಿಸಿ ಜಾರ್ಜ್ ಇದೇ ಮೊದಲ ದ್ವೇಷ ಭಾಷಣ ಮಾಡಿರುವುದಲ್ಲ. ಈ ಹಿಂದೆಯೂ ಜಾರ್ಜ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. 2022ರಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಭಾಷಣ ಮಾಡಿದ ಜಾರ್ಜ್ ಬಂಧನವಾಗಿತ್ತು. ಜಾಮೀನಿನಿಂದ ಹೊರಬಂದ ಬಳಿಕ ಮತ್ತೆ ದ್ವೇಷ ಭಾಷಣ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...