ಕೇರಳದ ಮಲಯಾಳಂ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಗೆ ಜಾತಿ ನಿಂದನೆ: ನ್ಯಾಯಕ್ಕಾಗಿ ಅಹೋರಾತ್ರಿ ಪ್ರತಿಭಟನೆ

Date:

ಕೇರಳದ ತುಂಚತ್ ಎಳುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದಲ್ಲಿ ಜಾತೀಯತೆ, ಲಿಂಗ ತಾರತಮ್ಯ ಮತ್ತು ಶೈಕ್ಷಣಿಕ ಅವಕಾಶಗಳ ನಿರಾಕರಣೆಯನ್ನು ಖಂಡಿಸಿ ದಲಿತ ಪಿಎಚ್‌ಡಿ ವಿದ್ಯಾರ್ಥಿನಿ ಅನಘಾ ಶಶಿ ಹಾಗೂ ಅವರ ತಾಯಿ ಅಂಬಿಕಾ ಶಶಿ ಕಳೆದ ಆರು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಶೋಧನಾ ಕಾರ್ಯಗಳಿಗೆ ಅವಕಾಶ ನೀಡದೆ, ತಮ್ಮಿಂದ ಬಲವಂತವಾಗಿ ಶೌಚಾಲಯ ಮತ್ತು ಪ್ರಯೋಗಾಲಯಗಳ ಸ್ವಚ್ಛತಾ ಕಾರ್ಯಗಳನ್ನು ಮಾಡಿಸಲಾಗಿದೆ ಎಂದು ವಿದ್ಯಾರ್ಥಿನಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಮಾರ್ಚ್ 2024ರಲ್ಲಿ ಪರಿಸರ ವಿಜ್ಞಾನ ವಿಭಾಗಕ್ಕೆ ಸೇರಿದ ಅನಘಾ, ಕೋರ್ಸ್‌ವರ್ಕ್ ಮುಗಿಸಿ ಒಂದು ವರ್ಷ ಕಳೆದರೂ ವಿಶ್ವವಿದ್ಯಾಲಯವು ‘ಡಾಕ್ಟರಲ್ ಸಮಿತಿ’ಯನ್ನು ರಚಿಸಿಲ್ಲ ಮತ್ತು ವಾರ್ಷಿಕ ಪ್ರಗತಿ ವರದಿಯನ್ನು ಸಲ್ಲಿಸಲು ವಿಳಂಬ ಮಾಡುತ್ತಿದೆ. ಇದರಿಂದಾಗಿ ತಮ್ಮ ಫೆಲೋಶಿಪ್ ರದ್ದಾಗುವ ಭೀತಿ ಎದುರಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಮಾರ್ಗದರ್ಶಕ ಅರುಣ್ ಬಾಬು ವಿ. ಮತ್ತು ಅಧ್ಯಾಪಕಿ ಜೈನಿ ವರ್ಗೀಸ್ ಅವರು ತಮಗೆ ಕುಳಿತುಕೊಳ್ಳಲು ಕುರ್ಚಿಯನ್ನೂ ನೀಡದೆ ಮಳೆಯಲ್ಲೂ ಹೊರಗೆ ನಿಲ್ಲಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಯುಜಿಸಿ-ನೆಟ್ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಮಂಡಳಿಯ ಫೆಲೋಶಿಪ್ ಲಭಿಸಿದ ನಂತರ ಅಧ್ಯಾಪಕರ ಕಿರುಕುಳ ಮತ್ತಷ್ಟು ಹೆಚ್ಚಾಯಿತು. “ನಿನ್ನ ಜಾತಿಗೆ ಈ ಅನುದಾನ ಸಿಕ್ಕಿದೆ” ಎಂದು ಜಾತಿ ನಿಂದನೆ ಮಾಡಿ, ಬೆದರಿಕೆ ಹಾಕಿದ್ದಲ್ಲದೆ ಎಸ್‌ಎಫ್‌ಐ ಸಂಘಟನೆಯ ಸಹಪಾಠಿಯೊಬ್ಬಳಿಂದಲೂ ಕಿರುಕುಳ ನೀಡಲಾಗಿದೆ. ಈ ನಿರಂತರ ಮಾನಸಿಕ ಹಿಂಸೆಯಿಂದ ಖಿನ್ನತೆಗೆ ಒಳಗಾದ ಅನಘಾ ಆತ್ಮಹತ್ಯೆಗೂ ಯತ್ನಿಸಿದ್ದರು. ಈ ಕುರಿತು ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಸಚಿವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರ ತಾಯಿ ಕಣ್ಣೀರು ಹಾಕಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ, ಆಗಸ್ಟ್ 14ರ ಮಧ್ಯರಾತ್ರಿಯಿಂದಲೇ ತಾಯಿ ಮತ್ತು ಮಗಳು ಪ್ರತಿಭಟನೆ ಆರಂಭಿಸಿದ್ದಾರೆ. “ನಮಗೆ ಶಿಕ್ಷಣ ಪಡೆಯುವ ಸ್ವಾತಂತ್ರ್ಯವೇ ಸಿಕ್ಕಿಲ್ಲ” ಎನ್ನುವುದು ಅವರ ನೋವಿನ ನುಡಿಯಾಗಿದೆ. ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿರುವ ದೂರನ್ನು ಹಿಂಪಡೆದರೆ ಮಾತ್ರ ಮಾತುಕತೆ ನಡೆಸುವುದಾಗಿ ಆರೋಪಿಗಳು ಷರತ್ತು ವಿಧಿಸಿದ್ದಾರೆ. ಏತನ್ಮಧ್ಯೆ, ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತಿರುವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಕೇರಳದ ಉನ್ನತ ಶಿಕ್ಷಣ ಸಚಿವ ರೋಜಿ ಎಂ. ಜಾನ್ ಅವರು ವಿದ್ಯಾರ್ಥಿನಿ ಅನಘಾ ಅವರೊಂದಿಗೆ ವಿಡಿಯೋ ಕರೆ ಮೂಲಕ ಮಾತನಾಡಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಆರೋಪಿ ಅಧ್ಯಾಪಕರನ್ನು ವಿಶ್ವವಿದ್ಯಾಲಯದಿಂದ ವಜಾಗೊಳಿಸಬೇಕು, ತಮ್ಮ ಡಾಕ್ಟರಲ್ ಸಮಿತಿಯನ್ನು ತಕ್ಷಣವೇ ಕರೆಯಬೇಕು ಮತ್ತು ಉನ್ನತ ಶಿಕ್ಷಣ ಇಲಾಖೆಯಿಂದ ನ್ಯಾಯಯುತ ತನಿಖೆ ನಡೆಯಬೇಕು ಎಂಬುದು ಅನಘಾ ಅವರ ಪ್ರಮುಖ ಬೇಡಿಕೆಯಾಗಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಅವರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....