ನಗದು ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ವಿರುದ್ಧದ ತನಿಖಾ ವರದಿ ರಾಜ್ಯಸಭೆಯಲ್ಲಿ ಮಂಡನೆ

Date:

ದೆಹಲಿಯ ಅಧಿಕೃತ ನಿವಾಸದಲ್ಲಿ ಲೆಕ್ಕಕ್ಕೆ ಸಿಗದ ಭಾರೀ ಪ್ರಮಾಣದ ನಗದು ಪತ್ತೆಯಾದ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ನಡೆದ ತನಿಖೆಯ ವರದಿಯನ್ನು ಬುಧವಾರ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ.

- Advertisement -

ನ್ಯಾಯಮೂರ್ತಿ ವರ್ಮಾ ವಿರುದ್ಧದ ಆರೋಪಗಳ ತನಿಖೆ ನಡೆಸಿದ್ದ ಮೂವರು ಸದಸ್ಯರ ಸಮಿತಿಯ ಎರಡು ಸಂಪುಟಗಳ ವರದಿಯನ್ನು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಸದನದ ಮುಂದೆ ಇಟ್ಟರು. ವರದಿಯ ಇಂಗ್ಲಿಷ್ ಮತ್ತು ಹಿಂದಿ ಆವೃತ್ತಿಗಳ ಜತೆಗೆ ತನಿಖೆಯ ಸಂದರ್ಭದಲ್ಲಿ ದಾಖಲಿಸಲಾಗಿದ್ದ ಮೌಖಿಕ ಹಾಗೂ ದಾಖಲೆ ರೂಪದ ಸಾಕ್ಷ್ಯಗಳನ್ನೂ ಮಂಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆಯಾದ ಪ್ರಕರಣದ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು 2025ರ ಆಗಸ್ಟ್ 12ರಂದು ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದ್ದರು. ಸಮಿತಿಯು ತನ್ನ ತನಿಖಾ ವರದಿಯನ್ನು ಮೇ ತಿಂಗಳಲ್ಲಿ ಸ್ಪೀಕರ್‌ಗೆ ಸಲ್ಲಿಸಿತ್ತು.

2025ರ ಮಾರ್ಚ್ 14ರ ರಾತ್ರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಸ್ಥಳಕ್ಕೆ ತೆರಳಿದ್ದ ಅಗ್ನಿಶಾಮಕ ಸಿಬ್ಬಂದಿಗೆ ಮನೆಯ ಸ್ಟೋರ್‌ರೂಮ್‌ನಲ್ಲಿ ಭಾರೀ ಪ್ರಮಾಣದ ಸುಟ್ಟ ನೋಟುಗಳು ಪತ್ತೆಯಾಗಿದ್ದವು ಎನ್ನಲಾಗಿದೆ.

ಈ ಪ್ರಕರಣದ ಬಳಿಕ ನ್ಯಾಯಮೂರ್ತಿ ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅವರ ಮೂಲ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು. ನಂತರ ಅವರ ವಿರುದ್ಧ ಸಂಸತ್ತಿನಲ್ಲಿ ಪದಚ್ಯುತಿ ಪ್ರಕ್ರಿಯೆ ಆರಂಭಿಸುವ ಪ್ರಯತ್ನ ನಡೆದಿತ್ತು. ಆಗಿನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದಲ್ಲಿ ರಚಿಸಲಾಗಿದ್ದ ಆಂತರಿಕ ತನಿಖಾ ಸಮಿತಿಯು, ನಗದು ಪತ್ತೆಯಾದ ನಿರ್ದಿಷ್ಟ ಸ್ಟೋರ್‌ರೂಮ್ ಮೇಲೆ ನ್ಯಾಯಮೂರ್ತಿ ವರ್ಮಾ ಅವರಿಗೆ “ಸಕ್ರಿಯ ಅಥವಾ ಪರೋಕ್ಷ ನಿಯಂತ್ರಣ” ಇತ್ತು ಎಂದು ತೀರ್ಮಾನಿಸಿತ್ತು.

ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಿಗೊಳಿಸುವಂತೆ ಆಗ್ರಹಿಸಿ 2025ರ ಜುಲೈನಲ್ಲಿ 200ಕ್ಕೂ ಹೆಚ್ಚು ಸಂಸದರು ನಿರ್ಣಯಕ್ಕೆ ಸಹಿ ಹಾಕಿದ್ದರು. ಬಳಿಕ ಆರೋಪಗಳ ಕುರಿತು ತನಿಖೆ ನಡೆಸಲು ಲೋಕಸಭಾ ಸ್ಪೀಕರ್ ಮೂವರು ಸದಸ್ಯರ ನ್ಯಾಯಮೂರ್ತಿಗಳ ತನಿಖಾ ಸಮಿತಿಯನ್ನು ರಚಿಸಿದ್ದರು. ಆದರೆ ಸಂಸತ್ತಿನ ಮೂಲಕ ಪದಚ್ಯುತಿಯಾಗುವ ಸಾಧ್ಯತೆ ಎದುರಾದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ವರ್ಮಾ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರಿಂದ ಅವರ ವಿರುದ್ಧದ ಪದಚ್ಯುತಿ ಪ್ರಕ್ರಿಯೆ ಅಪ್ರಸ್ತುತ (infructuous) ಎನ್ನುವಂತಾಯಿತು. ಆದಾಗ್ಯೂ, ಅವರ ರಾಜೀನಾಮೆಯನ್ನು ಕೇಂದ್ರ ಕಾನೂನು ಸಚಿವಾಲಯ ಇನ್ನೂ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿ ಪ್ರಕಟಿಸಿಲ್ಲ.

ಇದನ್ನೂ ಓದಿ: ಟೋಕಿಯೊದಿಂದ ನೇತಾಜಿ ಅಸ್ಥಿ ಮರಳಿ ತರುವ ವಿಚಾರ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ, ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯೊಬ್ಬರು ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿ, ಅದರ ಪ್ರತಿಯನ್ನು ಸಾರ್ವಜನಿಕಗೊಳಿಸಿದ ಬಳಿಕ ಅವರು ರಾಜೀನಾಮೆ ನೀಡಿದವರಾಗಿಯೇ ಪರಿಗಣಿಸಲಾಗುತ್ತದೆ ಎಂದು ನೇಮಕ ಮತ್ತು ಪದಚ್ಯುತಿ ಪ್ರಕ್ರಿಯೆಯ ಬಗ್ಗೆ ತಿಳಿದಿರುವ ಅಧಿಕಾರಿಗಳು ಹೇಳಿದ್ದಾರೆ.

ನ್ಯಾಯಮೂರ್ತಿಯ ರಾಜೀನಾಮೆ ರಾಷ್ಟ್ರಪತಿಯ ಅನುಮೋದನೆಗೆ ಒಳಪಟ್ಟಿರುವುದಿಲ್ಲ. ಆದರೆ ಸಾಮಾನ್ಯ ಪ್ರಕ್ರಿಯೆಯಂತೆ ರಾಷ್ಟ್ರಪತಿ ಔಪಚಾರಿಕವಾಗಿ ರಾಜೀನಾಮೆ ಅಂಗೀಕರಿಸಿದ ಬಳಿಕ, ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆ ಅದರ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸುತ್ತದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪ್ರಕರಣದಲ್ಲಿ ತನಿಖಾ ವರದಿ ಇದೀಗ ರಾಜ್ಯಸಭೆಯಲ್ಲೂ ಮಂಡನೆಯಾಗಿರುವ ಹಿನ್ನೆಲೆಯಲ್ಲಿ, ಅವರ ವಿರುದ್ಧದ ಆರೋಪಗಳು ಮತ್ತು ತನಿಖಾ ಸಮಿತಿಯ ಕಂಡುಕೊಂಡ ಅಂಶಗಳು ಮತ್ತೆ ಸಾರ್ವಜನಿಕ ಚರ್ಚೆಗೆ ಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...