ಜಾತಿ ದೌರ್ಜನ್ಯ | ದಲಿತರಿಂದ ‘ಪ್ರಸಾದ’ ಪಡೆದುಕೊಂಡಿದ್ದಕ್ಕೆ 20 ಕುಟುಂಬಗಳಿಗೆ ಬಹಿಷ್ಕಾರ

Date:

ದಲಿತ ವ್ಯಕ್ತಿಯ ಕೈಯಿಂದ ‘ಪ್ರಸಾದ’ ತೆಗೆದುಕೊಂಡು, ತಿಂದಿದ್ದಕ್ಕಾಗಿ ಸುಮಾರು 20 ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಛತ್ತರ್‌ಪುರ ಜಿಲ್ಲೆಯ ಅತ್ರಾರ್ ಗ್ರಾಮದಲ್ಲಿ ಈ ಜಾತಿ ದೌರ್ಜನ್ಯದ ಘಟನೆ ನಡೆದಿದೆ. ಬಹಿಷ್ಕಾರಕ್ಕೊಳಗಾದ ಕುಟುಂಬಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮದ ಸರಪಂಚ್‌ ತಮಗೆ ಬಹಿಷ್ಕಾರ ಹಾಕಿರುವುದಾಗಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಗ್ರಾಮದ ತಲೈಯಾ ಹನುಮಾನ್ ದೇವಸ್ಥಾನದಲ್ಲಿ ದಲಿತ ಯುವಕ ಜಗತ್ ಅಹಿರ್ವಾರ್‌ ಅವರು ದೇವರಿಗೆ ‘ಮಗಜ್ ಲಡ್ಡು’ಅನ್ನು ಅರ್ಪಿಸಿ, ಪ್ರಸಾದವಾಗಿ ದೇವಸ್ಥಾನದಲ್ಲಿದ್ದ ಭಕ್ತರಿಗೆ ಹಂಚಿದ್ದಾರೆ.

ಆ ಪ್ರಸಾದವನ್ನು ಬ್ರಾಹ್ಮಣರು ಮತ್ತು ಇತರ ಪ್ರಬಲ ಜಾತಿಯ 20ಕ್ಕೂ ಹೆಚ್ಚು ಮಂದಿ, ಪಡೆದುಕೊಂಡು ಸೇವಿಸಿದ್ದಾರೆ. ದಲಿತ ಕೊಟ್ಟ ಪ್ರಸಾವನ್ನು ತಿಂದಿದ್ದಾರೆಂಬ ವಿಷಯ ಗ್ರಾಮದಲ್ಲಿ ಮಾರಕ ಸೋಂಕಿನಿಂತೆ ಹರಡಿದೆ. ಆ ಎಲ್ಲ 20 ಮಂದಿಯ ಕುಟುಂಬಗಳನ್ನು ಗ್ರಾಮದ ಸರಪಂಚ್‌ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ.

“ತಮಗೆ ಬಹಿಷ್ಕಾರ ಹಾಕಿದಾಗಿನಿಂದ ತಮ್ಮನ್ನು ಮದುವೆ ಮತ್ತು ಇತರ ಸಾಮಾಜಿಕ ಸಮಾರಂಭಗಳು, ಕಾರ್ಯಕ್ರಮಗಳಲ್ಲಿ ಒಳಗೊಳ್ಳುತ್ತಿಲ್ಲ” ಎಂದು ಸಂತ್ರಸ್ತ ಕುಟುಂಬಗಳು ಆರೋಪಿಸಿವೆ.

ಈ ವರದಿ ಓದಿದ್ದೀರಾ?: ಜಾತಿ ದೌರ್ಜನ್ಯ | ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ದೂರು ದಾಖಲಿಸಿಕೊಂಡಿರುವ ಎಸ್‌ಪಿ ಆಗಮ್ ಜೈನ್‌, “ನಾವು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಗಾಗಿ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸಂತ್ರಸ್ತರು ಜಿಲ್ಲಾಧಿಕಾರಿಗೂ ದೂರು ನೀಡಿದ್ದಾರೆ. ಸ್ಥಳೀಯರ ಅಧಿಕಾರಿಗಳು ಇತ್ತೀಚೆಗೆ ಗ್ರಾಮಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ಆದರೂ, ಸಮಸ್ಯೆ ಬಗೆಹರಿದಿಲ್ಲ. ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...